Udayavni Special

ಪೌರತ್ವ ತಿದ್ದುಪಡಿ ಕಾಯ್ದೆ ಬೇಡ

Team Udayavani, Feb 12, 2020, 1:15 PM IST

gadaga-tdy-3

ಸಾಂಧರ್ಬಿಕ ಚಿತ್ರ

ಶಿರಹಟ್ಟಿ: ಭಾರತದಲ್ಲಿ ಹಿಂದೂ ಮುಸ್ಲಿಂ ಸೇರಿದಂತೆ ಸರ್ವ ಸಮುದಾಯದ ಜನರು ಜೇನಿನಗೂಡಿನಂತೆ ಬದುಕುತ್ತಿದ್ದಾರೆ. ಇಂತಹ ಜನರನ್ನು ಜಾತಿ ಹೆಸರಿನಲ್ಲಿ ಒಡೆದು ಆಳುವ ತಂತ್ರವನ್ನು ಕೇಂದ್ರ ಸರ್ಕಾರ ಅನುಸರಿಸುತ್ತಿದ್ದು, ದೇಶದಲ್ಲಿ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆ ಜಾರಿಗೆ ತರುವುದರ ಮೂಲಕ ಜಾತಿ ರಾಜಕಾರಣ ಮಾಡುತ್ತಿದೆ. ಜೊತೆಗೆ ದೇಶದ ಆಶಯಗಳನ್ನು ಕಗ್ಗೊಲೆ ಮಾಡಿದ ಕೇಂದ್ರದ ನೀತಿಗೆ ಧಿಕ್ಕಾರ ಎಂದು ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದ ಆವರಣದಲ್ಲಿ ಕಾಂಗ್ರೆಸ್‌ ಮುಖಂಡರು ಹಾಗೂ ಸಾರ್ವಜನಿಕರ ವತಿಯಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ಕಾಯ್ದೆ ಜಾರಿಗೆ ತರಬಾರದೆಂದು ಆಗ್ರಹಿಸಿ ತಹಶೀಲ್ದಾರ್‌ ಯಲ್ಲಪ್ಪ ಗೋಣೆಣ್ಣವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಭಾರತವು ಸಹಿಷ್ಣತೆ ಹಾಗೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಇಂತಹ ಪವಿತ್ರ ನಾಡಿನಲ್ಲಿ ಜನವಿರೋಧಿ ಹಾಗೂ ಸಂವಿಧಾನ ವಿರೋಧಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೆ ತರುವುದರ ಮೂಲಕ ಜನರ ಭಾವನೆ ಮತ್ತು ಭಾವೈಕ್ಯತೆಗೆ ಚ್ಯುತಿ ತರಲು ಬಿಜೆಪಿ ಹವಣಿಸುತ್ತಿದೆ. ಆದ್ದರಿಂದ ರಾಷ್ಟ್ರಪತಿಗಳು ಈ ಕಾಯ್ದೆ ಜಾರಿ ಮಾಡಬಾರದು. ಈ ಕಾಯ್ದೆಯಿಂದ ಅಲ್ಪಸಂಖ್ಯಾತರು, ದಲಿತರು, ಬುಡುಕಟ್ಟು ಜನಾಂಗ ಸೇರಿದಂತೆ ಇನ್ನೂ ಹಲವು ಧರ್ಮದವರನ್ನು ಹತ್ತಿಕ್ಕಲು ಮತ್ತು ಶೋಷಣೆಗೆ ಒಳಗಾಗುತ್ತಾರೆ. ಈಗಾಗಲೇ ಆಸ್ಸಾಂ ರಾಜ್ಯದಲ್ಲಿ ಈ ಕಾಯ್ದೆಯಿಂದ ಸಾಕಷ್ಟು ಆಸ್ತಿಪಾಸ್ತಿ ಹಾಗೂ ಜೀವ ಹಾನಿಯಾಗಿದೆ. ಇದೇ ರೀತಿ ದೇಶದಲ್ಲಿ ಜಾರಿಯಾದರೆ ಜನರ ಆಸ್ತಿ ಸೇರಿದಂತೆ ದೇಶದ ಆರ್ಥಿಕ ಪ್ರಗತಿಗೆ ಕಂಟಕವಾಗುತ್ತದೆ ಎಂದರು.

ನಜೀರ ಡಂಬಳ, ಎ.ವೈ. ನವಲಗುಂದ, ಎಂ.ಆರ್‌. ಘಂಟಿ ಮಾತನಾಡಿ, ದೇಶವನ್ನು ಅಭಿವೃದ್ಧಿಪಡಿಸುತ್ತೇವೆ. ದೇಶಕ್ಕೆ ಒಳ್ಳೆ ದಿನಗಳು ಬರುತ್ತವೆ ಎಂದು ಬುರೆಡೆ ಬಿಟ್ಟು, ದೇಶವನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಅಧೋಗತಿಯತ್ತ ತಳ್ಳಿದ್ದ ಅಪಕೀರ್ತಿ ಪ್ರಧಾನಿ ನರೇಂದ್ರ ಮೋದಿ ಹೊತ್ತಿದ್ದಾರೆ ಎಂದು ದೂರಿದರು.

ಎಚ್‌.ಡಿ. ಮಾಗಡಿ, ವೈ.ಎಸ್‌. ಪಾಟೀಲ, ಮಾಲತೇಶ ದಶಮನಿ, ಬುಡನಶ್ಯಾ ಮಕಾಂದರ, ಇಸಾಕ್‌ ಆದ್ರಳ್ಳಿ, ಅಶರತಲಿ ಢಾಲಾಯಿತ, ಪರಮೇಶ ಪರಬ, ನಜೀರ್‌ ಡಂಬಳ, ಎ.ವೈ. ನವಲಗುಂದ, ರಾಜೇಸಾಬ್‌ ಢಾಲಾಯಿತ, ಮೋಲಾನ ಮುಜಾವರ, ಮಾಬುಸಾಬ್‌  ಸೇರಿದಂತೆ ಪಟ್ಟಣದ ಮುಖಂಡರು ಇದ್ದರು.

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijaya Dashami celebration

ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

gadaga news

ಉ.ಪ್ರ. ರೈತರ ಹತ್ಯೆಗೆ ಆಕ್ರೋಶ

gadaga news

ಹದಿಹರೆಯದವರಲ್ಲಿ ದೈಹಿಕ ಬದಲಾವಣೆ ಸಹಜ

gadaga news

ಜನರ ಮನೆ ಬಾಗಿಲಿಗೇ ಜಿಲ್ಲಾಡಳಿತ

ghgfhtyuy

ಸೂರ್ಯಕಾಂತಿಗೆ ಕೀಟಬಾಧೆ : ರೈತರಿಗೆ ಸಂಕಷ್ಟ  

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.