ಗ್ರಾಮೀಣ ಬ್ಯಾಂಕ್‌ ನೌಕರರಿಗೆ ಸೌಲಭ್ಯ ಕಲ್ಪಿಸಿ

Team Udayavani, Nov 2, 2018, 4:33 PM IST

2-november-20.gif

ಗದಗ: ವಾಣಿಜ್ಯ ಬ್ಯಾಂಕ್‌ಗಳ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಗ್ರಾಮೀಣ ಬ್ಯಾಂಕ್‌ಗಳ ನೌಕಕರಿಗೆ ನೀಡಬೇಕೆಂದು ಒತ್ತಾಯಿಸಿ ಕಳೆದ 15 ವರ್ಷಗಳಿಂದ ನಿರಂತರವಾಗಿ ನಡೆಸುತ್ತಿರುವ ಹೋರಾಟದ ಫಲವಾಗಿ ನಿವೃತ್ತಿ ವೇತನ ಜಾರಿಗೊಂಡಿದೆ. ಇದು ಬ್ಯಾಂಕ್‌ ನೌಕರರ ಹೋರಾಟಕ್ಕೆ ಸಂದ ಜಯ ಎಂದು ಎನ್‌ಎಫ್‌ಆರ್‌ಆರ್‌ಬಿಇ ಅಧ್ಯಕ್ಷ ಎಚ್‌. ನಾಗಭೂಷಣ ರಾವ್‌ ಹೇಳಿದರು.

ಜಂಟಿ ಕ್ರಿಯಾ ಸಮಿತಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ನೌಕಕರ ಹಾಗೂ ಅಧಿಕಾರಿಗಳ ಸಂಘದಿಂದ ನಗರದಲ್ಲಿ ಗುರುವಾರ ನಡೆದ ‘ಪೆನ್ಶನ್‌ ವಿಜಯೋತ್ಸವ’ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿವೃತ್ತಿ ವೇತನಕ್ಕಾಗಿ ಕಳೆದ ಒಂದೂವರೆ ದಶಕದಿಂದ ಸಾರ್ವಜನಿಕ ಹಾಗೂ ಕಾನೂನು ಹೋರಾಟದ ಫಲವಾಗಿ ನ್ಯಾಯಾಲಯ ಈ ಆದೇಶ ನೀಡಿದೆ ಎಂದು ತಿಳಿಸಿದರು.

ಗ್ರಾಮೀಣ ಬ್ಯಾಂಕ್‌ ನೌಕರರ ಇತರೆ ಬೇಡಿಕೆಗಳ ಈಡೇರಿಕೆಗೆ ಸಂಘಟನೆ ಬಲಪಡಿಸಬೇಕು. ಬ್ಯಾಂಕಿಂಗ್‌ ವಲಯವನ್ನು ಉಳಿಸುವುದರೊಂದಿಗೆ ವೈಯಕ್ತಿಕ ಜೀವನಕ್ಕೆ ಅಗತ್ಯವಿರುವ ಬೇಡಿಕೆಗಳಿಗೆ ಹೋರಾಡಬೇಕು ಎಂದರು. ಎಕೆಜಿಬಿಇಎಫ್‌ ಪ್ರಧಾನ ಕಾರ್ಯದರ್ಶಿ ವಿ.ಕೆ.ಬನ್ನಿಗೋಳ ಮಾತನಾಡಿ, ಸಂಘವು ಉದ್ಯೋಗಿಗಳ ಪರವಾಗಿ ಕೆಲಸ ಮಾಡುತ್ತಿದೆ. ಸರಕಾರದ ಉದ್ಯೋಗಿಗಳ ವಿರುದ್ಧದ ಧೋರಣೆಗಳನ್ನು ನೇರವಾಗಿ ಖಂಡಿಸುತ್ತಿದೆ. ಯುವ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸಂಘಟನೆಯೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಎಸ್‌.ಎನ್‌. ಸವದತ್ತಿ ಅಧ್ಯಕ್ಷತೆ ವಹಿಸಿದ್ದರು.

ಜಿ.ಎಂ. ವೈದ್ಯ, ಗಣಪತಿ ಹೆಗಡೆ, ಎಲ್‌. ಎಸ್‌. ಲೋಕರೆ, ಆರ್‌.ಡಿ. ಸೂಗೂರ, ಎಚ್‌.ಎ. ಪಾಟೀಲ, ಸಂತೋಷ ವಡೆಯರ, ರಾಜು ಭಜಂತ್ರಿ, ವಿಶ್ವನಾಥ ರೆಡ್ಡಿ, ಎಸ್‌.ಜಿ. ಹೊಂಬಳ, ಸಿದ್ರಾಮಯ್ಯ ಹಿರೇಮಠ ಉಪಸ್ಥಿತರಿದ್ದರು. ಸಮಾರಂಭ ಆರಂಭಕ್ಕೂ ಮುನ್ನ ಲಿಂ.ಜ.ತೋಂಟದ ಸಿದ್ಧಲಿಂಗ ಶ್ರೀಗಳ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು. ಟಿ.ಆರ್‌. ಹಟ್ಟಿ ಸ್ವಾಗತಿಸಿದರು. ಪ್ರವೀಣ ಅಣ್ಣಿಗೇರಿ ನಿರೂಪಿಸಿದರು. ವಿ.ಎಸ್‌.ನರೇಗಲ್‌ ವಂದಿಸಿದರು.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Gadag; ಉಪಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ಬಾಡಿಗೆ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಣೆ; 25 ವಸತಿ ನಿಲಯಗಳಿಗಿಲ್ಲ ಸ್ವಂತ ಕಟ್ಟಡ

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

ರೋಣ: ಹಸಿರು ಪೈರಿಗೆ ಜಿಂಕೆಗಳ ದಾಂಗುಡಿ; ರೈತ ಕಂಗಾಲು

Gadag; Gadag rural station CPI suspended due to dereliction of duty

Gadag; ಕರ್ತವ್ಯ ಲೋಪ ಹಿನ್ನೆಲೆ ಗದಗ ಗ್ರಾಮೀಣ ಠಾಣೆ ಸಿಪಿಐ ಸಸ್ಪೆಂಡ್

ಭಾರಿ ಮಳೆಗೆ ಮರದ ಬಳಿ ನಿಂತ್ತಿದ್ದವರಿಗೆ ಬಡಿದ ಸಿಡಿಲು… ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

ಭಾರಿ ಮಳೆಗೆ ಮರದ ಬಳಿ ನಿಂತಿದ್ದವರಿಗೆ ಬಡಿದ ಸಿಡಿಲು… ಓರ್ವ ಮೃತ್ಯು, ಇನ್ನೋರ್ವನಿಗೆ ಗಾಯ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.