ಬಾಕಿ ವೇತನ ಬಿಡುಗಡೆ ಮಾಡಿ

Team Udayavani, Dec 28, 2019, 12:46 PM IST

gadaga-tdy-1

ಗದಗ: ಕೆಲಸದಿಂದ ತೆರವುಗೊಳಿಸಿರುವ ಹಾಸ್ಟೆಲ್‌ ಹೊರ ಸಂಪನ್ಮೂಲ ಸಿಬ್ಬಂದಿಯನ್ನು ಮತ್ತೆ ಸೇವೆಯಲ್ಲಿ ಮುಂದುವರಿಸಬೇಕು. ನೌಕರರ ಬಾಕಿ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನೂರಾರು ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ರತ್ನಮ್ಮ ಹೊಸಮನಿ ಅವರಿಗೆ ಮನವಿ ಸಲ್ಲಿಸಿ, ಕಳೆದ 2019 ಆಗಸ್ಟ್‌ ತಿಂಗಳ 21, 22ರಂದು ಹಾಸ್ಟೆಲ್‌ ಹೊರ ಸಂಪನ್ಮೂಲ ಸಿಬ್ಬಂದಿಯನ್ನು ಸೇವೆಯಲ್ಲಿ ಮುಂದುವರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಸ್ವಾತಂತ್ರ್ಯಉದ್ಯಾನವನದಲ್ಲಿ ಧರಣಿ ನಡೆಸಲಾಗಿದೆ.

ಅಂದು ಉಪ ಮುಖ್ಯಮಂತ್ರಿ ಡಾ| ಸಿ.ಎನ್‌. ಅಶ್ವಥನಾರಾಯಣ ಅವರು ಧರಣಿ ಸ್ಥಳಕ್ಕೆ ಆಗಮಿಸಿ, ಸಿಬ್ಬಂದಿಗಳ ಸೇವೆಯನ್ನು ತಕ್ಷಣಕ್ಕೆ ಒಂದು ತಿಂಗಳು ಮುಂದುವರಿಸಲಾಗುವುದು. ಮುಂದಿನ ಅವಧಿಗೆ ಅವರ ಸೇವೆಯನ್ನು ಪಡೆಯುವ ಬಗ್ಗೆ ತೀರ್ಮಾನಿಸಲಾಗುವುದೆಂದು ಭರವಸೆ ನೀಡಿದ್ದರು. ಆದರೆ, 2019ರ ಅಕ್ಟೋಬರ್‌ ತಿಂಗಳ 15, 16ರಂದು ಮತ್ತೂಮ್ಮೆ ಧರಣಿ ನಡೆಸಿದಾಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ರಾಮಲು ಅವರು ಕೊಟ್ಟ ಭರವಸೆಯೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೊರ ಸಂಪನ್ಮೂಲ ಸಿಬ್ಬಂದಿ ಸೇವೆಯನ್ನು ಆರು ತಿಂಗಳ ಅವಧಿಗೆ ಈ ಹಿಂದೆ 2 ಸಲ ವಿಸ್ತರಿಸಲಾಗಿದ್ದು, ಆ ತಿಂಗಳುಗಳಲ್ಲಿ ಮಾಡಿದ ಕೆಲಸಕ್ಕೆ ಇದುವರೆಗೂ ವೇತನ ಸಂದಾಯವಾಗಿಲ್ಲ. ಇದೇ ಕೆಲಸವನ್ನು ನಂಬಿರುವ ನೌಕರರ ಕುಟುಂಬಗಳು ಇದೀಗ ಬೀದಿಗೆ ಬರುವಂತಾಗಿದೆ. ಹೀಗಾಗಿ ತಕ್ಷಣವೇಬಾಕಿ ವೇತನ ಸಂದಾಯ ಮಾಡಿ ನಿವೃತ್ತಿವರೆಗೂ ತಮ್ಮನ್ನು ಕೆಲಸದಲ್ಲಿ ಮುಂದುವರಿಸಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಪೀರು ರಾಠೊಡ, ಹನಮವ್ವ ಹೀರೆಮನಿ, ಮುತ್ತುರಾಜ ಮಾದರ, ಶಾಚಿತವ್ವ ಚಟ್ಟಿ, ಕಲ್ಲಮ್ಮ ಮ್ಯಾಗೇರಿ, ಮುದಕವ್ವ ನೀಲಣ್ಣವರ, ಎಸ್‌.ಎಂ. ಕ್ವಾಟಿ, ಶಂಕವ್ವ ಕೆ.ಅಡವಿ, ಗೀರಿಜವ್ವ ವಗ್ಗರ, ಮಾತೇಶ ಶಹರಸೂರಿ, ಚನ್ನವ್ವ ಗದ್ದಿ, ಸತೀಶ ವೀರನಗೌಡ್ರ ಕುರಡ್ಡಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.