ಸಂಬಳಕ್ಕಾಗಿ ಭದ್ರತಾ ಸಿಬ್ಬಂದಿ ಉಪವಾಸ ಸತ್ಯಾಗ್ರಹ

Team Udayavani, Apr 2, 2022, 5:06 PM IST

19

ಲಕ್ಷ್ಮೇಶ್ವರ: ತಾಲೂಕಿನ ಗೊಜನೂರು ಗ್ರಾಮದ ಗುಡ್ಡದಲ್ಲಿರುವ ಗಾಳಿ ವಿದ್ಯುತ್‌ ಕಂಪನಿಯೊಂದರಲ್ಲಿ ಭದ್ರತಾ ರಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ 7 ಜನ ಸಿಬ್ಬಂದಿ ಕಳೆದ 8 ತಿಂಗಳ ಬಾಕಿ ಸಂಬಳ ನೀಡಬೇಕೆಂದು ಆಗ್ರಹಿಸಿ ಗುರುವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕಳೆದ 6-7 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಭದ್ರತಾ ರಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಸೋಮಣ್ಣ ಮುಶಪ್ಪನವರ, ರಮೇಶ ಸತ್ಯನಾಯ್ಕರ್‌, ಆನಂದ ಬಳಿಗಾರ, ಪ್ರದೀಪ ಬತ್ತಿಯವರ, ಶಿವಾನಂದ ಹೊಟ್ಟಿ, ಮಹೇಶ ಶಿರಹಟ್ಟಿ, ಮಹೇಶ ಪರಸಣ್ಣವರ ಎನ್ನುವ 7 ಜನ ಭದ್ರತಾ ರಕ್ಷಕರು ಧರಣಿ ನಡೆಸುತ್ತಿದ್ದಾರೆ.

ಕಾರಣವೇನು?: ಗೊಜನೂರು ಗುಡ್ಡದ ವಿದ್ಯುತ್‌ ಕಂಪನಿಯವರು ಘಟಕ ನಿರ್ವಹಣೆಗಾಗಿ ವರ್ಷದ ಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿ ನೇಮಿಸಿಕೊಂಡಿದ್ದಾರೆ. ಆಂಧ್ರ ಮೂಲದ ಗುತ್ತಿಗೆದಾರ ಕಂಪನಿಯವರು ಕಳೆದ 8 ತಿಂಗಳಿಂದ ಇಲ್ಲಿ ಕಾರ್ಯನಿರ್ವಹಿಸುವ 7 ಜನ ಭದ್ರತಾ ಸಿಬ್ಬಂದಿಗೆ ಸಂಬಳವನ್ನೇ ಪಾವತಿಸಿಲ್ಲ. ಇದರಿಂದ, ಪ್ರತಿ ತಿಂಗಳು ಬರುವ ಸಂಬಳದ ಮೇಲೆಯೇ ಕುಟುಂಬ ನಿರ್ವಹಣೆ ಮಾಡುವ ಸಿಬ್ಬಂದಿ ಸಂಬಳಕ್ಕಾಗಿ ಪರಿತಪಿಸುತ್ತಿದ್ದಾರೆ.

ಅಲ್ಲದೇ, ಸಂಬಳಕ್ಕಾಗಿ ಗುತ್ತಿಗೆ ಏಜೆನ್ಸಿ ಮತ್ತು ಕಂಪನಿಯವರಲ್ಲಿ ಅಂಗಲಾಚುತ್ತಿದ್ದಾರೆ. ಈ ನಡುವೆ ಕಳೆದ ಫೆಬ್ರವರಿಯಲ್ಲಿಯೇ ಗುತ್ತಿಗೆದಾರ ಏಜೆನ್ಸಿಯವರೊಂದಿಗಿನ ಕಂಪನಿಯವರ ಒಡಂಬಡಿಕೆ ಅವಧಿ ಮುಗಿದಿದೆ ಎನ್ನಲಾಗುತ್ತಿದೆ.

ಇದರಿಂದ ಏನೂ ತಿಳಿಯಲಾರದ ಸ್ಥಿತಿಯಲ್ಲಿರುವ ಸಿಬ್ಬಂದಿ 2 ದಿನಗಳಿಂದ ಧರಣಿ ನಡೆಸಿದ್ದಾರೆ. ಈ ಕುರಿತು ಪವರ್‌ ಕಂಪನಿಯವರನ್ನು ಸಂಪರ್ಕಿಸಲಾಗಿ, ಒಡಂಬಡಿಕೆಯಂತೆ ಗುತ್ತಿಗೆದಾರರಿಗೆ ನಾವು ವರ್ಷದ ಆರಂಭದಲ್ಲಿಯೇ ಸಂಪೂರ್ಣ ಗುತ್ತಿಗೆ ಹಣ ಪಾವತಿಸಿದ್ದೇವೆ. ಸಿಬ್ಬಂದಿ ಸಂಬಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎನ್ನುತ್ತಿದ್ದಾರೆ. ಇನ್ನು ಗುತ್ತಿಗೆದಾರ ಏಜೆನ್ಸಿಯರ್ಯಾರೂ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬುದು ಧರಣಿ ನಿರತರ ಆರೋಪ.  ಪ್ರತಿಭಟನಾ ಸ್ಥಳಕ್ಕೆ ಪಿಎಸ್‌ಐ ಪ್ರಕಾಶ ಡಿ. ಭೇಟಿ ನೀಡಿ ಮಾಹಿತಿ ಪಡೆದರು.

ಪ್ರತಿ ತಿಂಗಳ ಸಂಬಳದ ಮೇಲೆಯೆ ಕುಟುಂಬ ನಡೆಸುವ ನಮಗೆ 8 ತಿಂಗಳಿಂದ ಸಂಬಳವಿಲ್ಲದ್ದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಪಗಾರ ಬರುತ್ತದೆಂದು ಅಲ್ಲಲ್ಲಿ ಮಾಡಿದ ಸಾಲ ತೀರಿಸಲಾಗದೇ ತೊಂದರೆಗೆ ಸಿಲುಕಿದ್ದೇವೆ. ಇದೀಗ ಸಂಬಳವೂ ಇಲ್ಲ, ಕೆಲಸವೂ ಇಲ್ಲದೇ ಪರಿಸ್ಥಿತಿ ಚಿಂತಾಜನಕವಾಗಿದೆ. ಕಂಪನಿಯವರು ಮತ್ತು ಗುತ್ತಿಗೆದಾರರು ತಮಗೆ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಯುಗಾದಿ ಹಬ್ಬದ ಮರುದಿನದಿಂದ ಕುಟುಂಬ ಸಮೇತರಾಗಿ ಪ್ರತಿಭಟನೆ ನಡೆಸುತ್ತೇವೆ. –ಸೋಮಣ್ಣ ಮುಶಪ್ಪನವರ, ಭದ್ರತಾ ಸಿಬ್ಬಂದಿ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.