ಬೆಳಗಾವಿಯಲ್ಲಿ ಅ. 2ರಂದು ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಶನಲ್ 9ನೇ ಅಧಿವೇಶನ: ಎಚ್. ವಿಶ್ವನಾಥ

Team Udayavani, Sep 4, 2023, 3:43 PM IST

ಬೆಳಗಾವಿಯಲ್ಲಿ ಅ. 2ರಂದು ಶೆಫರ್ಡ್ಸ್ ಇಂಡಿಯಾ ಇಂಟರ್ನ್ಯಾಶನಲ್ 9ನೇ ಅಧಿವೇಶನ: ಎಚ್. ವಿಶ್ವನಾಥ

ಗದಗ: ಕುಂದಾ ನಗರಿ ಬೆಳಗಾವಿಯಲ್ಲಿ ಅ. 2 ಮತ್ತು 3ರಂದು ಎರಡು ದಿನಗಳ ಕಾಲ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ 9ನೇ ಅಧಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುರುಬ ಸಮುದಾಯವು ದೇಶದಲ್ಲಿ 12 ಕೋಟಿಗೂ ಅಧಿಕ ಸಂಖ್ಯೆಯಲ್ಲಿ ದ್ದು, ವಿವಿಧ ರಾಜ್ಯಗಳಲ್ಲಿ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಿದ್ದಾರೆ. ಒಂದು ಸಾಮಾನ್ಯ ಹೆಸರಿನಲ್ಲಿ ಕರೆಯಬೇಕು ಎಂಬ ಹಿನ್ನೆಲೆಯಲ್ಲಿ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ ಸಂಘಟನೆಯನ್ನು ಸ್ಥಾಪನೆ ಮಾಡಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯ, ಹರಿಯಾಣದ ರಾಜ್ಯಪಾಲ ಭಂಡಾರು ದತ್ತಾತ್ರೇಯ, ಯುಪಿ ಸಚಿವ ಆದಿತ್ಯ ಪಾಲ್ ಸೇರಿ ಸಮಾಜದ ಕೇಂದ್ರ ಸಚಿವರು ಹಾಗೂ ದೇಶೀಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಅಧಿವೇಶನದ ನಂತರ ಅ. 3ರಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಮಹಾತ್ಮ ಗಾಂಧಿ ಅವರ ಪ್ರಮುಖ ಆಹಾರವಾಗಿ ಆಡಿನ(ಕುರಿ) ಹಾಲು ಸೇವಿಸುತ್ತಿದ್ದ ಹಿನ್ನೆಲೆಯಲ್ಲಿಅವರ ಜನ್ಮದಿನವಾದ ಅ. 2ರಂದು‌ ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಶನಲ್ 9ನೇ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರತಿ ಸಮಾಜಕ್ಕೂ ರಾಜಕಾರಣ ಬೇಕು. ಯಾವ ಕಾರಣಕ್ಕೂ ಯಾರನ್ನೂ ಅಲ್ಲಗಳೆಯಬಾರದು. ಕುರುಬ ಸಮುದಾಯವು ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕು ಎನ್ನುವ ನಿಟ್ಡಿನಲ್ಲಿ, ದೇಶಾದ್ಯಂತ ಸಂಘಟನೆಯಾಗುತ್ತಿದೆ ಎಂದು ವಿವರಿಸಿದರು.

ಮಾಜಿ ಸಚಿವ ಎಚ್.ಎಂ. ರೇವಣ್ಣ ಮಾತನಾಡಿ, ಶೆಫರ್ಡ್ಸ್ ಇಂಡಿಯಾ ಇಂಟರನ್ಯಾಶನಲ್ ಸ್ಥಾಪಿತ ಅಧ್ಯಕ್ಷ ಎಚ್. ವಿಶ್ವನಾಥ ಅವರಾಗಿದ್ದಾರೆ. ಇಡೀ ಭಾರತದಲ್ಲಿ ಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರಿನಲ್ಲಿ ಕರೆಯಲ್ಪಡುವ ಕುರುಬ ಸಮಾಜದ ಸಮಾವೇಶದಲ್ಲಿ ರಾಜ್ಯದ ಅನೇಕ ಕಡೆಗಳಲ್ಲಿ ಸಮಾವೇಶ ಹಮ್ಮಿಕೊಂಡು ಒಗ್ಗಟ್ಟು ಪ್ರದರ್ಶನ ಮಾಡಲಾಗುತ್ತಿದೆ. ಜನತೆ ಒಗ್ಗೂಡಬೇಕು. ಸಮಾಜ ಎಲ್ಲ ಪ್ರಕಾರಗಳಲ್ಲಿ ಮುಂದೆ ಬರಬೇಕು ಎನ್ನುವ ನಿಟ್ಟಿನಲ್ಲಿ ಸಂಘಟನೆ ಮಾಡಲಾಗುತ್ತಿದೆ. ಅಧಿವೇಶನದಲ್ಲಿ ದೇಶದೆಕ್ಕೆಡೆ ಇರುವ ಸಮುದಾಯದ ಸಚಿವರು, ಸಂಸದರು, ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ನಾಗರಾಜ್, ವೈ.ಎನ್. ಗೌಡರ, ಫಕ್ಕೀರಪ್ಪ ಹೆಬಸೂರ, ವಾಸಣ್ಣ ಕುರಡಗಿ, ಬಾಬು ಡಿಗ್ಗಿಮನಿ, ಮಂಜುನಾಥ ಮುನವಳ್ಳಿ, ಶೇಖಣ್ಣ ಕಾಳೆ ಇದ್ದರು.

ಸಂಸದ ಸ್ಥಾನಕ್ಕೆ ಸ್ಪರ್ಧಿಸುವ ಬಯಕೆಯಿದೆ: ನಾನು ಹಿಂದೆ ಕೂಡ ಸಂಸದನಾಗಿದ್ದೆ, ಮುಂದೆ ಕೂಡ ಸಂಸದನಾಗುವ ಬಯಕೆ ಹೊಂದಿದ್ದೇನೆ. ಅವಕಾಶ ಸಿಕ್ಕರೆ ಮೈಸೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಹೇಳಿದರು.

ಮೈಸೂರು ಲೋಕಸಭೆ ಕ್ಷೇತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೂಡ ಕೇಳಿ ಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯತೀಂದ್ರ ಅವರು ಯುವಕರಾಗಿದ್ದು, ಅವರು ಸ್ಪರ್ಧಿಸುವುದಕ್ಕೆ ನನ್ನ ಅಭ್ಯಂತರವಿಲ್ಲ ಎಂಬುದಾಗಿಯೂ ತಿಳಿಸಿದರು.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.