ಶಿರಹಟ್ಟಿ ತಾಪಂ ಕೆಡಿಪಿ ಸಭೆಯಲ್ಲಿ ಮಹಾಮಾರಿ ಕೋವಿಡ್ ನದ್ದೇ ಮಾತು

Team Udayavani, Sep 8, 2020, 5:17 PM IST

ಶಿರಹಟ್ಟಿ ತಾಪಂ ಕೆಡಿಪಿ ಸಭೆಯಲ್ಲಿ ಮಹಾಮಾರಿ ಕೋವಿಡ್ ನದ್ದೇ ಮಾತು

ಶಿರಹಟ್ಟಿ: ಪಟ್ಟಣದ ತಾಪಂ ಸಾಮರ್ಥ್ಯ ಸೌಧದಲ್ಲಿ ತಾಪಂ ಅಧ್ಯಕ್ಷ ಈಶ್ವರಪ್ಪ ಲಮಾಣಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಹಲವು ವಿಷಯಗಳ ಚರ್ಚೆಯಾಗಿ ಬರೀ ಕೊರೊನಾ ಮಾತುಗಳೇ ಹೆಚ್ಚಾಗಿ ಕೇಳಿಬಂದವು.

ಈ ವೇಳೆ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಜೋಗಿ ಮಾತನಾಡಿ, ತಾಲೂಕಿನ ಪರಸಾಪುರ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟು 5 ದಿನ ಕಳೆದರೂ ಆರೋಗ್ಯ ಇಲಾಖೆ ಅಧಿ ಕಾರಿಗಳು ಸೋಂಕಿತ ವ್ಯಕ್ತಿಯನ್ನು ಕ್ವಾರಂಟೈನ್‌ ಮಾಡಿಲ್ಲ.ಅವರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಇಲಾಖೆ ವೈದ್ಯಾಧಿ ಕಾರಿಗಳು ನಿರ್ಲಕ್ಷ್ಯತೋರುತ್ತಿದ್ದಾ ರೆ. ಇದರಿಂದಾಗಿ ಸೋಂಕಿತ ವ್ಯಕ್ತಿ ನಿರ್ಭಯವಾಗಿ ಗ್ರಾಮದಲ್ಲಿ ಓಡಾಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ ಎಂದು ಸಭೆಗೆ ದೂರಿದರು.

ಈ ಪ್ರಕರಣವನ್ನು ತಾಲೂಕು ವೈದ್ಯಾಧಿಕಾರಿಗಳು ಮತ್ತು ಪೊಲೀಸ್‌ ಇಲಾಖೆ ಅಧಿಕಾರಿಗಳು ಸೋಂಕಿತ ವ್ಯಕ್ತಿಯನ್ನು ಕ್ವಾರಂಟೈನ್‌ಗೆ ಒಳಪಡಿಸಿ, ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಿಗೆ ಪೂರೈಸಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ(ಏಪ್ರಿಲ್‌ ನಿಂದ ಜುಲೈವರೆಗೆ) ಮಕ್ಕಳಿಗೆ ಆಹಾರ ಧಾನ್ಯ ವಿತರಿಸದಿದ್ದರೂ, ಬಿಲ್‌ ಪಾವತಿಸಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಪರಿಶೀಲಿಸುವಂತೆ ತಾಪಂ ಅಧ್ಯಕ್ಷ ಈಶ್ವರಪ್ಪ ಲಮಾಣಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಪ್ರಗತಿ ಕಾಲೋನಿ ಅಭಿವೃದ್ಧಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಅಳವಡಿಸಿರುವ ಹೈಮಾಸ್ಟ್‌ ವಿದ್ಯುತ್‌ ದೀಪಗಳು ಒಂದೇ ವರ್ಷದಲ್ಲಿ ಹಾಳಾಗಿವೆ. ಪರಿಣಾಮ ಸರ್ಕಾರದ ಲಕ್ಷಾಂತರ ರೂ. ಅನುದಾನ ಪೋಲಾಗಿದೆ. ಕಾಮಗಾರಿ ಗುತ್ತಿಗೆ ಸಂಸ್ಥೆ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ತಾಪಂ ಸದಸ್ಯ ತಿಪ್ಪಣ್ಣ ಕೊಂಚಿಗೇರಿ ಮನವಿ ಮಾಡಿದರು.

ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಪವಿತ್ರಾ ಎಸ್‌., ತಾಪಂ ಇಒ ನಿಂಗಪ್ಪ ಓಲೇಕಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.