ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

Team Udayavani, Aug 25, 2019, 10:52 AM IST

ಗಜೇಂದ್ರಗಡ: ಪೊಲೀಸ್‌ ಠಾಣೆಯಲ್ಲಿ ದಿಂಡೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಎಎಸ್‌ಐ ಎಚ್.ಎಲ್. ಭಜೇಂತ್ರಿ ಕಾನೂನು ಮಾಹಿತಿ ನೀಡಿದರು.

ಗಜೇಂದ್ರಗಡ: ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಹಾಗೂ ಮಾಹಿತಿ ನೀಡುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆಯು ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ದಿಸೆಯಲ್ಲಿ ಎಲ್ಲ ಮಕ್ಕಳು ಕಾನೂನಿನ ಬಗ್ಗೆ ಹೆಚ್ಚು ಗಮನ ಹರಿಸಿ ಕಾನೂನು ಪಾಲನೆಗೆ ಮುಂದಾಗಬೇಕು ಎಂದು ಎಎಸ್‌ಐ ಎಚ್.ಎಲ್. ಭಜೇಂತ್ರಿ ಹೇಳಿದರು.

ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸ್ಟೂಡೆಂಟ್ ಪೊಲೀಸ್‌ ಕೆಡೆಟ್ ಕಾರ್ಯಕ್ರಮದಡಿ ಸಮೀಪದ ದಿಂಡೂರ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಮಾಹಿತಿ ನೀಡಿದರು.

ಸಮಾಜದಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಹಾಗೂ ಬಾಲ್ಯ ವಿವಾಹಗಳಂತಹ ಪಿಡುಗುಗಳು ಕಾಡುತ್ತಿವೆ. ಹೀಗಾಗಿ ಮಕ್ಕಳಿಗೆ ಸಂವಿಧಾನ ನೀಡಿರುವ ಅತ್ಯಮುಲ್ಯ ಹಕ್ಕು ಉಲ್ಲಂಘನೆಯಾಗುತ್ತಿದೆ. ಪಾಲಕರು ತಮ್ಮ ಬದುಕಿನ ಭವಣೆ ನೀಗಿಸಿಕೊಳ್ಳಲು ಚಿಕ್ಕ ಮಕ್ಕಳನ್ನು ಕೆಲಸಗಳಿಗೆ ಕಳುಹಿಸುವುದನ್ನು ನಿಲ್ಲಿಸುವ ಸಂಕಲ್ಪ ತೊಟ್ಟು ಶಿಕ್ಷಣ ನೀಡಲು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ಪೊಲೀಸ್‌ ಇಲಾಖೆಯ ಕರ್ತವ್ಯ, ಬಾಲ ಕಾರ್ಮಿಕ, ಎಫ್‌ಐಆರ್‌, ಬಾಲ್ಯ ವಿವಾಹ ಹಾಗೂ ಮಕ್ಕಳ ಹಕ್ಕುಗಳು ಹಾಗೂ ಇಲಾಖೆ ಅಧಿಕಾರಿಗಳು ಬಳಸುವ ಪಿಸ್ತೂಲ್, ಗಣಕಯಂತ್ರ, ರೈಫಲ್, ಬಂದಿಖಾನೆ, ವಾಕಿಟಾಕಿ, ದಾಖಲಾತಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ನೀಡಿದರು.

ಪೊಲೀಸ್‌ ಸಿಬ್ಬಂದಿ ಎಸ್‌.ವಿ. ಮಂತಾ, ದಾದಾಖಲಂದರ ಆಶೆಖಾನ, ಗೀತಾ ಉಪ್ಪಾರ, ಚಂದ್ರು ಹಾದಿಮನಿ, ಸುರೇಶ ಗೊಂದಿ ಸೇರಿದಂತೆ ಇತರರು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು... 1. ವನ್ಯಜೀವಿ ತಜ್ಞ ಸ್ಟೀವ್‌ ಇರ್ವಿನ್‌ 1962ರ ಫೆಬ್ರವರಿ...

  • ಸೋಮವಾರಪೇಟೆ: ಕೊಡಗು ಪ್ಯಾಕೇಜ್‌ ಸೇರಿದಂತೆ ಇತರ ಯೋಜನೆಯಡಿ ತಾಲೂಕಿನಲ್ಲಿ ನಿರ್ಮಾಣ ವಾಗುತ್ತಿರುವ ರಸ್ತೆ ಕಾಮಗಾರಿಗಳು ಕಳಪೆಯಿಂದ ಕೂಡಿವೆ ಎಂದು ಆರೋಪಿಸಿದ...

  • ಗೊಗ್ಗಯ್ಯನ ಮೂಗು ಬೆಳೆಯುತ್ತಾ ಹೋಯಿತು. ಅದನ್ನು ಹೊತ್ತುಕೊಂಡು ತಿರುಗಾಡುವುದೇ ಕಷ್ಟವಾಗತೊಡಗಿತು. ಕಡೆಗೊಂದು ದಿನ ಅದಕ್ಕೆ ಪರಿಹಾರವೂ ಸಿಕ್ಕಿತು. ಆ ಹುಡುಗ...

  • ಉಡುಪಿ: ಬಿಸಿಲಿನ ಧಗೆ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದು, 35 ಡಿಗ್ರಿವರೆಗೆ ತಲುಪಿದೆ. ಮುಂದಿನ ದಿನಗಳಲ್ಲಿ ತಾಪಮಾನ ಇನ್ನೂ ಒಂದೆರಡು ಡಿಗ್ರಿ ಹೆಚ್ಚಳವಾಗುವ...

  • ರಾಮು ಆಟ- ಪಾಠಗಳಲ್ಲಿ ಬಹಳ ಜಾಣ. ಅವನು ತುಂಬಾ ತುಂಟನೂ ಆಗಿದ್ದ. ಶಾಲೆಯಲ್ಲಿ ಯಾವಾಗಲೂ ಏನಾದರೊಂದು ಕೀಟಲೆ ಮಾಡುತ್ತಿರುತ್ತಿದ್ದ. ರಾಮುವಿನ ತುಂಟಾಟ ಮಿತಿಮೀರಿದಾಗೆಲ್ಲಾ...