ಶೂನ್ಯ ಮಲೇರಿಯಾ ಗುರಿ ಯಶಸ್ಸಿಗೆ ಸಹಕರಿಸಿ

Team Udayavani, Jun 26, 2021, 10:20 AM IST

ಶೂನ್ಯ ಮಲೇರಿಯಾ ಗುರಿ ಯಶಸ್ಸಿಗೆ ಸಹಕರಿಸಿ

ಗದಗ: ದೇಶದಲ್ಲಿ 2025ಕ್ಕೆ ಮಲೇರಿಯಾ ರೋಗವನ್ನು ಶೂನ್ಯಕ್ಕೆ ತಲುಪಿಸುವ ಗುರಿ ಹೊಂದಲಾಗಿದೆ. ಹಾಗಾಗಿ, ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವಂತೆ ನೀರು ಸಂಗ್ರಹಗೊಳ್ಳದಂತೆ ಎಚ್ಚರ ವಹಿಸಬೇಕು. ಮನೆ ಹಾಗೂ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕೆಂದು ಆರೋಗ್ಯ ನಿರೀಕ್ಷಣಾಧಿಕಾರಿ ಎಸ್‌.ಎಸ್‌.ಲಿಂಗದಾಳ ಹೇಳಿದರು.

ತಾಲೂಕಿನ ಅಡವಿಸೋಮಾಪೂರ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರ ವ್ಯಾಪ್ತಿಯ ದೊಡ್ಡತಾಂಡೆ(ಜಲಶಂಕರ ನಗರ)ದಲ್ಲಿ ಯವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮಲೇರಿಯಾ ವಿರೋಧಿ ಮಾಸಾಚಾರಣೆ ಜಾಗೃತಿಯ ಜಾಥಾದಲ್ಲಿ ಮಾತನಾಡಿದರು.

ಮಲೇರಿಯಾ ಎಂಬ ರೋಗ ಅನಾಫಿಲಿಸ್‌ ಜಾತಿಯ ಹೆಣ್ಣು ಸೊಳ್ಳೆಗಳಿಂದ ಒಬ್ಬರಿಂದೊಬ್ಬರಿಗೆ ಹರಡಿತ್ತದೆ. ಚಳಿ, ನಂತರ ವಿಪರೀತ ಜ್ವರ, ಸ್ವಲ್ಪ ಹೊತ್ತಿನ ನಂತರ ಮೈಬೆವರುವುದು, ಮೈಕೈ ನೋವು ಮಲೇರಿಯಾ ಕಾಯಿಲೆಯ ಲಕ್ಷಣಗಳಾಗಿವೆ. ಅಂತಹ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಬೇಕು. ವೈದ್ಯರ ಸಲಹೆ ಮೇರೆಗೆ ರಕ್ತ ಪರೀಕ್ಷೆ ಮಾಡುವುದರ ಮೂಲಕ ಮಲೇರಿಯಾ ರೋಗವನ್ನು ಕಂಡು ಹಿಡಿಯಬಹುದು. ಅದಕ್ಕೆ ಸರಿಯಾಗಿ ಚಿಕಿತ್ಸೆ ಪಡೆದು, ಗುಣಮುಖರಾಗಬಹುದು ಎಂದು ತಿಳಿಸಿದರು. ಆರೋಗ್ಯ ನೀರಿಕ್ಷಣಾಧಿಕಾರಿ ಎಸ್‌.ಬಿ.ಗಡಾದ ಮಾತನಾಡಿ,

ಮನೆಯ ಸುತ್ತಮುತ್ತ ನೀರು ನಿಲ್ಲದ ಹಾಗೆ ಸ್ವಚ್ಛವಾಗಿಡಬೇಕು. ಮನೆಯ ಒಳಗೆ ನೀರು ತುಂಬುವ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛವಾಗಿ ತೊಳೆದು ಒಣಗಿಸಬೇಕು. ನೀರು ಸಂಗ್ರಹ ಪರಿಕರಗಳನ್ನು ಸದಾ ಮುಚ್ಚಿಡಬೇಕು. ಮನೆಯ ಕಿಟಕಿಗಳಿಗೆ ಜಾಲರಿಗಳನ್ನು ಬಳಸಬೇಕು. ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಬೇಕು. ಸಂಜೆ ಬೇವಿನ ಸೊಪ್ಪಿನ ಹೊಗೆ ಹಾಕಬೇಕು ಎಂದು ಸುರಕ್ಷತಾ ಕ್ರಮಗಳನ್ನು ವಿವರಿಸಿದರು.

ಗ್ರಾಪಂ ಸದಸ್ಯೆ ಸೀತವ್ವ ಲಮಾಣಿ, ಆರೋಗ್ಯ ನಿರೀಕ್ಷಣಾಧಿಕಾರಿ ಬಿ.ಸಿ.ಹಿರೇಹಾಳ, ಗೋಪಾಲ ರಾಠೊಡ, ಲಕ್ಷ್ಮಣ ರಾಠೊಡ, ಲಲಿತಾ ಅಂಗಡಿ, ಮಂಜಳಾ ಆರಿ, ಲಕ್ಷ್ಮೀ ಪೂಜಾರ, ಸುಮಿತ್ರಾ ಲಮಾಣಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.