3 ಸಾವಿರ ಯುನಿಟ್‌ ರಕ್ತ ಸಂಗ್ರಹ ಗುರಿ

ಪ್ರಧಾನಿ ಮೋದಿ ಜನ್ಮದಿನಕ್ಕೆ ಹತ್ತು-ಹಲವು ಕಾರ್ಯಕ್ರಮ; ಸಾಮಾಜಿಕ ಸೇವಾ ಕಾರ್ಯಕ್ಕೆ ಹೆಚ್ಚಿನ ಒತ್ತು

Team Udayavani, Sep 19, 2022, 3:35 PM IST

21

ಗದಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ನಿಮಿತ್ತ ಸೆ. 17ರಿಂದ ಅ. 2ರ ವರೆಗೆ ಜಿಲ್ಲೆಯ ನಾಲ್ಕು ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಸಾರ್ವಜನಿಕರಿಗೆ, ಬಡವರಿಗೆ ಹಾಗೂ ಪ್ರಕೃತಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಯೋಜನೆಗಳು ನಿರಂತರವಾಗಿ ನಡೆಯಲಿವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ ಹೇಳಿದರು.

ನಗರದಲ್ಲಿ ಬೃಹತ್‌ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸೆ. 17ರಂದು ನರಗುಂದ ವಿಧಾನಸಭಾ ಕ್ಷೇತ್ರ ಸೇರಿ ಜಿಲ್ಲೆಯಾದ್ಯಂತ ರಕ್ತದಾನದ ಮೂಲಕ 170 ಯುನಿಟ್‌ ಸಂಗ್ರಹಿಸಲಾಗಿದೆ. ಭಾನುವಾರವೂ ರಕ್ತದಾನ ನಡೆದಿದೆ, ಅ. 2ರ ವರೆಗೆ ರಕ್ತದಾನ ಶಿಬಿರಗಳು ಮುಂದುವರಿಯಲಿದ್ದು, ಜಿಲ್ಲೆಯಿಂದ 3 ಸಾವಿರ ಯುನಿಟ್‌ ರಕ್ತ ಸಂಗ್ರಹಿಸುವ ಹುರಿ ಹೊಂದಲಾಗಿದೆ ಎಂದು ಹೇಳಿದರು.

ಎಲ್ಲ ಪಕ್ಷಗಳಲ್ಲೂ ಅವರವರ ನಾಯಕರ ಜನ್ಮದಿನ ಆಚರಣೆ ನಡೆಯುತ್ತದೆ. ಆದರೆ, ಇದು ಬಿಜೆಪಿಯಲ್ಲಿ ಕೊಂಚ ಭಿನ್ನವಾಗಿದೆ. ನಾವಿಲ್ಲಿ ಕೇಕ್‌ ಕತ್ತರಿಸಿ, ಫ್ಲೆಕ್ಸ್‌ ಅಳವಡಿಸುವ ಬದಲಾಗಿ ಸೇವಾ ಕಾರ್ಯದ ಮೂಲಕ ಸ್ಮರಣೆ, ಸಮಾಜಕ್ಕೆ ಫಲ ನೀಡುವ ನಿಟ್ಟಿನಲ್ಲಿ “ಸೇವಾ ಪಾಕ್ಷಿಕ’ದ ಮೂಲಕ ಹತ್ತು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ನಾಚಿಕೆ ಬಿಟ್ಟು ರಾಜಕಾರಣ ಮಾಡಬಾರದು: ತೆಲಂಗಾಣದಲ್ಲಿ ಶೇ. 40 ಫ್ಲೆಕ್ಸ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಸಿ.ಸಿ. ಪಾಟೀಲ ಅವರು, ಶೇ. 40-50 ವಿಚಾರವಾಗಿ ಅಧಿವೇಶನದಲ್ಲಿ ಸಮರ್ಥವಾದ ತಕ್ಕ ಉತ್ತರ ಕೊಡುತ್ತೇವೆ. ಫ್ಲೆಕ್ಸ್‌ ಪ್ರದರ್ಶನದ ಹಿಂದೆ ಯಾರು ಇದ್ದಾರೆ ಅನ್ನೋದು ಗೊತ್ತು. ನಾಚಿಕೆ ಬಿಟ್ಟು ರಾಜಕಾರಣ ಮಾಡಬಾರದು ಎಂದು ಕಾಂಗ್ರೆಸ್‌ ವಿರುದ್ಧ ಸಚಿವ ಸಿ.ಸಿ. ಪಾಟೀಲ ಹರಿಹಾಯ್ದರು.

ಖರ್ಗೆ ಹೇಳಿಕೆಗೆ ಗರಂ: ರಾಜ್ಯದ ಆರ್ಥಿಕ ಪರಿಸ್ಥಿತಿ ಕುಸಿದು ಹೋಗಿದೆ. ಸರ್ಕಾರ ಸಾಲ ಮಾಡಿ ತುಪ್ಪ ತಿನ್ನುವ ಪರಿಸ್ಥಿತಿ ಬಂದಿದೆ ಎಂಬ ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಸಿ.ಸಿ. ಪಾಟೀಲ, ಯಾರಿಗೆ ಜೊಲ್ಲು ಸುರಿಸುವ ರೂಢಿ ಇರುತ್ತದೆ, ಅವರು ಜೊಲ್ಲು ಸುರಿಸುವ ಮಾತುಗಳನ್ನೇ ಮಾತಾಡುತ್ತಾರೆ ಎಂದು ಖರ್ಗೆ ಆರೋಪಕ್ಕೆ ತಿರಗೇಟು ನೀಡಿದರು.

ಇಷ್ಟು ವರ್ಷಗಳ ಕಾಲ ಹಿಂದುಳಿದ ಕರ್ನಾಟಕ ಎಂಬ ಹಣೆಪಟ್ಟಿ ಕಟ್ಟಿಕೊಂಡು ಅಪ್ಪ ತಪ್ಪಿದ್ರೆ ಮಗ, ಮಗ ತಪ್ಪಿದ್ರೆ ಅಪ್ಪ ಅಧಿಕಾರದಲ್ಲಿ ಅತ್ಯುನ್ನತ ಸ್ಥಾನ ಅಲಂಕರಿಸಿ, ಪಕ್ಷ ಅಧಿಕಾರಕ್ಕೆ ಬಂದಾಗ ಸತತ ಮಂತ್ರಿಯಾಗಿದ್ದುಕೊಂಡು ಯಾವ ಅಭಿವೃದ್ಧಿ ಮಾಡಿದ್ದಾರೆ. ಬಾಯಿ ಚಪ್ಪಲಕ್ಕೆ ಏನನ್ನಾದರೂ ಮಾತನಾಡಬಾರದು ಎಂದು ವಾಗ್ಧಾಳಿ ನಡೆಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಮುತ್ತನಗೌ‌ಡ ಲಿಂಗನಗೌಡ್ರ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವರಾಜಗೌಡ ಹಿರೇಮನಿಪಾಟೀಲ, ಮುಖಂಡರಾದ ರಾಜು ಕುರಡಗಿ, ಶ್ರೀಪತಿ ಉಡುಪಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.