ಶಿಕ್ಷಕಿಯರ ಕಿತ್ತಾಟ: ಉರ್ದು ಶಾಲೆಗೆ ಬೀಗ ಜಡಿದ ಪಾಲಕರು

Team Udayavani, Dec 6, 2018, 5:27 PM IST

6-december-22.gif

ಮುಳಗುಂದ: ವೈಯಕ್ತಿಕ ವಿಷಯಕ್ಕೆ ಹಲವು ದಿನಗಳಿಂದ ಶಿಕ್ಷಕಿಯರ ಮಧ್ಯೆ ನಡೆಯುತ್ತಿದ್ದ ಕಲಹದಿಂದ ಬೇಸತ್ತ ಪೋಷಕರು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಪಟ್ಟಣದ ಸರ್ಕಾರಿ ಉರ್ದು ಪ್ರೌಢಶಾಲೆಗೆ ಮಂಗಳವಾರ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಶಿಕ್ಷಕಿಯರಿಬ್ಬರು ವೈಯಕ್ತಿಕ ಕಲಹದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಇದರಿಂದ ಕಲಿಕೆಯಲ್ಲಿ ಹಿಂದುಳಿಯುವಂತಾಗಿದೆ. ಶಾಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಪರಸ್ಪರ ಕಿತ್ತಾಡುತ್ತಿರುವ ಶಿಕ್ಷಕಿಯರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನ.30ರಂದು ವೈಯಕ್ತಿಕವಾಗಿದ್ದ ಕಲಹ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಇಬ್ಬರನ್ನೂ ಸಮಾಧಾನಪಡಿಸಲು ಹೋದ ಶಿಕ್ಷಕಿಯೊಬ್ಬರಿಗೆ ಗಾಯವಾಗಿದೆ. ಇದು ಶಿಕ್ಷಣ ಇಲಾಖಾಧಿಕಾರಿಗಳ ಗಮನಕ್ಕೂ ಬಂದಿದೆ. ಇಲ್ಲಿ ನಡೆದಿರುವ ಘಟನೆಯನ್ನು ಲಿಖಿತವಾಗಿ ಶಿಕ್ಷಕಿಯೊಬ್ಬರು ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ. ಕೆಲ ಅಧಿಕಾರಿಗಳು ಬಂದು ವಿಚಾರಣೆ ನಡೆಸಿದರೂ ಶಿಕ್ಷಕರ ವಿರುದ್ಧ ಕ್ರಮ ಕೈಗೊಂಡಿಲ್ಲ. ಹೀಗಾಗಿ ಶಾಲೆಗೆ ಬೀಗ ಜಡಿದು ಪ್ರತಿಭಟಿಸಲಾಗುತ್ತಿದೆ ಎಂದು ಪಾಲಕರು ಹಾಗೂ ಮುಸ್ಲಿಂ ಸಮಾಜದ ಪ್ರಮುಖರು ತಿಳಿಸಿದರು.

ಮುಖ್ಯಶಿಕ್ಷಕರು ಇಷ್ಟೆಲ್ಲ ಅವಾಂತರ ನಡೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಿಕ್ಷಕಿಯರ ಮಧ್ಯೆ ಯಾವುದೇ ಕಲಹವಿದ್ದರೂ ಶಾಲಾ ಅವಧಿಯಲ್ಲಿ ತೋರದೇ ಮಕ್ಕಳ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ದೈಹಿಕ ಶಿಕ್ಷಣಾಧಿಕಾರಿ ಸಜ್ಜನ್‌ ಅವರು ಶಾಲೆಯಲ್ಲಿ ಉಂಟಾದ ಬೆಳವಣಿಗೆ ಕುರಿತು ವಿಚಾರಣೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪತಿಭಟನಾಕಾರರು ಶಾಲೆ ಬೀಗ ತೆರೆಯಲು ಒಪ್ಪಿಗೆ ನೀಡಿದರು. 

ಶಿಕ್ಷಕಿಯರು ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿ ಮೇಲಧಿಕಾರಿಗಳಿಗೆ ದೂರು ನೀಡುತ್ತಿದ್ದಾರೆ. ತರಗತಿಗಳು ನಡೆಯುವ ಅವಧಿಯಲ್ಲಿ ಶಿಕ್ಷಕಿಯರು ವಾಗ್ವಾದ ನಡೆಸುವುದು ತರವಲ್ಲ. ಇದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ತಪ್ಪು ಮಾಡಿರುವ ಶಿಕ್ಷಕಿಯರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು.
ತಾಜುದ್ದೀನ್‌ ಕಿಂಡ್ರಿ,
ಮುಸ್ಲಿಂ ಸಮುದಾಯದ ಮುಖಂಡ

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.