ಅಂಗವಿಕಲರಿಗೆ ಸೌಲಭ್ಯ ಒದಗಿಸುವುದು ಇಲಾಖೆ ಜವಾಬ್ದಾರಿ


Team Udayavani, Nov 23, 2019, 2:44 PM IST

gadaga-tdy-3

ಗದಗ: ಅಂಗವಿಕಲತೆ ಶಾಪವಲ್ಲ, ಅದನ್ನು ಮೀರಿ ಸ್ವಾಭಿಮಾನಿ ಬದುಕನ್ನು ಕಟ್ಟಿಕೊಳ್ಳಲು ಅವಕಾಶ ನೀಡಬೇಕು. ಅವರಿಗೆ ಅಗತ್ಯ ಸೌಲಭ್ಯ ಒದಗಿಸುವುದು ಪ್ರತಿಯೊಂದು ಇಲಾಖೆಯ ಜವಾಬ್ದಾರಿ ಎಂದು ರಾಜ್ಯ ಅಂಗವಿಕಲ ಅಧಿನಿಯಮದ ಆಯುಕ್ತ ವಿ.ಎಸ್‌. ಬಸವರಾಜು ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ನಗರ ಪ್ರದೇಶದ ಸ್ಥಳೀಯ ಸಂಸ್ಥೆಗಳ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಆರೋಗ್ಯ, ಪೊಲೀಸ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಶೇ. 40ಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರ ಪ್ರದೇಶಗಳಲ್ಲಿ ಅಂಗವಿಕಲರ ಸಂಖ್ಯೆ ಹೆಚ್ಚಿದ್ದು, ಅವರಿಗೆ ವಾಹನ ಸೌಲಭ್ಯ ಒದಗಿಸುವುದೇ ಮುಖ್ಯವಲ್ಲ. ಬದಲಾಗಿ ಪುನಚ್ಚೇತನ, ಸಬಲೀಕರಣದ ಮೂಲಕ ಅವರನ್ನು ಮುಖ್ಯವಾಹಿನಿಗೆ ಕರೆತರಬೇಕು. ಅದಕ್ಕಾಗಿ 1993ರ ಹಾಗೂ 2016ರ ಅಂಗವಿಕಲ ಕಾಯ್ದೆ ಯಥಾವತ್ತಾಗಿ ಅನುಷ್ಠಾನಗೊಳಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಸೂಚಿಸಿದರು.

ಎಲ್ಲ ಇಲಾಖೆಗಳು, ಸ್ಥಳೀಯ ನಗರಾಡಳಿತ ಸಂಸ್ಥೆಗಳು ತಮ್ಮ ಒಟ್ಟಾರೆ ಬಜೆಟ್‌ನಲ್ಲಿ ಶೇ. 5ರಷ್ಟು ಅನುದಾನ ಅಂಗವಿಕಲರಿಗಾಗಿ ಮೀಸಲಿಟ್ಟು ಅದನ್ನು ಬಳಸಬೇಕು. ಅದನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಾತ್ಮಕ ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ ಮೀಸಲಿರುವ ಶೇ. 5ರ ಅನುದಾನ ಬಳಕೆಯೊಂದಿಗೆ ಅವರಲ್ಲಿ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಪ್ರಯತ್ನಿಸಬೇಕು. 0-6 ವಯಸ್ಸಿನಲ್ಲಿರುವ ಮಕ್ಕಳನ್ನು ಗುರುತಿಸಿ ಅಗತ್ಯ ತರಬೇತಿ, ಮಾರ್ಗದರ್ಶನ ನೀಡಬೇಕು ಎಂದರು.

ಲಕ್ಷ್ಮೇಶ್ವರ ನಗರದಲ್ಲಿ ನಡೆಸಿದ ಸಮೀಕ್ಷೆಯಲ್ಲಿ 728 ಅಂಗವಿಕಲರನ್ನು ಗುರುತಿಸಲಾಗಿದ್ದು, ಮಕ್ಕಳು ಹಾಗೂ ವಯೋವೃದ್ಧರಿಗೆ ಶಿಕ್ಷಣ, ಅಗತ್ಯ ಉಪಕರಣ ಸೌಲಭ್ಯ ನೀಡಲಾಗಿದೆ ಎಂದು ವಿವರಿಸಿದರು. ಇದೇ ವೇಳೆ ಸಮರ್ಪಕವಾಗಿ ಅಂಗವಿಕಲ ಸಮೀಕ್ಷೆ ನಡೆಸದ ಗದಗ- ಬೆಟಗೇರಿ ನಗರಸಭೆಯ ಕಾರ್ಯವೈಖರಿ ಕುರಿತು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿ, ಶೀಘ್ರ ಸರಿಯಾದ ಕ್ರಮಕ್ಕೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಅಂಗವಿಕಲ ಅಧಿನಿಯಮದ ಉಪಾಯುಕ್ತ ಎಸ್‌.ಕೆ.ಪದ್ಮನಾಭ, ಅಂಗವಿಕಲ ಶಿಕ್ಷಣಸಂಸ್ಥೆಯ ಹಂಪಣ್ಣ, ಸೋಮನಾಥ ಮಹಾಜನ ಶೆಟ್ಟರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

Gadag; ನಮ್ಮದು ಬಡವರಿಗೆ ಬದುಕು ಕಟ್ಟಿ ಕೊಡುವ ಪ್ರಣಾಳಿಕೆ: ಬಸವರಾಜ ಬೊಮ್ಮಾಯಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Gadag; ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿ ಗದ್ದುಗೆಯ ದರ್ಶನಾಶೀರ್ವಾದ ಪಡೆದ ಶ್ರೀರಾಮುಲು

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

Naregal; ಪ್ರೇಮಿಯೊಂದಿಗೆ ನೇಣಿಗೆ ಶರಣಾದ ನವವಿವಾಹಿತೆ!

ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

Gadag; ವಚನಾನಂದ ಶ್ರೀಗಳ ಮಾತನ್ನು ಗಂಭೀರವಾಗಿ ಪರಿಗಣಿಸುತ್ತೇವೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.