ಹಸಿರು ಪಟಾಕಿ ಮಾಹಿತಿಯೇ ಇಲ್ಲ

Team Udayavani, Oct 27, 2019, 1:07 PM IST

gadaga-tdy-3

ಗದಗ: ವಾಯು ಹಾಗೂ ಶಬ್ಧ ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳನ್ನು ತ್ಯಜಿಸಿ, ಪರಿಸರ ಸ್ನೇಹಿಯಾಗಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಬೇಕು ಎಂಬ ಆದೇಶ ಜಿಲ್ಲೆಯಲ್ಲಿ ಘೋಷಣೆಗೆ ಸೀಮಿತವಾಗಿದೆ.

ಪರಿಸರಸ್ನೇಹಿ ದೀಪಾವಳಿ ಆಚರಣೆ ಬಗ್ಗೆ ಮಾಧ್ಯಮಗಳ ಮೂಲಕ ಜಿಲ್ಲಾಡಳಿತ ಒಂದಿಷ್ಟು ಜಾಗೃತಿ ಮೂಡಿಸವುದು, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪಟಾಕಿ ಸ್ಟಾಲ್‌ಗ‌ಳಿಗೆ ಭೇಟಿ ನೀಡಿ ಸಾಂಕೇತಿಕವಾಗಿ ಜನರಿಗೆ ಒಂದಷ್ಟು ಭಿತ್ತಿಪತ್ರ ವಿತರಿಸುವುದು ಮಾಡಿದೆ. ಹೊರತಾಗಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿಲ್ಲ. ಇನ್ನು, ಹಸಿರು ಪಟಾಕಿ(ಸುಧಾರಿತ ಕಡಿಮೆ ಮಾಲಿನ್ಯದ ಪಟಾಕಿಗಳು) ಬಗ್ಗೆ ಸ್ಥಳೀಯ ಜನರಿಗೆ ಮಾಹಿತಿಯೇ ಇಲ್ಲ.

ಏನಿದು ಹಸಿರು ಪಟಾಕಿ?: ಹೆಚ್ಚು ಶಬ್ಧ ಹಾಗೂ ಹೊಗೆಗೆ ಕಾರಣವಾಗುವ ರಾಸಾಯನಿಕಗಳ ಬದಲಾಗಿ, ಕಡಿಮೆ ಶಬ್ಧ ಹಾಗೂ ಹೊಗೆಯನ್ನು ಹೊರಸೂಸುವ ಪಟಾಕಿಗಳನ್ನು ತಯಾರಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಈ ವಿಧಾನದಲ್ಲಿ ತಯಾರಿಸಲಾಗುವ ಪಟಾಕಿಗಳನ್ನೇ ಹಸಿರು ಪಟಾಕಿಗಳು ಎಂದು ಕರೆಯಲಾಗುತ್ತದೆ. ಈಗಾಗಲೇ ಹಸಿರು ಪಟಾಕಿಗಳ ಉತ್ಪಾದನೆ ಶುರುವಾಗಿದೆ.

ಇಲ್ಲಿನ ವಿಡಿಎಸ್‌ಟಿಸಿ ಮೈದಾನ, ಟಾಂಗಾ ಕೂಟ ಸೇರಿದಂತೆ ನಗರದಲ್ಲಿ 16 ಮಳಿಗೆಗಳಲ್ಲಿ ಪಟಾಕಿಗಳನ್ನು ಮಾರಾಟ ಮಾಡಲಾಗುತ್ತದೆ. ಆ ಪೈಕಿ ಅಲ್ಲೊಂದು ಇಲ್ಲೊಂದು ಅಂಗಡಿಯಲ್ಲಿ ಹಸಿರು ಪಟಾಕಿಗಳು ಲಭ್ಯವಿದ್ದರೂ ಅವುಗಳಿಂದಾಗುವ ಉಪಯೋಗದ ಬಗ್ಗೆ ಜಿಲ್ಲೆಯ ವರ್ತಕರಿಗೂ ಸ್ಪಷ್ಟತೆ ಇಲ್ಲ. ಈ ಕುರಿತು ಯಾವೊಬ್ಬ ಅಧಿಕಾರಿಯೂ ಹೆಚ್ಚಿನ ತಿಳಿವಳಿಕೆ ನೀಡಿಲ್ಲ. ಅಲ್ಲದೇ, ಜಿಲ್ಲೆಯಲ್ಲಿ ದೀಪಾವಳಿಗಿಂತ ಗಣೇಶ ಚತುರ್ಥಿಗೆ ಹೆಚ್ಚಿನ ಪಟಾಕಿಗಳು ಮಾರಾಟಗೊಳ್ಳುತ್ತವೆ. ಗಣೇಶ ಹಬ್ಬಕ್ಕೆ ತಂದ ಪಟಾಕಿಗಳನ್ನೇ ಇದೀಗ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಹಸಿರು ಪಟಾಕಿಗಳು ಹೆಚ್ಚಿನ ಸಂಖ್ಯೆಯಲ್ಲಿಲ್ಲ. ಈ ಬಾರಿ ಬರ-ನೆರೆಯಿಂದ ಪಟಾಕಿ ವ್ಯಾಪಾರ ಕಡಿಮೆಯಾಗಿದೆ ಎನ್ನುತ್ತಾರೆ ಇಲ್ಲಿನ ವಿಡಿಎಸ್‌ ಟಿಸಿ ಮೈದಾನದಲ್ಲಿನ ಪಟಾಕಿ ಮಾರಾಟಗಾರರು.

ಯಾವಾಗ ಪಟಾಕಿ ಸಿಡಿಸಬೇಕು: ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿ ಪ್ರಕಾರ ರಾತ್ರಿ 8ರಿಂದ 10ರ ವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದೆ. ರಾತ್ರಿ 10ರಿಂದ ಬೆಳಗ್ಗೆ 6ರ ನಡುವೆ ಪಟಾಕಿ ಹಚ್ಚುವುದು ಅಪರಾಧವಾಗಿದೆ.ಆಸ್ಪತ್ರೆ, ವೃದ್ಧಾಶ್ರಮ, ಶಾಲಾ- ಕಾಲೇಜುಗಳ ವಸತಿ ನಿಲಯ, ಪ್ರಾಣಿ- ಪಕ್ಷಿ ಸಂಕುಲಕ್ಕೆ ಹಾನಿ ಯಾಗುವಂತೆ ಪಟಾಕಿ ಸಿಡಿಸುವುದೂ ಅಪರಾಧವಾಗಿದೆ.

ಇನ್ನು, ಪಟಾಕಿಗಳಿಂದ ಸಂಭವಿಸಬಹುದಾದಯಾವುದೇ ಬಗೆಯ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಅಗ್ನಿಶಾಮಕ ದಳ, ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅದರಂತೆ ಜಿಲ್ಲಾಸ್ಪತ್ರೆ, ತಾಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

-ವೀರೇಂದ್ರ ನಾಗಲದಿನ್ನಿ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.