ಮಲಪ್ರಭಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರರ ರಕ್ಷಣೆ

Team Udayavani, Sep 8, 2019, 5:44 PM IST

ಗದಗ: ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ನೆರೆಯ ಪರಿಸ್ಥಿತಿ ತಲೆದೋರಿದೆ. ಪ್ರವಾಹದಿಂದ ಉಕ್ಕಿ ಹರಿಯುತ್ತಿರುವ ಮಲಪ್ರಭಾ ಪ್ರವಾಹದಲ್ಲಿ ಸಿಲುಕಿ ಕೊಚ್ಚಿಹೋಗುತ್ತಿದ್ದ ಇಬ್ಬರು ಬೈಕ್ ಸವಾರರನ್ನು ಜೆಸಿಬಿ ಸಹಾಯದಿಂದ ರಕ್ಷಿಸಲಾಗಿದೆ. ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಈ ಘಟನೆ ನಡೆದಿದ್ದು ಜೆಸಿಬಿ ಚಾಲಕನ ಸಮಯ ಪ್ರಜ್ಞೆ ಈ ಇಬ್ಬರು ಯುವಕರ ಪ್ರಾಣವನ್ನು ಕಾಪಾಡುವಲ್ಲಿ ನೆರವಾಗಿದೆ.

ಬದಾಮಿ ಕಡೆಯಿಂದ ಕೊಣ್ಣೂರು ಗ್ರಾಮಕ್ಕೆ ಬೈಕ್‌ ನಲ್ಲಿ ಬರುತ್ತಿದ್ದ ಉಮೇಶ್ ಹಾಗೂ ಪ್ರವೀಣ ಎಂಬ ಯುವಕರು ಪ್ರವಾಹಕ್ಕೆ ತುಂಬಿ ಹರಿಯುತ್ತಿದ್ದ ನದಿಯನ್ನೂ ಲೆಕ್ಕಿಸದೇ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಇವರಿದ್ದ ಬೈಕ್ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರ ಸಹಿತ ನೀರಿನಲ್ಲಿ ಕೊಚ್ಚಿ ಹೋಗಲಾರಂಭಿಸಿದರು.

ಇದನ್ನು ಗಮನಿಸಿದ ಅಲ್ಲೇ ಇದ್ದ ಜೆಸಿಬಿ ಚಾಲಕ ಸದ್ದಾಂ, ಜೆಸಿಬಿಯ ಎದುರು ಬಾಗವನ್ನು ಬೈಕ್‌ ಗೆ ಅಡ್ಡಗಟ್ಟಿದ್ದಾರೆ. ಇದನ್ನು ಹಿಡಿದುಕೊಂಡು ಈ ಯುವಕರು ನೀರಿನಿಂದ ಮೇಲೆ ಬಂದಿದ್ದಾರೆ. ಈ ರಕ್ಷಣಾ ಕಾರ್ಯದಲ್ಲಿ ಜೆಸಿಬಿ ಚಾಲಕನಿಗೆ ಸ್ಥಳದಲ್ಲಿ ನೆರೆದಿದ್ದವರೂ ಸಹ ಕೈಜೋಡಿಸಿದರು. ಇವರೆಲ್ಲರ ಸಂಘಟಿತ ಪ್ರಯತ್ನದಿಂದಾಗಿ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕರನ್ನು ಬೈಕ್ ಸಮೇತ ದಡ ಸೇರಿಸಲಾಯಿತು. ಜೆಸಿಬಿ ಚಾಲಕ ಸದ್ದಾಂ ಅವರ ಸಮಯ ಪ್ರಜ್ಞೆ ಇದೀಗ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಮಲಪ್ರಭಾ ನದಿ ನೀರು ಸರಾಗವಾಗಿ ಹರಿಯುವಂತಾಗಲು ಕೊಣ್ಣೂರಿನ ಸೇತುವೆ ಮೇಲಿನ ಮಣ್ಣು ಕಸದ ರಾಶಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ಈ ಜಿಸಿಬಿ ತೊಡಗಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಲಕ್ಷ್ಮೇಶ್ವರ: ಕೋವಿಡ್ 19 ವೈರಸ್‌ ಹರಡದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಾಲೂಕಾಡಳಿತ ಕಟ್ಟಿನಿಟ್ಟಿನ ಕ್ರಮಕೈಗೊಳ್ಳುತ್ತಿದ್ದರೂ ಜನರ ಅಸಹಕಾರ ಮುಂದುವರಿದಿದ್ದು,...

  • ಗದಗ: ಕೋವಿಡ್ 19 ವೈರಾಣು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಲಾಕ್‌ಡೌನ್‌ಗೆ ಜಿಲ್ಲೆಯ ಜನತೆ ದಿನದಿಂದ ದಿನಕ್ಕೆ ಒಗ್ಗಿಕೊಳ್ಳುತ್ತಿದ್ದಾರೆ....

  • ಗಜೇಂದ್ರಗಡ: ಪಟ್ಟಣದಲ್ಲಿ ಪುರಸಭೆ ವತಿಯಿಂದ ಸ್ಥಳೀಯ ಪ್ರಮುಖ ರಸ್ತೆಗಳಲ್ಲಿ ಮಂಗಳವಾರ ಕ್ರಿಮಿನಾಶಕ ಸಿಂಪಡಿಸಲಾಯಿತು. ಕೋವಿಡ್ 19 ವೈರಸ್‌ ಸೋಂಕಿತರು ಜಿಲ್ಲೆಗೆ...

  • ಮುಂಡರಗಿ: ಕೇಂದ್ರ, ರಾಜ್ಯ ಸರಕಾರಗಳು ರೈತರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ. ಸಹಕಾರ ಮಹಾಮಂಡಳ ಸಹಯೋಗದಲ್ಲಿ ರೈತರು ಬೆಳೆದ ಬೆಳೆಗಳನ್ನು ಯೋಗ್ಯ ಬೆಲೆಯಲ್ಲಿ...

  • ಗದಗ: ಮಾರಣಾಂತಿಕ ಕೋವಿಡ್ 19 ವೈರಸ್‌ ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ರವಿವಾರ ಕರೆ ನೀಡಿದ್ದ ಜನತಾ ಕರ್ಫ್ಯೂಗೆ ಜಿಲ್ಲೆಯಾದ್ಯಂತ ಸಾರ್ವಜನಿಕರಿಂದ...

ಹೊಸ ಸೇರ್ಪಡೆ