Udayavni Special

ಸರ್ಕಾರಿ ಶಾಲೆಯಲ್ಲಿ ಕೈತೋಟ-ಉದ್ಯಾನ ನಿರ್ಮಿಸಿ


Team Udayavani, Feb 27, 2021, 5:08 PM IST

ಸರ್ಕಾರಿ ಶಾಲೆಯಲ್ಲಿ ಕೈತೋಟ-ಉದ್ಯಾನ ನಿರ್ಮಿಸಿ

ಗದಗ: ಜಿಲ್ಲೆಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಸಮನ್ವಯತೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಸುಂದರ ಉದ್ಯಾನವನ ನಿರ್ಮಾಣ ಮಾಡಬೇಕು. ಮುಂಬರುವ ಮಳೆಗಾಲಕ್ಕೂ ಮುನ್ನವೇ ಅರಣ್ಯ ಇಲಾಖೆಯಿಂದ ಸಸಿ ನೆಡಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ನೀರಿನ ಸೌಕರ್ಯವಿರುವ ಹಾಗೂ ಕಾಂಪೌಂಡ ಇರುವ ಸರ್ಕಾರಿ ಶಾಲಾ ಕಟ್ಟಡಗಳ ಆವರಣದಲ್ಲಿ ಉದ್ಯಾನವನ ಹಾಗೂ ಕೈತೋಟಗಳನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಉಂದರವಾಗಿ ನಿರ್ಮಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕ್ರಿಯಾ ಯೋಜನೆಗಳ ಕುರಿತು ಸ್ಥಾಯಿ ಸಮಿತಿಗೆ ಮಾಹಿತಿ ನೀಡಬೇಕು. ನರೇಗಾ ಯೋಜನೆಯಡಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕೆಂದು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಅ ಧಿಕಾರಿಗಳು ಆಸಕ್ತಿ ವಹಿಸಿ ಯಶಸ್ಸಿಗೆ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶದ ಅಗತ್ಯವಿರುವಲ್ಲಿಚೆಕ್‌ ಡ್ಯಾಂಗಳನ್ನು ನಿರ್ಮಿಸುವ ಮೂಲಕ ಅಂತರ್ಜಲ ರಕ್ಷಣೆಗೆ ಮುಂದಾಗಬೇಕು. ಹಾಗೂ ಅನಾವಶ್ಯಕ ಪಲವತ್ತಾದ ಮಣ್ಣು ಸವಕಳಿಯನ್ನು ತಡೆಯಲು ಚೆಕ್‌ ಡ್ಯಾಂ ಗಳು ಸಹಕಾರಿಯಾಗಿವೆ. ರಸ್ತೆ ಕಾಮಗಾರಿಗೆ ಅಪಾರ ನೀಡಲಾಗಿದ್ದರು ಕೂಡ ಕಳಪೆ ರಸ್ತೆಗಳು ನಿರ್ಮಾಣಗೊಂಡಿವೆ. ಇದರ ಕುರಿತು ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದರು.

ಎಲ್ಲಾ ಇಲಾಖಾ ಅಧಿಕಾರಿಗಳು ಯೋಜನೆ ಕೈಗೊಂಡ ಕಾರ್ಯಗಳ ಬಗ್ಗೆ ಆಯಾ ಭಾಗದ ಜಿಪಂ ಸದಸ್ಯರ ಗಮನಕ್ಕೆ ತರಬೇಕು. ಶಿಷ್ಠಾಚಾರದನ್ವಯ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ 435 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗಿದೆ. ಅವುಗಳಲ್ಲಿ 16 ದುರಸ್ತಿಯಲ್ಲಿವೆ ಎಂದು ಮಾಹಿತಿ ಒದಗಿಸಿದರು. ಜಿಲ್ಲೆಯಲ್ಲಿ ಗ್ರಾಮಗಳ ಪ್ರತಿ ಮನೆ ಮನೆಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಜಲಜೀವನ್‌ ಮಿಷನ್‌ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್‌ ಎಸ್‌. ಮಾತನಾಡಿ, ಸ್ವತ್ಛ ಭಾರತ್‌ ಮಿಷನ್‌ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಸರಕಾರಿ ಶಾಲೆ, ಅಂಗನವಾಡಿ ಮತ್ತು ಇತರೆ ಕಚೇರಿಗಳಲ್ಲಿ ಸ್ವತ್ಛತೆ ಕಾಪಾಡಿಕೊಳ್ಳವಂತೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸಲು ಅಧಿಕಾರಿಗಳು ಮುಂದಾಗುವಂತೆ ಸೂಚಿಸಿದರು.

ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯಲ್ಲಿ ಪ್ರೇರಕ ಹಾಗೂ ಉಪ ಪ್ರೇರಕರಾಗಿ ಕೆಲಸ ಮಾಡಿದವರನ್ನು ಜಿಲ್ಲಾ ಪಂಚಾಯತಿಯಲ್ಲಿ ಗುತ್ತಿಗೆ ಆದಾರದಲ್ಲಿ ಕೆಲಸ ನೀಡುವ ಸಂದರ್ಭದಲ್ಲಿ ಅವರಿಗೆ ಆದ್ಯತೆ ನೀಡಬೇಕೆಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಅವರು ಸಿಇಒ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಪ್ರಗತಿಯಕುರಿತು ಚರ್ಚೆ ನಡೆಸಿದರು. ಉಪಾಧ್ಯಕ್ಷೆ ಮಂಜುಳಾಹುಲ್ಲಣ್ಣವರ, ಸಿಇಒ ಭರತ ಎಸ್‌. ವೇದಿಕೆ ಮೇಲೆ ಉಪಸ್ಥಿತರಿದ್ದರು. ಸದಸ್ಯ ವಾಸಣ್ಣ ಕುರಡಗಿ, ಮಲ್ಲವ್ವ  ಬಿಚ್ಚಾರ, ಪಡಿಯಪ್ಪ ಪೂಜಾರ, ರೇಣುಕಾ ಅವರಾದಿ, ರೇಖಾ ಅಳವಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

5 ವರ್ಷಗಳಾದರೂ ಸಿಗದ ಮಾಹಿತಿ  :

ಅಧಿಕಾರವಧಿ ಮುಗಿಯುತ್ತಿದ್ದರೂ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿರುವ ಯೋಜನೆಗಳ ಮಾಹಿತಿಯನ್ನು ಜಿಪಂ ಸದಸ್ಯರಿಗೆ ನೀಡುತ್ತಿಲ್ಲ ಎಂದು ಸದಸ್ಯರು ಧ್ವನಿ ಎತ್ತಿದರು. ಅದಕ್ಕೆ ಧ್ವನಿಗೂಡಿಸಿದ ಅಧ್ಯಕ್ಷ ಈರಪ್ಪ ನಾಡಗೌಡರ, ಆದಷ್ಟು ಬೇಗ ಸದಸ್ಯಯರು ಕೋರುವ ಮಾಹಿತಿ ಒದಗಿಸುವಂತೆ ಆದೇಶಿಸಿದರು.

ಟಾಪ್ ನ್ಯೂಸ್

ಜನಹಗ್ದಸ಻

ಮಾಜಿ ಶಾಸಕ ವಸಂತ ಅಸ್ನೋಟಿಕರ್ ಕೊಲೆ ಪ್ರಕರಣ: ಗುಂಡಿಟ್ಟಿದ್ದ ಮೊಹಿತೆಗೆ ಜೀವಾವಧಿ ಶಿಕ್ಷೆ

ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲಿ ಅನುಮತಿ: ಸಚಿವ ಜಗದೀಶ ಶೆಟ್ಟರ್‌

ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲಿ ಅನುಮತಿ: ಸಚಿವ ಜಗದೀಶ್ ಶೆಟ್ಟರ್

gdfgdsg

ಮೂತ್ರಪಿಂಡ ಕಸಿಗೆ ಕಿಮ್ಸ್‌ ಸಿದ್ಧ; ಒಪ್ಪಿಗೆಯಷ್ಟೇ ಬಾಕಿ ­

Migrants fear 2020 replay, say may run out of work and resources if lockdown extended

ಲಾಕ್ ಡೌನ್ ಭೀತಿ : ರಾಷ್ಟ್ರ ರಾಜಧಾನಿಯಿಂದ ಮತ್ತೆ ಗುಳೆ ಹೊರಟ ವಲಸೆ ಕಾರ್ಮಿಕರು..!?

ಮಂಡ್ಯ:  413 ಮಂದಿಗೆ ಸೋಂಕು ದೃಢ: 113 ಮಂದಿ ಬಿಡುಗಡೆ

ಮಂಡ್ಯ:  413 ಮಂದಿಗೆ ಕೋವಿಡ್ ಸೋಂಕು ದೃಢ: 113 ಮಂದಿ ಬಿಡುಗಡೆ

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

hjkhku

‘ಸಂಪೂರ್ಣ ಲಾಕ್‍ಡೌನ್‍’ ಹೇರುವಂತೆ ಸಿಎಂಗೆ ಸಚಿವರುಗಳಿಂದ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tgrtete

ಪ್ರತಿ ಮನೆಗೂ ಶುದ್ಧ ಕುಡಿವ ನೀರು : ಶಾಸಕ ರಾಮಣ್ಣ ಲಮಾಣಿ

hfgere

ಕೋವಿಡ್‌ ನಿಯಮ ಉಲಂಘಿಸಿದರೆ ಕಠಿಣ ಕ್ರಮ

tgnsd

ಬಾಳೆಹಣ್ಣಿನ ಮೇಲೆ ಸಿದ್ದು ಮುಂದಿನ ಸಿಎಂ ಎಂದು ಬರೆದು ರಥಕ್ಕೆ ಎಸೆದರು!

hfhdfghdf

ಅಂತೂ ರಸ್ತೆಗಿಳಿದ ಸಾರಿಗೆ ಬಸ್

mghdgd

ಗ್ರಾಮೀಣರಿಗೆ ಖಾತ್ರಿ ಯೋಜನೆಯೇ ಜೀವಾಳ

MUST WATCH

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

udayavani youtube

ಬಿಯರಿಗಾಗಿ ಮುಗಿಬಿದ್ದು ಜನರ ಕಿತ್ತಾಟ

udayavani youtube

ಚಿಕ್ಕಮಗಳೂರು: 9 ವರ್ಷದ ಹಳೇ ಗ್ಲೂಕೋಸ್ ನೀಡಿದ ಮೆಡಿಕಲ್ ಸ್ಟೋರ್; ಕಂಗಾಲಾದ ಗ್ರಾಹಕ !

ಹೊಸ ಸೇರ್ಪಡೆ

hjghfh

ಕೋವಿಡ್ ಭೀತಿ ಮಧ್ಯೆಯೂ ಸಂತೆ ಜೋರು

ghfghtyt

ಬೆಳಗಾವಿಯಲ್ಲಿ ‘ಮಹಾ’ ಕಚೇರಿ ತಿರುಕನ ಕನಸು  : ಸಾಹಿತಿ ಪ್ರೊ. ಸುಬ್ರಾವ ಎಂಟೆತ್ತಿನವರ

ಮನಬವಸದಗ್ಗ

ಕರ್ತವ್ಯ ಲೋಪ : 8 ಪಿಡಿಓಗಳ ಅಮಾನತು

ಕಜಹಗ್ದೆಡ

ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲೇ ಅನುಮತಿ : ಜಗದೀಶ ಶೆಟ್ಟರ್‌

gfdgtgr

ಬಾದಾಮಿಯಲ್ಲಿ ಪ್ರೇಮಿಗಳ ಮದುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.