Udayavni Special

ನೂತನ ಸುಸಜ್ಜಿತ ಸಿಮೆಂಟ್ ರಸ್ತೆ ಹಾಳು

20 ಕೋಟಿ ವೆಚ್ಚದ ರಸ್ತೆ•ನಗರಸಭೆ ಅಧಿಕಾರಿಗಳಿಗೆ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

Team Udayavani, May 23, 2019, 10:34 AM IST

23-May-4

ಹರಿಹರ: ನಗರದ ಜಯಶ್ರೀ ಟಾಕೀಸ್‌ ಎದುರು ನೀರಿನ ಪೈಪ್‌ ದುರಸ್ತಿಗೆ ಹೊಸದಾಗಿ ನಿರ್ಮಿಸಿದ ಸಿಮೆಂಟ್ ರಸ್ತೆ ಅಗೆದು ಗುಂಡಿ ತೋಡಿರುವುದು.

ಹರಿಹರ: ಅಧಿಕಾರಿಗಳ ಅವೈಜ್ಞಾನಿಕ ನೀತಿಯಿಂದಾಗಿ ನಗರದಲ್ಲಿ ಇತ್ತೀಚಿಗಷ್ಟೆ ನಿರ್ಮಿಸಿದ್ದ ಸಿಮೆಂಟ್ ಕಾಂಕ್ರೀಟ್‌ನ ಚತುಷ್ಪಥ ರಸ್ತೆ ಹಾಳಾಗುತ್ತಿದೆ.

ಅಗಲೀಕರಣಗೊಂಡ ಹಳೆ ಪಿಬಿ ರಸ್ತೆಯನ್ನು ಅಂದಾಜು 20 ಕೋ.ರೂ. ವೆಚ್ಚದಲ್ಲಿ ಪುನರ್‌ ನಿರ್ಮಿಸಿ ಇನ್ನೂ ಆರು ತಿಂಗಳೂ ಗತಿಸಿಲ್ಲ. ಆದರೆ ನೀರು ಸರಬರಾಜು ಪೈಪ್‌ಲೈನ್‌ ಲೀಕ್‌ ಆಗಿದೆ ಎಂದು ನಗರಸಭೆಯವರು ಜಯಶ್ರೀ ಟಾಕೀಸ್‌ ಎದುರು ಸುಮಾರು 12 ಅಡಿ ವ್ಯಾಸದಲ್ಲಿ 15 ಅಡಿ ಆಳಕ್ಕೆ ಬಗೆದು ಹಾಳುಗೆಡವಿದ್ದಾರೆ.

ನಗರಸಭೆ ನಿರ್ಲಕ್ಷ್ಯ: ಹೊಸ ರಸ್ತೆ ನಿರ್ಮಿಸುವ ಮುನ್ನ ಹಳೆ ಡಾಂಬರು ರಸ್ತೆ ತೆರವುಗೊಳಿಸಿದ್ದ ಪಿಡಬ್ಲ್ಯುಡಿ ಅಧಿಕಾರಿಗಳು ರಸ್ತೆ ಅಡಿಯ ನೀರಿನ ಕೊಳವೆ ಮಾರ್ಗಗಳನ್ನು ಬದಿಗೆ ಸ್ಥಳಾಂತರಿಸಲು ಸೂಚಿಸಿದ್ದರು. ಆದರೆ ನಗರಸಭೆ ಅಧಿಕಾರಿಗಳು ಹೊಸದಾಗಿ ಜಲಸಿರಿ ಯೋಜನೆ ಜಾರಿಯಾಗುತ್ತಿರುವುದರಿಂದ ಹಳೆ ಕೊಳವೆ ಮಾರ್ಗದ ಅಗತ್ಯವಿಲ್ಲ ಎಂದು ಕೈತೊಳೆದುಕೊಂಡಿದ್ದರು.

ಈಗ ಆರು ತಿಂಗಳಲ್ಲೇ ನಡು ರಸ್ತೆಯ ಆಳದಲ್ಲಿ ಪೈಪ್‌ಲೈನ್‌ ಒಡೆದು ಹೋಗಿದ್ದು, ನಗರದ ಹಲವಾರು ಬಡಾವಣೆಗಳಿಗೆ ನೀರು ಪೂರೈಕೆ ಸ್ಥಗಿತಗೊಂಡಿದ್ದರಿಂದ ಅನಿವಾರ್ಯವಾಗಿ ರಸ್ತೆ ಅಗೆದು ದುರಸ್ತಿ ಮಾಡಲೇಬೇಕಾಗಿದೆ.

ಶನಿಕಾಟ ಶುರು: ಇದು ಇಲ್ಲಿಗೆ ಮುಗಿಯುವ ಕಥೆಯಲ್ಲ. ಈ ರಸ್ತೆ ಮಧ್ಯೆ ಹಲವೆಡೆ ನೀರಿನ ಕಂಟ್ರೋಲ್ ವಾಲ್ವ್ಗಳೂ ಇವೆ. ಈ ವಾಲ್ವ್ಗಳೂ ಸಹ ಪದೆ ಪದೆ ದುರಸ್ತಿಗೆ ಬರುವುದರಿಂದ ಸಿಮೆಂಟ್ ರಸ್ತೆ ಅಗೆಯುವುದು ಅನಿವಾರ್ಯವಾಗಲಿದೆ. ಎಸ್‌ಜೆವಿಪಿ ಕಾಲೇಜು ಮುಂದಿನ ವಾಲ್ವ್ ಸಹ ಈಗಾಗಲೇ ದೊಡ್ಡ ಮಟ್ಟದಲ್ಲಿ ಲೀಕ್‌ ಆಗುತ್ತಿದೆ. ಈಗ ಅಗೆದಿರುವ ರಸ್ತೆಯನ್ನು ಮುಚ್ಚುತ್ತಿದ್ದಂತೆ ಅಲ್ಲಿಯೂ ರಸ್ತೆ ಅಗೆದು ದುರಸ್ತಿಗೊಳಿಸಬೇಕಾಗಿದೆ. ಒಟ್ಟಿನಲ್ಲಿ 20 ಕೋಟಿ ವೆಚ್ಚದ ಸಿಮೆಂಟ್ ರಸ್ತೆಗೆ ಶನಿಕಾಟ ಶುರುವಾದಂತಾಗಿದೆ.

ಶಿಸ್ತು ಕ್ರಮ ಅಗತ್ಯ
ಎರಡು ಅಡಿ ದಪ್ಪದ ಕಾಂಕ್ರೀಟ್ ಕತ್ತರಿಸಿ, ರಸ್ತೆ ಆಳದ ಜಲ್ಲಿ, ಕಲ್ಲು ಎತ್ತಿ ಗುಂಡಿ ತೋಡುವುದರಲ್ಲೆ 3 ದಿನ ಕಳೆಯಲಾಗಿದೆ. ವಾರದಿಂದ ನಾಲ್ಕೈದು ವಾರ್ಡ್‌ಗಳಿಗೆ ಕುಡಿಯುವ ನೀರಿಲ್ಲ. ಪೈಪ್‌ಲೈನ್‌ ಶಿಫ್ಟ್‌ ಮಾಡದೆ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.
•ಎಸ್‌.ಬಿ. ಚೌಧರಿ,
ಬಾತಿ ಶಿವನಾಗಪ್ಪ ಕಾಂಪೌಂಡ್‌ ವಾಸಿ.

ಸಿಮೆಂಟ್ ರಸ್ತೆ ನಿರ್ಮಿಸುವ ಮುನ್ನ ವಾಟರ್‌ ಲೈನ್‌ ಶಿಫ್ಟ್‌ ಮಾಡಿದ್ದರೆ ಈ ಸಮಸ್ಯೆ ಉದ್ಭವಿಸುತ್ತಿದ್ದಿಲ್ಲ. ವಾಟರ್‌ ಲೈನ್‌ ದುರಸ್ತಿ ಕೆಲಸ ಪೂರ್ಣಗೊಂಡಿದ್ದು, ಇನ್ನೆರಡು ದಿನಗಳಲ್ಲಿ ರಸ್ತೆಯನ್ನು ಮುಂಚಿನಂತೆ ನಿರ್ಮಿಸಲಾಗುವುದು.
ಎಸ್‌.ಎಸ್‌. ಬಿರಾದರ್‌,
ಎಇಇ, ನಗರಸಭೆ, ಹರಿಹರ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ಮೋದಿ ಕರೆಯಂತೆ ಕೋವಿಡ್ 19 ವೈರಸ್ ಅಂಧಕಾರ ಹೊಡೆದೋಡಿಸಲು ದೇಶಾದ್ಯಂತ ಬೆಳಗಿದ ದೀಪ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ದಿಲ್ಲಿ ನಿಜಾಮುದ್ದೀನ್ ಮಸೀದಿಗೆ ಭೇಟಿ ನೀಡಿದ್ದ ದಕ್ಷಿಣ ಆಫ್ರಿಕಾ ಮೌಲ್ವಿ ಕೋವಿಡ್ ನಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯಲ್ಲಿ ಮತ್ತೆ ನಾಲ್ಕು ಕೋವಿಡ್ 19 ಪ್ರಕರಣ

ನಿಜಾಮುದ್ದೀನ್ ನಿಂದ ಬಂದ ನಾಲ್ವರಿಗೆ ಸೋಂಕು: ಬೆಳಗಾವಿಯಲ್ಲಿ ಮತ್ತೆ ನಾಲ್ಕು ಹೊಸ ಪ್ರಕರಣ

sm-tdy-1

ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಸೂಚನೆ

ಜಿಲ್ಲೆಯಲ್ಲಿಲ್ಲ ಕೊರೊನಾ ಪ್ರಕರಣ: ಸಿ.ಟಿ. ರವಿ

ಜಿಲ್ಲೆಯಲ್ಲಿಲ್ಲ ಕೋವಿಡ್ 19 ಪ್ರಕರಣ: ಸಿ.ಟಿ. ರವಿ

ಮನೋವೈದ್ಯರಿಂದ ಕೌನ್ಸೆಲಿಂಗ್‌

ಮನೋವೈದ್ಯರಿಂದ ಕೌನ್ಸೆಲಿಂಗ್‌

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌

ಇದೀಗ ಸಣ್ಣ ಜ್ವರವಿದ್ರೂ ಕ್ವಾರಂಟೈನ್‌