ಜಿಲ್ಲೆಯ 16ಮಂದಿ ಧರ್ಮ ಸಭೆಯಲ್ಲಿ ಭಾಗಿ


Team Udayavani, Apr 3, 2020, 10:52 AM IST

hasan-tdy-1

ಹಾಸನ: ದೇಶದಲ್ಲಿ ಕೋವಿಡ್ 19 ಸೋಂಕಿನ ಹಾಟ್‌ಸ್ಪಾಟ್‌ ಎಂದು ಗುರುತಿಸಲ್ಪಟ್ಟಿರುವ ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮಾ.14 ರಿಂದ 23ರವರೆಗೆ ಪಾಲ್ಗೊಂಡಿದ್ದ ಹಾಸನ ಜಿಲ್ಲೆಯ 16 ಮಂದಿಯ ವಿವರವನ್ನು ಜಿಲ್ಲಾಡಳಿತ ಕಲೆ ಹಾಕಿದೆ.

ಈ 16 ಜನರ ಪೈಕಿ 6 ಮಂದಿ ಮಾತ್ರ ಈಗ ಜಿಲ್ಲೆಯಲ್ಲಿದ್ದು ಅವರನ್ನು ತಪಾಸಣೆ ನಡೆಸಿದ್ದು ಯಾರಲ್ಲಿಯೂ ಸೋಂಕಿನ ಲಕ್ಷಣ ಪತ್ತೆಯಾಗಿಲ್ಲ. ಇನ್ನುಳಿದ 10 ಜನರಲ್ಲಿ ಮೂವರು ದೆಹಲಿಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದರೆ, ಇನ್ನು ಮೂವರು ದೆಹಲಿಯಲ್ಲಿಯೇ ಉಳಿದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನುಳಿದಂತೆ ಕುಂದಾಪುರ, ವಾರಂಗಲ್‌, ಜಮ್ಮು – ಕಾಶ್ಮೀರದಲ್ಲಿ ತಲಾ ಒಬ್ಬೊಬ್ಬರಿದ್ದಾರೆ. ಸದ್ಯ ಹಾಸನದಲ್ಲಿರುವವರಲ್ಲಿ ಕೊರೊನಾ ರೋಗ ಲಕ್ಷಣಗಳಿಲ್ಲ. ಆದರೂ ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮೊಬೈಲ್‌ ಪೋನ್‌ಗಳ ಕರೆ ಆಧರಿಸಿ ಕಲೆ ಹಾಕಲಾಗಿದೆ. ಹಾಸನದ ಒಬ್ಬರು, ಕೊಡಗು ಜಿಲ್ಲೆಯ ಒಬ್ಬರು ಸೂಪರ್ವೈಸರಿ ಐಸೋ ಲೇಷನ್‌ನಲ್ಲಿದ್ದು ಅವರಲ್ಲಿಯೂ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲವೆಂದರು. ಇನ್ನು 14 ರಿಂದ 21ರವರೆಗೆ ದೆಹಲಿಗೆ ಹೋಗಿದ್ದವರ ಮಾಹಿತಿ ಇದ್ದರೆ ಅವರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಥವಾ ತಹಶೀಲ್ದಾರ್‌ರಿಗೆ ತಿಳಿಸಿದರೆ ಅವರ ಬಗ್ಗೆ ನಿಗಾ ವಹಿಸಿ ಸುರಕ್ಷತೆಗೆ ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದರು.

179 ಕಾರ್ಮಿಕರಿಗೆ ವ್ಯವಸ್ಥೆ: ಬೇರೆ ರಾಜ್ಯದ 179 ಕಾರ್ಮಿಕರು ಹಾಗೂ ಉತ್ತರ ಕರ್ನಾಟಕದ ಕೆಲಸಗಾರರು ವಲಸೆ ಬಂದು ಹಾಸನ ಜಿಲ್ಲೆಯಲ್ಲಿ ಉಳಿದಿದ್ದವರಿಗೆ ಜಿಲ್ಲೆಯಲ್ಲೇ ಕ್ಯಾಂಪ್‌ಗ್ಳನ್ನು ಮಾಡಿ ಊಟ ವಸತಿ ಕಲ್ಪಿಸಲಾಗಿದೆ ಎಂದರು. ಬಿಪಿಎಲ್‌ ಕಾರ್ಡ್‌ ಗಳಿಗೆ ಪಡಿತರ ವಿತರಣೆ ಪ್ರಾರಂಭ ಮಾಡಿದ್ದು ಈಗಾಗಲೇ ಅರಸೀಕೆರೆ ಮತ್ತು ಬೇಲೂರು ತಾಲೂಕು ಗಳಲ್ಲಿ ವಿತರಿಸಲಾಗುತ್ತಿದೆ. ಉಳಿದ ತಾಲೂಕು ಗಳಲ್ಲಿ ಶುಕ್ರವಾರದಿಂದ ವಿತರಣೆ ಪ್ರಾರಂಭವಾಗುತ್ತದೆ. ಎರಡು ತಿಂಗಳಿಗೆ ಆಗುವಷ್ಟು ಅಕ್ಕಿ ಮತ್ತು ಗೋಧಿ ಶೇಖರಿಸಿಡಲಾಗಿದೆ. ಬಯೋಮೆಟ್ರಿಕ್‌ (ಹೆಬ್ಬೆಟ್ಟಿನ ಗುರುತು) ನೀಡುವಂತಿಲ್ಲ. ಆದರೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕೆಂದರು.

ದಿನಸಿ ಅಂಗಡಿಗಳ ಮಾಲಿಕರು ಹೋಂ ಡೆಲಿವರಿ ಮಾಡಲು ಮುಂದೆ ಬಂದಿದ್ದು, ಅಂತಹ ಅಂಗಡಿಗಳ ಪಟ್ಟಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಗೆ ಬರಬಾರದು ತುರ್ತು ಪರಿಸ್ಥಿತಿ ಇದ್ದರೆ ಮಾತ್ರ ಬರಬಹುದು ಎಂದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಉಪ ವಿಭಾಗಾಧಿಕಾರಿ ಡಾ.ನವೀನ್‌ಭಟ್‌ ಇದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.