ನಗರಕ್ಕೆ 45 ಕೋಟಿ ರೂ.ವಿಶೇಷ ಅನುದಾನ

ಹೊರವಲಯದ ಗ್ರಾಮಗಳೂ ಸೇರಿ 9 ಕಾಮಗಾರಿಗಳಿಗೆ ಹಣ; ಶಾಸಕರ ಪ್ರೀತಂ ಗೌಡ ಕೋರಿಕೆಗೆ ಸಿಎಂ ಬೊಮ್ಮಾಯಿ ಅಸ್ತು

Team Udayavani, Aug 24, 2021, 3:47 PM IST

ನಗರಕ್ಕೆ 45 ಕೋಟಿ ರೂ.ವಿಶೇಷ ಅನುದಾನ

ಹಾಸನ: ಕಾವೇರಿ ನೀರಾವರಿ ನಿಗಮದಿಂದ ಹಾಸನ ನಗರ ಮತ್ತು ನಗರದ ಹೊರ ವಲಯದ ಬಡಾವಣೆಗಳಲ್ಲಿ ರಸ್ತೆ, ಚರಂಡಿಗಳ ನಿರ್ಮಾಣಕ್ಕೆ 45 ಕೋಟಿ ರೂ. ಅನುದಾನ ಮಂಜೂರಾಗಿದೆ.

ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರು ಮುಖ್ಯಮಂತ್ರಿಯವರಿಗೆ ಸಲ್ಲಿಸಿದ ಮನವಿ ಆಧರಿಸಿ 45 ಕೋಟಿ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಿ, 2021 -22ನೇ ಸಾಲಿನಲ್ಲಿಯೇ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಹಾಸನ ನಗರ ಮತ್ತು ನಗರದ ಹೊರವಲಯದ ಬಡಾವಣೆಗಳಲ್ಲಿ ರಸ್ತೆ, ಚರಂಡಿಗಳ ನಿರ್ಮಾಣಕ್ಕೆ 48 ಕೋಟಿ ರೂ.ವಿಶೇಷ ಅನುದಾನ ನೀಡ ಬೇಕು ಎಂದು ಶಾಸಕ ಪ್ರೀತಂ ಜೆ.ಗೌಡ ಅವರ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಯವರು ವಿಶೇಷ ಅನುದಾನಕ್ಕೆ ಅಸ್ತು ಎಂದಿದ್ದಾರೆ.

ಕಾವೇರಿ ನೀರಾವರಿ ನಿಗಮದ ಮೂಲಕ 9 ಕಾಮಗಾರಿಗಳಿಗೆ 45 ಕೋಟಿ ರೂ.ಗಳನ್ನು 2021 -22ನೇ ಸಾಲಿನಲ್ಲಿ ನಿಗಮದ ಗೊರೂರು ವಲಯಕ್ಕೆ ನಿಗದಿಯಾಗಿರುವ ಅನುದಾನದಲ್ಲಿ ಹಂಚಿಕೆ ಮಾಡುವಂತೆ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಗೊರೂರು ವಲಯದ
ಹೇಮಾವತಿ ಯೋಜನೆ ಮುಖ್ಯ ಎಂಜಿನಿಯರ್‌ಗೆ ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ:ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಸದಾಶಿವಗಡ ತಲುಪಿದ ರಾಜೇಶ್

ಹಾಸನ ನಗರ ಕಾವೇರಿ ಅಚ್ಚು ಕಟ್ಟು ವ್ಯಾಪ್ತಿಗೆ ಬರುವುದಿಲ್ಲ. ಆದರೂ ಕಾವೇರಿ ನೀರಾವರಿ ನಿಗಮದಿಂದ ವಿಶೇಷ ಅನುದಾನ ಬಿಡುಗಡೆಗೆ ಆದೇಶ ನೀಡಿರುವುದು ವಿವಾದಕ್ಕೀಡಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಕ್ಕೆ ಇದೊಂದು ನಿದರ್ಶನವೂ ಹೌದು.

ಜಿಪಂ ಅನುದಾನ: ಶಾಸಕರು, ಸಂಸದರಿಗೆ ಸಮಾನಹಂಚಿಕೆ
ಹಾಸನ: ಜಿಪಂಗೆ 2021 -22ನೇ ಸಾಲಿಗೆ ಮಂಜೂರಾದ ಅನುದಾನವನ್ನು ಎಲ್ಲ ತಾಲೂಕುಗಳಿಗೂ ಹೋಬಳಿವಾರು ವಿಧಾನಸಭಾ ಕ್ಷೇತ್ರ ಗಳಿಗೂ ಸಮಾಜವಾಗಿ ಹಂಚಿಕೆ ಮಾಡಿ ಕ್ರಿಯಾ ಯೋಜನೆ ರೂಪಿಸಲು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶಾಸಕರ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಜಿಪಂನಲ್ಲಿ ಈಗಚುನಾಯಿತ ಆಡಳಿತ ಮಂಡಳಿ ಇಲ್ಲ. ಆಡಳಿ ತಾಧಿಕಾರಿಯವರಿದ್ದು, ಈ ವರ್ಷದ ಅನುದಾನದ ಕ್ರಿಯಾ ಯೋಜನೆ ರೂಪಿಸ ಬೇಕಾಗಿದೆ. ಹಾಗಾಗಿ ಆಡಳಿತಾಧಿಕಾರಿ ಕೊಠಡಿಯಲ್ಲಿ ಜಿಲ್ಲೆಯ ಎಲ್ಲ ಶಾಸಕರು ಸಮ್ಮುಖದಲ್ಲಿ ಸಚಿವ ಗೋಪಾಲಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಒಂದು ಗಂಟೆಗೂ ಹೆಚ್ಚುಕಾಲ ಕ್ರಿಯಾ ಯೋಜನೆ ರೂಪಿಸುವ ಸಂಬಂಧ ಸಭೆ ನಡೆಯಿತು. ಆ ಸಭೆಯಲ್ಲಿ ಚರ್ಚಿಸಿ ವಿಧಾನ ಪರಿಷತ್‌ ಸದಸ್ಯರು, ಸಂಸದರು ಸೇರಿ 10 ಪಾಲು ಮಾಡಿ ಅನುದಾನ ಹಂಚಿಕೆ ಮಾಡಲು ತೀರ್ಮಾನ ಮಾಡಲಾಗಿದೆ.

ಜಿಪಂಗೆ ಸುಮಾರು 28 ಕೋಟಿ ರೂ. ಅನುದಾನ ಬಿಡುಗಡೆಯಾಗದ್ದು ಅನುದಾನವನ್ನು ಇಬ್ಬರು ಸಂಸದರು ಒಬ್ಬ ಮೇಲ್ಮನೆ ಸದಸ್ಯರು ಹಾಗೂ 7 ಶಾಸಕರಿಗೆ ಸಮಾನವಾಗಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ತಾಲೂಕುವಾರು ಅನುದಾನ ಹಂಚಿಕೆ ಮಾಡುವ ಚರ್ಚೆ ನಡೆಯಿತು. ಆದರೆ ಒಂದು ತಾಲೂಕು ಎರಡು – ಮೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವುದರಿಂದ ಅನುದಾನ ಹಂಚಿಕೆ ಗೊಂದಲ ಸಭೆಯಲ್ಲಿ ಏರ್ಪಟ್ಟಿತು. ಹೋಬಳಿವಾರು ಅನುದಾನ ಹಂಚಿಕೆ ಮಾಡಬೇಕು ಎಂದಾಗ ಕೆಲ ಶಾಸಕರು ಆಕ್ಷೇಪ ವ್ಯಕ್ತಪಡಿಸಿದರು. ಹಾಗಾಗಿ ಅಂತಿಮವಾಗಿ 7 ಶಾಸಕರು, ಇಬ್ಬರು ಸಂಸದರು, ಒಬ್ಬ ಮೇಲ್ಮನೆ ಸದಸ್ಯರಿಗೆ ಸಮಾನವಾಗಿ ಜಿಪಂ ಅನುದಾನ ಹಂಚಿಕೆ ಮಾಡಿ ಕಾಮಗಾರಿಗಳ ಕ್ರೀಯಾ ಯೋಜನೆ ರೂಪಿಸಿಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.