ನಗರದ ವಸತಿ ರಹಿತರಿಗೆ ನಿವೇಶನ ಹಂಚಿಕೆ

Team Udayavani, Jun 17, 2019, 11:04 AM IST

hasan-tdy-2..

ಹಾಸನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಅಧಿಕಾರಿಗಳ ಸಭೆ ನಡೆಸಿದರು.

ಹಾಸನ: ನಗರದ ಸುತ್ತಮುತ್ತ 3 ಸಾವಿರ ನಿವೇಶನಗಳಿಗೆ ಜಾಗ ಗುರುತಿಸಲಾಗಿದ್ದು, ಹಲವು ವರ್ಷಗಳಿಂದ ಹಾಸನದಲ್ಲಿ ವಾಸವಿರುವ ಅರ್ಹ ವಸತಿ ರಹಿತರಿಗೆ ನಿವೇಶನಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ‌ ಎಚ್.ಡಿ. ರೇವಣ್ಣ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹಾಸನ ನಗರದಲ್ಲಿ ಹಲವು ವರ್ಷಗಳಿಂದ ವಾಸವಿದ್ದು, ಸ್ವಂತ ಮನೆ ಸ್ವಂತ ಇಲ್ಲದ ಅರ್ಹರಿಗೆ ನಿವೇಶನ ನೀಡಲು ನಿರ್ಧರಿ ಸಲಾಗಿದೆ. ಈ ಬಗ್ಗೆ ಜೂ.19ರಂದು ಸಾರ್ವಜನಿಕ ಪ್ರಕಟಣೆ ನೀಡಿ ಜೂ. 21 ರಿಂದ ವಾರ್ಡ್‌ವಾರು ಅರ್ಜಿಗಳನ್ನು ಸ್ವಿಕರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮ ರೂಪಿಸುವಂತೆ ನಗರಸಭೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಭೂ ಸ್ವಾಧಿನ ಪ್ರಕ್ರಿಯೆ ಚುರುಕಾಗಲಿ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸಹಕರಿಸಬೇಕು. ಬೇಲೂರು – ಬಿಳಿಕೆರೆ (ಮೈಸೂರು) ರಾಷ್ಟ್ರೀಯ ಹೆದ್ದಾರಿ, ಹಾಸನ – ಬೇಲೂರು- ಚಿಕ್ಕಮಗಳೂರು ರೈಲ್ವೆ ಮಾರ್ಗ ನಿರ್ಮಾಣದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಅದಕ್ಕೆ ಸರ್ವೆ ಕಾರ್ಯ ತುರ್ತಾಗಿ ಮುಗಿಸಿ ಎಂದು ನಿರ್ದೇಶನ ನೀಡಿದ ಅವರು, ಹೊಸ ನೀರಾವರಿ ಯೋಜನೆಗ‌ೂ ವಿಶೇಷ ಭೂಸ್ವಾಧೀನಾಧಿಕಾರಿಗಳ ಕಚೇರಿಗೆ ಅಗತ್ಯರುವ ಸರ್ವೆಯರ್‌ಗಳನ್ನು ಹಾಗೂ ಇತರ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸುವಂತೆ ಜಿಲ್ಲಾಧಿಕಾರಿಯವರು ಮತ್ತು ಭೂದಾಖಲೆಗಳ ಉಪ ನಿರ್ದೇಶಕರಿಗೆ ಸಚಿವರು ತಾಕೀತು ಮಾಡಿದರು.

ತೋಟಗಾರಿಕೆ ಕಾಲೇಜಿಗೆ ಸೂಕ್ರ ಕ್ರಮ ಕೈಗೊಳ್ಳಿ: ಹಾಸನ ತಾಲೂಕು ಸೋಮನಹಳ್ಳಿ ಕಾವಲ್ನ ಆಲೂಗಡ್ಡೆ ಸಂಶೋಧನಾ ಕೇಂದ್ರ, ತೋಟಗಾರಿಕಾ ಕಾಲೇಜು, ಫ‌ಲಪುಷ್ಪ ಅಭಿವೃದ್ಧಿ ಕೇಂದ್ರದ ಮಾದರಿಯಾಗಿ ನಿರ್ಮಾಣವಾಗಬೇಕು ಅದಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಮಾದರಿ ಕೃಷಿ ಪದ್ಧತಿ ರೂಪಿಸಿ: ಎಲ್ಲಾ ತಾಲೂಕುಗಳಲ್ಲಿ 500 ಎಕರೆ ಜಮೀನು ಗುರುತಿಸಿ, ಉದ್ಯೋಗ ಖಾತರಿ, ಕೃಷಿ, ತೋಅಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶುಪಾಲನೆ ಇಲಾಖೆ ಯೋಜನೆ ಗಳನ್ನು ಸಂಯೋಜಿಸಿ ಸಬ್ಸಿಡಿ, ಬ್ಯಾಂಕ್‌ ಸಾಲವನ್ನು ಒಳಗೊಂಡಂತೆ ಪಂಚವಾರ್ಷಿಕ ಯೋಜನೆಯಂತೆ ಮಾದರಿ ಕೃಷಿ ಪದ್ಧತಿ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸಚಿವ ರೇವಣ್ಣ ಸೂಚಿಸಿದರು.

ನಗರದ ಎನ್‌.ಆರ್‌. ವೃತ್ತದಿಂದ ತಣ್ಣೀರು ಹಳ್ಳದ ವರೆಗೆ ಮುಂದಿನ ನಾಲ್ಕು ತಿಂಗಳಲ್ಲಿ ಹಂತ ಹಂತವಾಗಿ ರಸ್ತೆ ಅಭಿವೃದ್ಧಿ ಪೂರ್ಣಗೊಳಿಸಬೇಕು, ಪೊಲೀಸ್‌ ಇಲಾಖೆ ಇದಕ್ಕೆ ಅಗತ್ಯ ಸಂಚಾರಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕು. ಮಾರ್ಗಸೂಚಿಯಂತೆ ವ್ಯವಸ್ಥಿತವಾಗಿ ರಸ್ತೆ ಕಾಮಗಾರಿ ಮುಗಿಸಿ ಎಂದು ಸಚಿವರು ರಾಷ್ಟ್ರೀಯ ಹೆದ್ದಾರಿ, ನಗರಸಭೆ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.