ಬಜೆಟ್: ಸಣ್ಣ ರೈತರು, ಉದ್ಯೋಗಿಗಳ ಮೆಚ್ಚುಗೆ

Team Udayavani, Feb 2, 2019, 7:09 AM IST

sanna.jpg

ಹಾಸನ: ಲೋಕಸಭೆಯಲ್ಲಿ ಸಚಿವ ಪಿಯೂಷ್‌ ಗೋಯಲ್‌ ಅವರು ಮಂಡಿಸಿದ ಎನ್‌ಡಿಎ ಸರ್ಕಾರದ ಕೊನೆಯ ಬಜೆಟ್‌ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಗಳ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮುಖ್ಯವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 6 ಸಾವಿರ ರೂ. ಪ್ರೋತ್ಸಾಹಧನವನ್ನು ನೇರವಾಗಿ ಫ‌ಲಾನುಭವಿಗಳ ಖಾತೆಗೆ ಪಾವತಿ ಮಾಡುವ ಘೋಷಣೆಗೆ ರೈತರಿಂದ ಮೆಚ್ಚುಗೆ ವ್ಯಕ್ತವಾದರೂ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಸೇರಿದಂತೆ ರೈತ ಪರವಾದ ಡಾ.ಸ್ವಾಮಿನಾಥನ್‌ ವರದಿ ಜಾರಿಯ ಬಗ್ಗೆ ಪ್ರಸ್ತಾಪಿಸ ದಿ ರುವುದಕ್ಕೆ ರೈತ ಮುಖಂಡರು ಅಸಮಾ ಧಾನ ವ್ಯಕ್ತಪಡಿಸಿದ್ದಾರೆ.

ಮಧ್ಯಂತರ ಬಜೆಟ್: ಪಶುಪಾಲನೆ ಹಾಗೂ ಮೀನು ಗಾರಿಕೆಯ ಸಾಲದ ಬಡ್ಡಿ ವಿನಾಯತಿ ಕ್ರಮಗಳನ್ನು ಸ್ವಾಗತಿಸಿರುವ ಕೃಷಿಕ ವರ್ಗವು ಇದು ಚುನಾ ವಣಾ ಪೂರ್ವದ ಮಧ್ಯಂತರ ಬಜೆಟ್. ಮುಂದೆ ಚುನಾವಣೆ ಮುಗಿದ ನಂತರ ಈ ಘೋಷಣೆಗಳೆಲ್ಲಾ ಜಾರಿಯಾದಾವೇ ಎಂಬ ಅನುಮಾನವನ್ನೂ ವ್ಯಕ್ತಪಡಿಸಿದೆ.

ಆದಾಯ ತೆರಿಗೆ ಮಿತಿ ಹೆಚ್ಚಳ: ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಉದ್ಯೋಗಸ್ಥರು ಹಾಗೂ ವರ್ತಕರ ವಲಯದಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಹಾಗೆಯೇ ಇಎಸ್‌ಐ ಸೌಲಭ್ಯ ಪಡೆಯಲು ಇದ್ದ 15 ಸಾವಿರ ರೂ. ವೇತನದ ಮಿತಿಯನ್ನು 21 ಸಾವಿರ ರೂ.ಗೆ ಹೆಚ್ಚಳ ಮಾಡುವ ನಿರ್ಧಾರವನ್ನೂ ಕಾರ್ಮಿಕ ವಲಯವು ಸ್ವಾಗತಿಸಿದೆ.

ಅಂಗನವಾಡಿ ಕಾರ್ಯಕರ್ತರ ಹರ್ಷ: ಅಂಗನವಾಡಿ ಕಾರ್ಯ ಕರ್ತೆಯರ ಸಂಭಾವನೆ ಶೇ.50ರಷ್ಟು ಹೆಚ್ಚಳ ಮಾಡಿ ರುವ ಕ್ರಮದ ಬಗ್ಗೆಯೂ ಕಾರ್ಮಿಕ ಸಂಘಟನೆಗಳಿಂದ ಮೆಚ್ಚುಗೆ ವ್ಯಕ್ತ ವಾಗಿದೆ. ಈ ಹೆಚ್ಚಳವನ್ನು ತಕ್ಷಣದಿಂದಲೇ ಜಾರಿ ಮಾಡಬೇಕಾಗಿತ್ತು ಎಂಬ ಅಶಯವನ್ನೂ ಅಂಗನ ವಾಡಿ ಕಾರ್ಯಕತೆ ಯವರು ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಅಭಿವೃದ್ಧಿ ಯೋಜನೆಯಿಲ್ಲ: ಜನಪ್ರಿಯ ಯೋಜನೆಗಳನ್ನು ಪ್ರಕಟಿಸಿದ್ದರೂ ಸ್ಥಳೀಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಬಜೆಟ್‌ನಲ್ಲಿ ವಿವರ ಇಲ್ಲ. ರೈಲ್ವೆ ಇಲಾಖೆ ಸೇರಿದಂತೆ ಅಭಿವೃದ್ಧಿಯ ಇಲಾಖೆಗಳ ಹೊಸ ಕಾರ್ಯಕ್ರಮಗಳ ಬಗ್ಗೆಯೂ ವಿವರ ಇಲ್ಲ. ಹಾಗಾಗಿ ಬಜೆಟ್‌ನಲ್ಲಿ ಜಿಲ್ಲೆಗೆ ಏನೇನು ಸಿಕ್ಕಿದೆ ಎಂಬ ಬಗ್ಗೆ ಜನಸಾಮಾನ್ಯರಲ್ಲಿ ಗೊಂದಲವಿದೆ.

* ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.