ಬಸ್ಗಳ ಮುಖಾಮುಖಿ ಡಿಕ್ಕಿ: ಮೂವರ ದುರ್ಮರಣ
Team Udayavani, Dec 5, 2017, 8:11 AM IST
ಹಾಸನ: 2 ಬಸ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು 10ಕ್ಕೂ ಅಧಿಕ ಜನ ಗಾಯಗೊಂಡ ಘಟನೆ ಜಲ್ಲೆಯ ಆಲೂರು ತಾಲೂಕಿನ ಹೆದ್ದುರ್ಗೆ ಗ್ರಾಮದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.
ಬೆಂಗಳೂರು ಮುರುಗೇಶ್ ಪಾಳ್ಯದ ಕಾರ್ತಿಕ್ ರೆಡ್ಡಿ(30ವರ್ಷ), ಕಾಸರಗೋಡಿನ ಫಾತಿಮಾ(27),ಉಡುಪಿ ನಿವಾಸಿ ಯಶೋಧಾ(44) ಸೇರಿ ಮೂವರು ಮೃತಪಟ್ಟ ದುರ್ದೈವಿಗಳು. ಕೆಎಸ್ಆರ್ಟಿಸಿ ವೋಲ್ವೊ ಬಸ್ ಹಾಗೂ ದುರ್ಗಾಂಬ ಬಸ್ಗಳ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಾಸಲಾಗಿದೆ ಎಂದು ತಿಳಿದು ಬಂದಿದೆ.
ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೆದ್ದುರ್ಗದಲ್ಲಿ ಘಟನೆ ಸಂಭವಿಸಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ