ಚುನಾವಣೆ ಮುಗಿದರೂ ವಿಶ್ರಾಂತಿ ಬಯಸದ ಅಭ್ಯರ್ಥಿಗಳು

ಮುಖಂಡರು, ಕಾರ್ಯಕರ್ತರನ್ನು ಮಾತನಾಡಿಸುತ್ತಾ ಕಾಲ ಕಳೆದ ಎ.ಮಂಜು, ರೇವಣ್ಣ

Team Udayavani, Apr 20, 2019, 10:24 AM IST

manju

ಹಾಸನ: ಜಿಲ್ಲೆಯ ರಾಜಕಾರಣಿಗಳಿಗೆ ಚುನಾವಣೆಗಳೆಂದರೆ ಹಬ್ಬ. ಹಾಗಾಗಿ ಚುನಾವಣೆಗಳಲ್ಲಿ ದಣಿವರಿಯದೇ ಕಳೆದ ಒಂದು ತಿಂಗಳಿನಿಂದ ಅಬ್ಬರದಪ್ರಚಾರ ನಡೆಸಿದ್ದರು. ಚುನಾವಣೆ ಮುಗಿದ ಮರು ದಿನವೂ ವಿಶ್ರಾಂತಿ ಬಯ ಸದೇ, ಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮುಖಂಡರು, ಕಾರ್ಯಕರ್ತರನ್ನು ಮಾತನಾಡಿಸುತ್ತಾ ಕಾಲ ಕಳೆದರು.

ಇನ್ನು ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿದ್ದರು. ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಮತದಾನದ ಮರುದಿನವಾದ ಶುಕ್ರವಾರ ಮಾಧ್ಯಮ ಗೋಷ್ಠಿ ನಡೆಸಿ ಮತದಾರರು, ತಮ್ಮ ಪರ ಪ್ರಚಾರ ನಡೆಸಿದ ವರಿಗೆ ಧನ್ಯವಾದ ಹೇಳಿ ಶಿವಮೊಗ್ಗಕ್ಕೆ ಬಿಜೆಪಿ ಅಭ್ಯರ್ಥಿಪರ ಪ್ರಚಾರಕ್ಕೆ ತೆರಳುವ ಉತ್ಸಾಹದಲ್ಲಿದ್ದರು. ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಹೊಳೆನರಸೀಪುರದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿಯಾಗಿ ಚುನಾವಣೆಯ ಬೂತ್‌ವಾರು ಮತದಾನದ ವಿವರ ಪಡೆದು ತಮಗೆ ಬರಬಹುದಾದ ಮತಗಳ ಲೆಕ್ಕಾಚಾರದಲ್ಲಿ ಮುಳುಗಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರು ಮುಂಜಾನೆಯಿಂದಲೇ ತಮ್ಮ ನಿವಾಸಕ್ಕೆ ಬಂದ ಮುಖಂಡರು, ಕಾರ್ಯಕರ್ತರನ್ನು ಮಾತನಾಡಿಸಿ ಮತದಾನದ ವಿವರ ಪಡೆದರು. ನಂತರ ಹೊಳೆ ನರಸೀಪುರ, ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇವರ ಉತ್ಸವ ಜಾತ್ರೆಗಳಲ್ಲಿ ಪಾಲ್ಗೊಂಡರು. ಅದರ ನಡುವೆಯೇ ಸುದ್ದಿಗೋಷ್ಠಿ ನಡೆಸಿ ಮತದಾರರು, ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಧನ್ನವಾದ ಹೇಳಿದರು. ಮಧ್ಯಾಹ್ನ ಶಿವಮೊಗ್ಗಕ್ಕೆ ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರ ನಡೆಸಲು ಹೊರಟರು. ಅವರೊಂದಿಗೆ ವಿಧಾನಪರಿಷತ್‌ ಉಪ ಸಭಾಪತಿ ಎಸ್‌.ಎಲ್‌. ಧರ್ಮೇಗೌಡ ಅವರೂ ಶಿವಮೊಗ್ಗಕ್ಕೆ ತೆರಳಿದರು.

ನಿದ್ದೆ ಮಾಡದ ರೇವಣ್ಣ: ಚುನಾವಣಾ ಪ್ರಚಾರದಲ್ಲಿ ಕಳೆದ ಒಂದು ತಿಂಗಳಿನಿಂದ ತೊಡಗಿಕೊಂಡಿದ್ದ ರೇವಣ್ಣ ಅವರು ಕಣ್ತುಂಬ ನಿದ್ದೆ ಮಾಡಿದ್ದೇ ಇಲ್ಲ. ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗಲೂ ಅವರ ಕಣ್ಣುಗಳು ನಿದ್ದೆಯ ಮಂಪರಿನಲ್ಲಿದ್ದವು. ವಿಶ್ರಾಂತಿಗೆ ಹೋಗಿವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ವಿಶ್ರಾಂತಿಗೆಂದು ಎಲ್ಲೂ ಹೋಗಲ್ಲ. ಜಿಲ್ಲೆಯ ಜನರ ಋಣ ತೀರಿಸುವುದೊಂದೇ ನಮ್ಮ ಪ್ರಮುಖ ಗುರಿ ಎಂದು ಹೇಳಿದರು. ಏ.21ರ ವರೆಗೂ
ಶಿವಮೊಗ್ಗ, ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್‌ಅಭ್ಯéಥೀಗಳ ಪರ ಚುನಾವಣಾ ಪ್ರಚಾರಕ್ಕೆ ತೆರಳುವೆ. ಅಲ್ಲಿಂದ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸುವೆ ಎಂದರು.

7 ಕೇಜಿ ಇಳಿದ ಎ.ಮಂಜು: ಬಿಜೆಪಿ ಅಭ್ಯರ್ಥಿ ಎ. ಮಂಜು ಅವರು ಮತದಾನದ ಮರುದಿನ ಹಾಸನಕ್ಕೆ ಬಂದು ವಾಪಸ್‌ ತಮ್ಮ ಹುಟ್ಟೂರು ಹನ್ಯಾಳಿಗೆ ತೆರಳಿದರು. ನಾನು ವಿಶ್ರಾಂತಿಗೆ ಬೇರೆ ಸ್ಥಳಗಳಿಗೆ ಹೋಗುವುದಿಲ್ಲ. ಇಂದು ನನ್ನ ಮನೆಯಲ್ಲಿ ಪತ್ನಿ ಮತ್ತು ಮೊಮ್ಮಕ್ಕಳೊಂದಿಗೆ ಕಳೆಯುವೆ. ಶನಿವಾರ ಶಿವಮೊಗ್ಗಕ್ಕೆ ತೆರಳಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವೆ ಎಂದರು. ಚುನಾವಣಾ ಪ್ರಚಾರ ಆರಂಭಿಸಿದ ನಂತರ 7 ಕೇಜಿ ತೂಕ ಇಳಿದಿದೆ. 97 ಕೆ.ಜಿಯಿಂದ 90 ಕ್ಕೆ ಇಳಿದಿರುವೆ ಎಂದೂ 60ರ ಹರೆಯದ ಮಂಜು ಅವರು ಹೇಳಿದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.