ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ


Team Udayavani, Jan 6, 2020, 1:41 PM IST

makalige

ಹಾಸನ: ಸಂಸ್ಕಾರವುಳ್ಳ ವಿದ್ಯೆ ಗೌರವಯುತ ಜೀವನ ಕಟ್ಟಿಕೊಳ್ಳಲು ಸಹಕಾರಿ ಯಾಗುತ್ತದೆ ಎಂದು ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಹಾಸನ  ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು. ನಗರದ ಎಂ.ಜಿ. ರಸ್ತೆಯ ಶ್ರೀ ಆದಿಚುಂಚನಗಿರಿ ಆಂಗ್ಲ ಮಾಧ್ಯಮ ಶಾಲೆಯ  ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನಡೆಸಿದ ವಿಜ್ಞಾನ ವಿಷಯದ ಪ್ರಾಯೋಗಿಕ ಕಾರ್ಯಾಗಾರ ಉದ್ಘಾಟಿಸಿ ಆಶೀವರ್ಚನ  ನೀಡಿದರು.

ಸಮಯ ವ್ಯರ್ಥ ಮಾಡದಿರಿ: ವಿದ್ಯಾರ್ಥಿ ಜೀವನದಲ್ಲಿ ಸಮಯ  ವ್ಯರ್ಥ ಮಾಡದೇ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಶ್ರದ್ಧೆ ಹಾಗೂ ಆಸಕ್ತಿ ತೋರಿ ಕಲಿಯಬೇಕು. ಆಗ ಮಾತ್ರ ಬದುಕಿನಲ್ಲಿ ಉನ್ನತ ಗುರಿಯೆಡೆಗೆ ಸಾಗಲು ಸಾಧ್ಯ ವಾಗುತ್ತದೆ ಇಲ್ಲವಾ ದಲ್ಲಿ ಅನರ್ಥಗಳು ಅವನತಿಯತ್ತ  ಕರೆದೊಯ್ಯುತ್ತವೆ ಎಂದು ವಿದ್ಯಾರ್ಥಿ ಗಳಿಗೆ ಎಚ್ಚರಿಕೆ ನೀಡಿದರು.

ಪವಿತ್ರ ಮನೋಭಾವನೆಯಿಂದ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳುವ  ಗುಣವನ್ನು ವಿದ್ಯಾರ್ಥಿಗಳು ಬೆಳೆಸಿ ಕೊಳ್ಳಬೇಕು. ಆಸಕ್ತಿಯಿಂದ ಕಲಿಯುವ ವಿದ್ಯೆ ಸದಾ ಉಳಿಯುತ್ತದೆ ಹಾಗಾಗಿ ಮನಸ್ಸಿನಲ್ಲಿರುವ ಕೆಟ್ಟ ವಿಷಯಗಳನ್ನು  ಹೊರ  ಹಾಕಿದರೆ ಒಳಿತು ತುಂಬಿಸಿ ಕೊಳ್ಳಲು ನೆರವಾಗುತ್ತದೆ ಎಂದರು.

ಹೊಸ ವಿಷಯ ಕಲಿಯಿರಿ: ಹೊಸ ವಿಷಯಗಳ ಕಲಿಕೆಗೆ ವಿದ್ಯಾರ್ಥಿಗಳು  ಸದಾ  ಉತ್ಸುಕರಾಗಿರಬೇಕು. ಕಲಿಸುವ ವರಿಗೆ ಇರುವ ಶ್ರದ್ಧೆ ಕಲಿಯುವವರಿಗೂ ಇದ್ದರೆ ಮಾತ್ರ ಅದು ಸಾರ್ಥಕ ಎನಿಸಿ ಕೊಳ್ಳುತ್ತದೆ. ನಮ್ಮ ಜ್ಞಾನ  ಭಂಡಾರಕ್ಕೆ ಸದಾ ಹೊಸ ಷಯಗಳನ್ನು ತುಂಬುವ ಕೆಲಸ ನಿರಂತರವಾಗಿ ಆಗಬೇಕು.

ಆಗ ಮಾತ್ರ ಪರಿಪೂರ್ಣ ಮನುಷ್ಯ ಎನಿಸಿಕೊಳ್ಳಲು ಸಾಧ್ಯವಿದೆ ಎಂದು ವಿದ್ಯಾರ್ಥಿಗಳಿಗೆ ಶಂಭುನಾಥ ಸ್ವಾಮೀಜಿ ಕಿವಿಮಾತು ಹೇಳಿದರು. ಹೊಳೆರನಸೀಪುರ ತಾಲೂಕಿನ ಅಕ್ಷರ ದಾಸೋಹ ಸಹಾಯಕ  ಯೋಜನಾ ನಿರ್ದೇಶಕ ಹರೀಶ್‌ ಮಾತನಾಡಿ, ಯಾವುದೇ ಕೆಲಸದಲ್ಲಿ ಒಂದೆರಡು ಬಾರಿ ವಿಫ‌ಲರಾದರೆ ನಿರಾಶರಾಗ ಬೇಕಿಲ್ಲ. ಏಕೆಂದರೆ ಸತತ  ಪರಿಶ್ರಮ ದಿಂದ ಒಂದಿಲ್ಲೊಂದು ದಿನ ಸಾಧನೆ ಸಾಧ್ಯವಿದೆ ಎಂಬುದನ್ನು ಅರಿತು ಮುನ್ನಡೆಯಬೇಕು ಎಂದರು.

ನಿವೃತ್ತ ಉಪ ಪ್ರಾಂಶುಪಾಲ ಪಾರ್ಥ  ಸಾರಥಿ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ಷಯದ ಪ್ರಾಯೋಗಿಕ ಕಾರ್ಯಾಗಾರ ನಡೆಸಿಕೊಟ್ಟರು. ಶ್ರೀ ಆದಿಚುಂಚನಗಿರಿ ಪಿಯು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್‌, ಮಠದ ವ್ಯವಸ್ಥಾಪಕ ಚಂದ್ರಶೇಖರ್‌, ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ವಿಕ್ರಮ್‌ದೇವ್‌ ಪ್ರಭು, ಶಿಕ್ಷಕ ಮಂಜುನಾಥ್‌ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Davanagere;ಆಲದಮರ ಕೆಳಗೆ ಶಾಂತವಾಗಿ ಕುಳಿತುಕೊಳ್ಳಲಿ: ಸಿದ್ದೇಶ್ವರ್ ಗೆ ರವೀಂದ್ರನಾಥ್ ಟಾಂಗ್

Ekam web series produced by Rakshit is coming to the audience; Full details are here

ಪ್ರೇಕ್ಷಕರೆದುರು ಬರುತ್ತಿದೆ ರಕ್ಷಿತ್ ನಿರ್ಮಾಣದ Ekam ವೆಬ್ ಸಿರೀಸ್; ಪೂರ್ಣಮಾಹಿತಿ ಇಲ್ಲಿದೆ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Chikkodi;ಸಮಸ್ಯೆ ಬಗೆಹರಿಸಲು, ಬೇಡಿಕೆ ಈಡೇರಿಸಲು ಪ್ರಯತ್ನ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ

Mudhol ಬೈಕ್‌ಗಳ ಸರಣಿ ಕಳ್ಳತನ; ಆರೋಪಿ ಪೊಲೀಸ್‌ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

Alnavar: ಎತ್ತ ನೋಡಿದರೂ ಹಕ್ಕಿಗಳ ಕಲರವ

renukaacharya

BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ

Rabkavi Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Rabkavi-Banhatti ಮೋದಿ ಪ್ರಧಾನಿ; ಹರಕೆ ತೀರಿಸಿದ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.