ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತರಗತಿ: ಶೀಘ್ರ ನಿರ್ಧಾರ


Team Udayavani, May 24, 2020, 6:17 AM IST

sslctaragarti

ಹಾಸನ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜೂ.1  ರಿಂದ ತರಗತಿ ಪ್ರಾರಂಭಿಸಬೇಕೆಂಬ ಒತ್ತಾಯಗಳು ಬಂದಿವೆ. ಆದರೆ ಸಾಧಕ, ಬಾಧಕಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. 25ರಿಂದ ಜು.4ರ ವರೆಗೆ ಪರೀಕ್ಷೆ ನಡೆಸಲು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲರ ಜತೆ ಚರ್ಚಿಸಿ ಮಕ್ಕಳ ಹಿತವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳಲಾಗಿದೆ. ಚಂದನವಾಹಿನಿಯಲ್ಲಿ ಎಲ್ಲ ವಿಷಯಗಳ ಪುನರ್‌ಮನನ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತಿದೆ ಎಂದರು.

ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಸರ್‌ ವಿತರಣೆ: ಮಕ್ಕಳಿಗೆ ಮಾಸ್ಕ್ ವಿತರಣೆ, ಸ್ಯಾನಿಟೈಸರ್‌, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಶಾಸಕರು ಮಕ್ಕಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಸಿಬ್ಬಂದಿ ಮಕ್ಕಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡುವರು. ಸ್ಕೌಟ್ಸ್‌,ಗೈಡ್ಸ್‌ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಮೂರು ಜಿಲ್ಲೆಗಳಿಗೆ ಭೇಟಿ ನೀಡಿ  ಸಮಾಲೋಚನೆ ನಡೆಸಲಾಗಿದೆ. ಮುಂದಿನ ವಾರ ಹತ್ತು ಜಿಲ್ಲೆಗಳ ಪ್ರವಾಸ ಕೈಗೊಂಡು ವಾಸ್ತವ ಸ್ಥಿತಿ ತಿಳಿದುಕೊಳ್ಳಲಾಗುವುದು. ಕೆಲ ಜಿಲ್ಲೆಗಳಲ್ಲಿ ಶಿಕ್ಷಕರು ವಾಟ್ಸ್‌ಆ್ಯಪ್‌ ಮೂಲಕ ಪರೀಕ್ಷೆ , ರಸಪ್ರಶ್ನೆ ಸ್ಪರ್ಧೆ ನಡೆಸುವುದನ್ನು ಮಾಡುತ್ತಿದ್ದಾರೆ ಎಂದು ಪರೀಕ್ಷಾ ಸಿದ್ಧತೆಯ ವಿವರ ನೀಡಿದರು.

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ: ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿದರೆ ಕೆಎಸ್‌ಆರ್‌ಟಿಸಿ ಬಸ್‌ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಬೇಕೆಂದು ಸಾರಿಗೆ ಸಚಿವರಿಗೆ ಮನವಿ  ಮಾಡಲಾಗುವುದು. ಮಂದಿನ ದಿನಗಳಲ್ಲಿ ಬಸ್‌ಗಳ ಓಡಾಟವೂ ಏರಿಕೆಯಾಗಲಿದೆ. ವಿದ್ಯಾರ್ಥಿಗಳು ಆತಂಕ ಇಲ್ಲದೆ ಪರೀಕ್ಷೆ ಬರೆಯಬೇಕು ಎಂದರು. ಶಿಕ್ಷಣ ಇಲಾಖೆ ಬಳಿ 75 ವರ್ಷ ಹಾಗೂ ಶತಮಾನದ ಶಾಲೆಗಳ ಪಟ್ಟಿ ಇದ್ದು, ಅವುಗಳ ಪುನಶ್ಚೇತನಕ್ಕೆ ಕಾರ್ಯಕ್ರಮ ರೂಪಿಸಲಾಗು ವುದು ಎಂದು ಹೇಳಿದರು.

ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ: ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವನ್ನು ಬದಲಾವಣೆ ಮಾಡಲು ಬಯಸುವ ವಿದ್ಯಾರ್ಥಿಗಳು ಮೇ 29ರೊಳಗೆ ಮಾಹಿತಿ ನೀಡಬೇಕು. ಬದಲಾವಣೆ ಮಾಡಿಕೊಳ್ಳದೇ ಇದ್ದರೆ ಮೂಲ ಪರೀಕ್ಷಾ ಕೇಂದ್ರದಲ್ಲೇ ಪರೀಕ್ಷೆ ಬರೆಯುವುದು ಕಡ್ಡಾಯವಾಗುತ್ತದೆ. ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಂಡರೂ ಹಳೆಯ  ನೋಂದಣಿ ಸಂಖ್ಯೆಯೇ ಮುಂದು ವರಿಯುತ್ತದೆ ಎಂದು ತಿಳಿಸಿದರು. ಜಿಪಂ ಸಿಇಒ ಬಿ.ಎ.ಪರಮೇಶ್‌, ಶಾಸಕ ಪ್ರೀತಂ ಗೌಡ, ಡಿಡಿಪಿಐ ಎಸ್‌.ಪ್ರಕಾಶ್‌ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.