ಬಿಸಿಎಂ ಹಾಸ್ಟೆಲ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ

Team Udayavani, Oct 24, 2019, 3:00 AM IST

ಚನ್ನರಾಯಪಟ್ಟಣ: ರಾಜ್ಯ ಸರ್ಕಾರದಿಂದ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಾಲೂಕಿನಲ್ಲಿ ವಸತಿ ನಿಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 27 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಸಿ.ಎನ್‌.ಬಾಲಕೃಷ್ಣ ತಿಳಿಸಿದರು. ಪಟ್ಟಣದ ಹೊರವಲಯದಲ್ಲಿ ಇಲಾಖೆಯಿಂದ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

200 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ: ಸುಮಾರು 200 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ತಂಗುವಂತೆ ಎರಡು ಕಟ್ಟಡಗಳನ್ನು 30 ಗುಂಟೆ ಜಾಗದಲ್ಲಿ ನಿರ್ಮಾಣ ಮಾಡಲಾಗುವುದು.ಇದರಿಂದ ತಾಲೂಕಿನ ವಿದ್ಯಾರ್ಥಿಗಳಲ್ಲದೇ ಮಂಡ್ಯ ಜಿಲ್ಲೆಯ ನಾಗಮಂಗಲ, ಕೆ.ಆರ್‌.ಪೇಟೆ ಭಾಗದ ವಿದ್ಯಾರ್ಥಿಗಳಿಗೂ ಅನುಕೂಲ ಆಗಲಿದೆ ಎಂದರು.

ಹಾಸ್ಟೆಲ್‌ ನಿರ್ಮಾಣ: 3.50 ಕೋಟಿ ರೂ. ವೆಚ್ಚದಲ್ಲಿ ಹಿರೀಸಾವೆ ಹೋಬಳಿ ಕೇಂದ್ರದಲ್ಲಿ ವಸತಿ ನಿಲಯ, ಪಟ್ಟಣದ ಆದರ್ಶ ನಗರದಲ್ಲಿ 3.50 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ವಸತಿನಿಲಯ, ಒಂದು ಕೋಟಿ ರೂ. ವೆಚ್ಚದಲ್ಲಿ ದೇವರಾಜು ಅರಸು ಭವನ, ವೆಂಕಟೇಶ್ವರ ಲೇಔಟ್‌ನಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳ ವಸತಿ ನಿಲಯ ಪ್ರಾರಂಭಿಸಲಾಗಿದೆ. ಈಗಾಗಲೇ ಸುಮಾರು 27 ಕೋಟಿ ರೂ. ಅನುದಾನದಲ್ಲಿ ಶೇ.50 ರಷ್ಟು ಕಾಮಗಾರಿ ಮುಕ್ತಾಯವಾಗಿದೆ ಎಂದು ಹೇಳಿದರು.

ವಿವಿಧ ಅಭಿವೃದ್ಧಿ ಕಾಮಗಾರಿ: ಸುಮಾರು 11 ಕೋಟಿ ವೆಚ್ಚದಲ್ಲಿ ಹಿರೀಸಾವೆ ಹೋಬಳಿ ಕೇಂದ್ರದಲ್ಲಿ, ಚನ್ನರಾಯಪಟ್ಟಣದಲ್ಲಿ ಎರಡು ಹಿಂದುಳಿದ ವರ್ಗಗಳ ವಸತಿಗೃಹ ನಿರ್ಮಾಣ, ಗೂರಮಾರನಹಳ್ಳಿ ಮುರಾರ್ಜಿ ದೇಸಾಯಿ ಪ್ರಾಂಶುಪಾಲ ವಸತಿಗೃಹ, ವಸತಿ ಶಾಲೆಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಸಭಾಭವನ, ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನಾಡಕಚೇರಿ ಕಟ್ಟಡ ನಿರ್ಮಾಣ, 2 ಕೋಟಿ ರೂ. ವೆಚ್ಚದಲ್ಲಿ ಮೆಟ್ರಿಕ್‌ ಪೂರ್ವ ಬಾಲಕಿರ ವಸತಿ ನಿಲಯ ಮಾಡಲಾಗುತ್ತಿದೆ ಎಂದರು.

ಹೇಮಾವತಿ ನಾಲೆಗೆ ಬೇಲಿ: ಹೇಮವತಿ ಎಡದಂಡೆ ನಾಲೆ ಸಮೀಪದಲ್ಲಿ ವಿದ್ಯಾರ್ಥಿ ವಸತಿ ನಿಲಯ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಯಿಂದ ಹೇಮಾವತಿ ನಾಲೆ ಎರಡೂ ಬದಿಗೆ ಫೆನ್ಸಿಂಗ್‌(ಬೇಲಿ) ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂಬ ಕೀಳರಿಮೆ ಮಾಡಿಕೊಳ್ಳುವುದು ಬೇಡ ದೇಶದಲ್ಲಿ ಹವಲು ಸಾಧಕರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ ಎಂದು ಹೇಳಿದರು.

ಸೌಲಭ್ಯ ಸದ್ಬಳಕೆಯಾಗಲಿ: ಗ್ರಾಮೀಣ ಭಾಗದ ರೈತರ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ತಾಲೂಕಿನಲ್ಲಿ ಹೆಚ್ಚು ವಸತಿ ನಿಲಯ ಪ್ರಾರಂಭಿಸಲಾಗುತ್ತಿದೆ. ಸರ್ಕಾರ ನೀಡುವ ಸವಲತ್ತು ಪಡೆಯಲು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮುಂದಾಗಬೇಕು. ತಾಲೂಕಿನಲ್ಲಿ ಹೆಚ್ಚು ವಸತಿ ನಿಲಯ ಪ್ರಾರಂಭ ಮಾಡುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಲಾಗುವುದು ಎಂದು ತಿಳಿಸಿದರು. ಪುರಸಭೆ ಸದಸ್ಯ ಗಣೇಶ್‌, ಮಾಜಿ ಸದಸ್ಯ ಸಿ.ಟಿ.ಅಶೋಕ, ಬಿಸಿಎಂ ಅಧಿಕಾರಿ ಮಂಜುನಾಥ, ಲೋಕೋಪಯೋಗಿ ಇಲಾಖೆ ಅಭಿಯಂತರರಾದ ಕಾಡೇಗೌಡ, ರಂಗಯ್ಯ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌-ಜನವರಿ ತಿಂಗಳ ಅವಧಿಯಲ್ಲಿ ದೇಶದ ಚಾಲ್ತಿ ಖಾತೆ ಕೊರತೆ(ಸಿಎಡಿ)ಯ ಮೇಲೆ ಚಿನ್ನದ ಆಮದು ಶೇ.9ರಷ್ಟು ಕುಸಿದು ಸುಮಾರು...

  • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...