36 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ

Team Udayavani, Nov 29, 2019, 3:20 PM IST

hasan-tdy-002

ಹೊಳೆನರಸೀಪುರ: ಹಾಸನದಿಂದ ಪಟ್ಟಣಕ್ಕೆ ಬರುವ ರೈಲ್ವೆಗೇಟ್‌ ಮೂಲಕ ಹಾದು ಹೋಗುವ ವಾಹನ ಗಳ ಸುಗಮ ಸಂಚಾರಕ್ಕಾಗಿ 36 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಿಸಲಾಗುತ್ತದೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ನುಡಿದರು.

ಪಟ್ಟಣದ ರೈಲ್ವೆ ಗೇಟ್‌ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿ ಮಾತ ನಾಡಿದ ಅವರು, ಈಗಿರುವ ಚನ್ನಾಂಬಿಕ ಪಕ್ಕದ ರೈಲ್ವೆ ಗೇಟ್‌ ಮತ್ತು, ಸೂರನಹಳ್ಳಿ ರೈಲ್ವೇಗೇಟ್‌ ಬಳಿ ಅಂಡರ್‌ ಪಾಸ್‌ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು.

ವಾಹನ ಸಂಚಾರಕ್ಕೆ ಅನುಕೂಲ: ಈ ಮೇಲ್ಸೇತುವೆ ಹೇಮಾವತಿ ಸೇತುವೆಯಿಂದ ಆರಂಭಗೊಂಡು ಸೂರನಹಳ್ಳಿ ಗೇಟ್‌ ನಿಂದ ಮುಂದೆ ಡಬ್ಬಲ್‌ ಟ್ಯಾಂಕ್‌ವರೆಗೆ ಸೇತುವೆ ನಿರ್ಮಾಣವಾಗಲಿದೆ ಎಂದರು. ಈ ಮೇಲ್ಸೇತುವೆ ಬಿಡ್ಜ್ನಿಂದ ಪಟ್ಟಣದ ಹೊರ ಹೋಗುವ ದೊಡ್ಡ ವಾಹನಗಳು ನೇರವಾಗಿ  ಮೇಲ್ಸೇತುವೆ ಮೇಲೆ ದಾಟಿ ಚಲಿಸಲಿದೆ. ಉಳಿದಂತೆ ಎರಡು ಅಂಡರ್‌ ಪಾಸ್‌ ರಸ್ತೆ ನಿಲ್ದಾಣದಿಂದ ದ್ವಿಚಕ್ರ ಮತ್ತು ಕಾರುಗಳು ಸಲೀಸಾಗಿ ಸಾಗಲು ಅನುಕೂಲ ವಾಗಲಿದೆ ಎಂದರು.

ವಿದ್ಯಾರ್ಥಿಗಳಿಗೆ ಅನುಕೂಲ: ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ರೈಲ್ವೆ ಹಳಿಗಳನ್ನು ದಾಟಿ ಹೋಗಬೇಕಾಗಿತ್ತು. ಮೇಲ್ಸೇತುವೆ ನಿರ್ಮಾಣದಿಂದ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಅನುಕೂಲವಾಗಲಿದೆ ಎಂದರು. ಪ್ರಸ್ತುತ ಹಾಸನ ಹಂಗರಹಳ್ಳಿ ಮತ್ತು ಹೊಳೆ ನರಸೀಪುರದ ಬಳಿಗೆ ಇಂದು ಗುದ್ದಲಿ ಪೂಜೆ ನಡೆದಿದೆ. ಮೈಸೂರು ಕಡೆಗೆ ತೆರಳುವ ಹಂಪಾಪುರದ ಬಳಿ ಯೊಂದು ಮೇಲ್ಸೇತುವೆ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧವಾಗಿದ್ದು, ಅದೂ ಸಧ್ಯದಲ್ಲೇ ಆರಂಭವಾಗಲಿದೆ ಎಂದು ತಿಳಿಸಿದರು.

ಸಂಚಾರ ದಟ್ಟಣೆಗೆ ಮುಕ್ತಿ: ಇತ್ತೀಚಿನ ದಿನಗಳಲ್ಲಿ ರೈಲು ಬರುವ ವೇಳೆ ವಾಹನಗಳು ಬಹಳ ಹೊತ್ತು ನಿಂತು ಚಲಿಸಬೇಕಿತ್ತು. ಇದರಿಂದ ಕಾಲ ವಿಳಂಬವಾಗುತ್ತಿತ್ತು. ಈ ಯೋಜನೆ ಅನುಷ್ಠಾನಗೊಂಡರೆ ವಾಹನ ದಟ್ಟಣೆ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದರು.

ರಸ್ತೆ ಅಗಲೀಕರಣಕ್ಕೆ ಕ್ರಮ: ಮೇಲ್ಸೇತುವೆ ನಿರ್ಮಾಣದಿಂದ ಮುಂದೆ ಪಟ್ಟಣದ ಮಧ್ಯ ಭಾಗದಲ್ಲಿ ಸಾಗುವ ರಸ್ತೆ ಅಗಲೀಕರಣ ಆಗಲಿದೆಯೇ ಎಂದು ಸಾರ್ವಜನಿಕರಿಂದ ಬಂದ ಪ್ರಶ್ನೆಗೆ ಮೊದಲು ಈ ಮೇಲ್ಸೇತುವೆ ನಿರ್ಮಾಣವಾಗಲಿ. ಆಮೇಲೆ ಒಂದಡೆ ಕುಳಿತು ಅಗಲೀಕರಣದ ಬಗ್ಗೆ ಚರ್ಚಿಸಿ ತಿರ್ಮಾನಿ ಸೋಣ ಎಂದು ಹೇಳಿದರು.

ಮಹಿಳಾ ಕಾಲೇಜು ಅಭಿವೃದ್ಧಿಗೆ ಕ್ರಮ: ಪ್ರಸ್ತುತ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೇಲಂತಸ್ತು ನಿರ್ಮಾಣಕ್ಕೆ ಒಂದು ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜೊತೆಗೆ ಕಾಲೇಜಿಗೆ ಅವಶ್ಯ ವಾಗಿರುವ ಕಂಪ್ಯೂಟರ್‌, ಡೆಸ್ಕ್ಗಳನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಪಟ್ಟಣದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಮತ್ತಷ್ಟು ಉತ್ಕೃಷ್ಟವಾ ಗಿಡಲು ಬೇಕಾದ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರು, ಪಕ್ಷದ ಕಾರ್ಯಕರ್ತರು, ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.