ಸಚಿವ ರೇವಣ್ಣ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

Team Udayavani, May 1, 2019, 3:00 AM IST

sachiva

ಹಾಸನ: ಅಕ್ರಮ ಮತದಾನಕ್ಕೆ ಕುಮ್ಮಕ್ಕು ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ಅವರ ಮೇಲೂ ಪ್ರಕರಣ ದಾಖಲು ಮಾಡಬೇಕು ಎಂದು ಹಾಸನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರು ಜಿಲ್ಲಾ ಚುನಾವಣಾಧಿಕಾರಿಯವರನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲೇ ಹೊಳೆನರಸೀಪುರ ಮತ್ತು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಕ್ರಮಗಳು ನಡೆಯುವ ಶಂಕೆ ವ್ಯಕ್ತಪಡಿಸಿ ಸೂಕ್ತ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಜೆಪಿಯು ಜಿಲ್ಲಾ ಚುನಾವಣಾಧಿಕಾರಿಯವರಿಗೆ ದೂರು ನೀಡಿತ್ತು.

ಆದರೆ ಕ್ರಮ ಕೈಗೊಳ್ಳದ ಪರಿಣಾಮ ಮತದಾನದ ದಿನ ಸಂಜೆ 5 ಗಂಟೆವರೆಗೆ ಶೇ. 56 ರಷ್ಟಿದ್ದ ಮತದಾನ ಸಂಜೆ 6 ಗಂಟೆಗೆ ಕೆಲವು ಮತಗಟ್ಟೆಗಳಲ್ಲಿ ಶೇ.90 ರಷ್ಟಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದೇವೆ ಎಂದು ಹೇಳಿದರು.

ತನಿಖೆಯಾಗಲಿ: ಶೇ.90ಕಿಂತ ಹೆಚ್ಚು ಮತದಾನವಾಗಿರುವ ಮತಗಟ್ಟೆಗಳ ಬಗ್ಗೆ ತನಿಖೆ ನಡೆಸಬೇಕು. ಹೊಳೆನರಸೀಪುರ ವಿಧಾನಸಭಾ ವ್ಯಾಪ್ತಿಯ 19 ಬೂತ್‌ಗಳು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಬೂತ್‌ಗಳಲ್ಲಿ ಅಕ್ರಮ ಮತದಾನ ನಡೆದಿರುವ ಶಂಕೆ ಇದೆ.

ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿಯವರು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಕೆಲವು ಮತಗಟ್ಟೆಗಳಲ್ಲಿ ಶೇ.100 ರಷ್ಟು ಮತದಾನವಾಗಿದೆ ಈ ಬಗ್ಗೆ ತನಿಖೆ ನಡೆಯಬೇಕು ಎಂದು ಮನವಿ ಮಾಡಿದರು.

ಅಕ್ರಮ ಮತದಾನಕ್ಕೆ ಕುಮ್ಮಕ್ಕು: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಡುವಲಹಿಪ್ಪೆಯ ಮತಗಟ್ಟೆಯಲ್ಲಿ ಸಚಿವ ಎಚ್‌.ಡಿ.ರೇವಣ್ಣ ಅವರು ಅಕ್ರಮ ಮತದಾನಕ್ಕೆ ಕುಮ್ಮಕ್ಕು ನೀಡಿರುವುದು ವಿಡಿಯೋ ದೃಶ್ಯಾವಳಿಗಳಲ್ಲಿ ಸಾಬೀತಾಗಿದೆ. ರೇವಣ್ಣ ಅವರು ಅರ್ಧಗಂಟೆಗೂ ಹೆಚ್ಚು ಕಾಲ ಮತಗಟ್ಟೆಯಲ್ಲಿದ್ದರು.

ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆ ಮತಗಟ್ಟೆಯ ಬಿಜೆಪಿ ಪೋಲಿಂಗ್‌ ಏಜೆಂಟ್‌ ಜಿಲ್ಲಾ ಚುನಾವಣಾಧಿಕಾರಿಯವರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಯವರು ಮೂವರು ಮತಗಟ್ಟೆ ಅಧಿಕಾರಿಗಳನ್ನು ಸಸ್ಪಂಡ್‌ ಮಾಡಿ ಒಟ್ಟು 7 ಜನರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಆದರೆ ಸಚಿವ ರೇವಣ್ಣ ಅವರ ಮೇಲೆ ಏಕೆ ದೂರು ದಾಖಲಾಗಿಲ್ಲವೆಂದು ಪ್ರಶ್ನಿಸಿದರು.

ಕಾನೂನು ಪ್ರಕಾರ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಆದರೆ ಸಚಿವ ರೇವಣ್ಣ ಅವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಅಕ್ರಮ ನಡೆದಿದೆಯೋ ಅಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್‌ ನಾಮಪತ್ರದಲ್ಲಿ ಲೋಪ: ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ನಾಮಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಾಕಷ್ಟು ಲೋಪಗಳಿವೆ. ಅವುಗಳು ಸಾಬೀತಾದರೆ ಅವರು ಚುನಾವಣಾ ಸ್ಪರ್ಧೆಗೆ 6 ವರ್ಷ ಅನರ್ಹರಾಗುವರು ಎಂದು ಎ. ಮಂಜು ಹೇಳಿದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.