ಸಮಾಜ ಕಲ್ಯಾಣ ಇಲಾಖೆ ಅನುದಾನ ದುರ್ಬಳಕೆ ತನಿಖೆಗೆ ಆಗ್ರಹ

Team Udayavani, Jan 9, 2020, 3:00 AM IST

samaja-kalu

ಬೇಲೂರು: ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಹಾಸ್ಟೆಲ್‌ಗ‌ಳಿಗೆ ನೀಡಿರುವ 50 ಲಕ್ಷ ರೂ. ದುರ್ಬಳಕೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದುರ್ಬಳಕೆ ಮಾಡಿಕೊಂಡಿದ್ದು, ಅವರ ವಿರುದ್ಧ ಸಮಗ್ರ ತನಿಖೆ ನಡೆಸಬೇಕು ಎಂದು ತಾಲೂಕು ಪಂಚಾಯಿತಿ ಸದಸ್ಯ ಮಂಜುನಾಥ್‌ ಒತ್ತಾಯಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಈ ಹಿಂದೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಭರಮಪ್ಪ ಎಂಬುವರು 2019 ಮಾರ್ಚ್‌ ಅಂತ್ಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಬೇಕಾದ ಸೌಲತ್ತುಗಳನ್ನು ವಂಚಿಸಿ ಸರ್ಕಾರದ ಸುಮಾರು 50 ಲಕ್ಷ ಅನುದಾನವನ್ನು ದುರುಪಯೋಗಪಡಿಸಿಕೊಂಡಿದ್ದು ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಿ ಎಂದು ಹಾಲಿ ಸಮಾಜಕಲ್ಯಾಣ ಇಲಾಖೆ ಅಧಿಕಾರಿ ಮೋಹನ್‌ಕುಮಾರ್‌ ಅವರನ್ನು ಒತ್ತಾಯಿಸಿದರು.

ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಶಶಿಕುಮಾರ್‌ ಮತ್ತು ಉಪಾಧ್ಯಕ್ಷೆ ಜಮುನಾ ತಾಲೂಕಿನಲ್ಲಿ ಪರಿಶಿಷ್ಟ ವಿದ್ಯಾರ್ಥಿನಿಲಯಗಳಲ್ಲಿ ಶುಚಿತ್ವ ಇರುವುದಿಲ್ಲ. ಮಕ್ಕಳಿಗೆ ಗುಣ ಮಟ್ಟದ ಆಹಾರ ನೀಡುವುದಿಲ್ಲ. ಅಧಿಕಾರಿಗಳು ಸರ್ಕಾರದ ಅನುದಾನವನ್ನು ದುರುಪಯೋಗಪಡಿಸಿಕೊಂಡರೆ ಮಕ್ಕಳ ಭವಿಷ್ಯ ಎನು ಎಂದು ಪ್ರಶ್ನಿಸಿದರು.

ತನಿಖೆಗೆ ಆದೇಶ: ಅಧ್ಯಕ್ಷ ರಂಗೇಗೌಡ ಮಾತನಾಡಿ, ಈ ಅವ್ಯವಹಾರದ ಬಗ್ಗೆ ಹಿಂದಿನಿಂದಲೂ ಚರ್ಚೆ ನಡೆಸಲಾಗಿದೆ. ತಕ್ಷಣ ಭಷ್ಟಚಾರದ ನಡೆದಿರುವ ಬಗ್ಗೆ ವಿವರಣೆ ನೀಡಬೇಕು ಎಂದು ಆದೇಶಿಸಿದರು. ಇಂತಹ ಅಧಿಕಾರಿಗಳಿಂದ ಸರ್ಕಾರದ ಯೋಜನೆಗಳು ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ. ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮಕೈಗೊಳ್ಳಿ ಎಂದು ಸೂಚನೆ ನೀಡಿದರು.

ಗೈರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಸದಸ್ಯ ಬಿ.ಎಸ್‌.ತಮ್ಮಣ್ಣಗೌಡ ಮಾತನಾಡಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಗೆ ಕೆಲ ಇಲಾಖೆ ಅಧಿಕಾರಿಗಳು ಅಗಮಿಸದೇ ಇಲಾಖೆ ಪ್ರಗತಿ ತಿಳಿಯುತ್ತಿಲ್ಲ. ಅಧ್ಯಕ್ಷರು ಈ ಬಗ್ಗೆ ಗಮನಹರಿಸಿ ಸಭೆಗೆ ಗೈರಾದ ಇಲಾಖೆ ಅಧಿಕಾರಿಗಳ ವಿರುದ್ಧ ಜಿಪಂ ಸಿಇಒಗೆ ದೂರು ನೀಡಲು ಒತ್ತಾಯಿಸಿದರು.ಸಭೆಯಲ್ಲಿ ತಾಪಂ ಸಾಯಿ ಸಮಿತಿ ಅಧ್ಯಕ್ಷ ರವಿ. ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್‌ ಇದ್ದರು.

ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಸದಸ್ಯ ಶಶಿಕುಮಾರ್‌ ಮಾತನಾಡಿ, ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ರೋಗಿಗಳನ್ನು ವೈದ್ಯರು ಪರೀಕ್ಷಿಸದೇ ನಾಳೆ ಬನ್ನಿ ಎಂದು ಉಡಾಫೆ ಉತ್ತರ ನೀಡಿ ಕಳುಹಿಸುತ್ತಾರೆ. ಜನ ಪ್ರತಿನಿಧಿಯಾದ ನನಗೇ ಈರೀತಿಯಾದರೆ ಜನ ಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದರು. ನಿರ್ಲಕ್ಷ್ಯ ವಹಿಸಿರುವ ವೈದ್ಯರ ವಿರ್ಧುಧ ಕೂಡಲೇ ಕ್ರಮ ಕೈಗೊಳ್ಳುವಂತೆ ತಾಲೂಕು ಅರೋಗ್ಯಾಧಿಕಾರಿ ವಿಜಯ್‌ ಅವರನ್ನು ಒತ್ತಾಯಿಸಿತಿಳಿಸಿದರು.

ಪಡಿತರ ಬಯೋ ಮೆಟ್ರಿಕ್‌ ಸಮಸ್ಯೆ ಸರಿಪಡಿಸಿ: ಸದಸ್ಯ ಸೋಮಯ್ಯ ಮಾತನಾಡಿ, ಆಹಾರ ಇಲಾಖೆಯ ಅವಾಂತರದಿಂದ ಪರಿತರ ಚೀಟಿದಾರರು ಬೆರಳಚ್ಚು ನೀಡಲು ದಿನ ನಿತ್ಯ ಪರದಾಡುವಂತಾಗಿದ್ದು, ಬಡವರು ಕೂಲಿ ಕಾರ್ಮಿಕರ ಬೆರಳಚ್ಚು ನೀಡಲು ಬೆಳಗ್ಗೆಯಿಂದ ಸಂಜೆಯವರೆಗೆ ನ್ಯಾಯಬೆಲೆ ಅಂಗಡಿ ಮುಂದೆ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ. ಯಾವಾಗ ನೋಡಿದರು ಸರ್ವರ್‌ ಇಲ್ಲ ಎಂದು ಅಂಗಡಿ ಮಾಲೀಕರು ಹೇಳುತ್ತಿದ್ದು ಇದರಿಂದ ಗ್ರಾಮೀಣ ಜನರು ಪರಿತಪಿಸುತ್ತಿದ್ದಾರೆ. ಖಾಸಗಿಯವರು ಬೆರಳಚ್ಚು ಪಡೆಯುವ ವ್ಯವಸ್ಥೆ ಕೈಗೊಳ್ಳಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದರು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.