ಮಂಜು ವಿರುದ್ಧ ಜಿಲ್ಲಾ ಮುಖಂಡರ ವಾಗ್ಧಾಳಿ

Team Udayavani, Mar 31, 2019, 1:08 PM IST

manju-vir

ಹಾಸನ: ಕಾಂಗ್ರೆಸ್‌ ಪಕ್ಷದಿಂದ 2 ಬಾರಿ ಶಾಸಕರಾಗಿ , ಎರಡೂವರೆ ವರ್ಷ ಮಂತ್ರಿಯಾಗಿ ಅಧಿಕಾರ ಅನುಭವಿಸಿ ಈಗ ಬಿಜೆಪಿ ಸೇರಿರುವ ಎ.ಮಂಜು ಅವಕಾಶವಾದಿ ರಾಜಕಾರಣಿ. ಎ.ಮಂಜು ವಿರೋಧಿ ಅಲೆಯಲ್ಲಿ ಬಿಜೆಪಿ ಜಿಲ್ಲೆಯಲ್ಲಿ ಕೊಚ್ಚಿ ಹೋಗಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಮುಖಂಡರು ವಾಗ್ಧಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಮು, ಮಾಜಿ ಸಚಿವ ಎ.ಮಂಜು ಬಿಜೆಪಿಯನ್ನು ಮುಳುಗಿಸಿ ಕಾಂಗ್ರೆಸ್‌ಗೆ ಬಂದಿದ್ದ ಎ.ಮಂಜು, ಕಾಂಗ್ರೆಸ್‌ನಲ್ಲಿ ಶಾಸಕರಾಗಿ, ಮಂತ್ರಿಯಾಗಿ ಯಾವ ಸಾಧನೆ ಮಾಡಿದರು? ಇವರಿಂದ ಕಾಂಗ್ರೆಸ್‌ ಪಕ್ಷ ಸಂಘಟನೆಯಾಗಲಿಲ್ಲ. ಈಗ ಅವರು ಪಕ್ಷ ಬಿಟ್ಟಿರುವುದರಿಂದ ಕಾಂಗ್ರೆಸ್‌ಗೆ ಹಾನಿಯೇನೂ ಇಲ್ಲ. ಈಗ ಬಿಜೆಪಿ ಸೇರಿರುವ ಇಂಥ ಅವಕಾಶವಾದಿ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಕೋಮುವಾದಿ ಶಕ್ತಿಗಳನ್ನು ಮಣಿಸಲು ಮತ್ತು ರಾಹುಲ್‌ಗಾಂಧಿ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ಪ್ರಾದೇಶಿಕ ಪಕ್ಷಗಳೊದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ರಾಷ್ಟ್ರಮಟ್ಟದಲ್ಲಿ ಆಗಿದೆ. ಅದರ ಪರಿಣಾಮವಾಗಿ ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಕಾಂಗ್ರೆಸ್‌ ಮೆತ್ರಿ ಮಾಡಿಕೊಂಡಿದ್ದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಕಾಂಗ್ರೆಸ್‌ ಕಾರ್ಯಕರ್ತರು ಹೋರಾಟ ಮಾಡಲಿದ್ದಾರೆ. ಆ ನಿಟ್ಟಿನಲ್ಲಿ ಎಲ್ಲಾ ತಾಲೂಕುಗಳಲ್ಲೂ ಸಭೆ ನಡೆಸಿ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಕಾಂಗ್ರೆಸ್‌ ಹಾಳಾಯ್ತು: ಕೆಪಿಸಿಸಿ ಅಧ್ಯಕ್ಷ ಎಚ್‌.ಕೆ.ಮಹೇಶ್‌ ಮಾತನಾಡಿ, ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕನಾಗಿ, ಎರಡೂವರೆ ವರ್ಷ ಮಂತ್ರಿಯಾಗಿದ್ದ ಎ.ಮಂಜು ಅವರು ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸಲಿಲ್ಲ. ಪಕ್ಷವನ್ನೂ ಸಂಘಟಿಸಲಿಲ್ಲ. ಸಚಿವರಾಗಿದ್ದೂ ಗೆಲ್ಲಲಾಗದ ಮಟ್ಟಕ್ಕೆ ಕಾಂಗ್ರೆಸ್‌ನ್ನು ಹಾಳು ಮಾಡಿ ಈಗ ಬಿಜೆಪಿ ಸೇರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರಾಗಿದ್ದಾಗ ಭ್ರಷ್ಟಾಚಾರದ ಆರೋಪಗಳು ಬಂದಾಗಲೆಲ್ಲಾ ಸೂಕ್ತ ಉತ್ತರ ಕೊಡಲಾಗದ ಎ.ಮಂಜು ಅವರು ದೇವೇಗೌಡರ ಕುಟುಂಬದವರನ್ನು ತೆಗಳಿದ್ದನ್ನು ಬಿಟ್ಟರೆ ಜಿಲ್ಲೆಗೆ ಏನೂ ಕೊಡುಗೆ ನೀಡಲಿಲ್ಲ. ಇವರನ್ನು ಮಂತ್ರಿ ಮಾಡಿ ಎಂದು ದೆಹಲಿಯ ವರಿಷ್ಠರ ಬಳಿಗೆ ನಿಯೋಗ ಹೋಗಿ ಹೋರಾಟ ಮಾಡಿದೆವು.

ಆದರೆ ಎ.ಮಂಜು ಮಂತ್ರಿಯಾಗಿ ವಸೂಲಿಗಿಳಿದಿದ್ದು ಬಿಟ್ಟರೆ ಏನನ್ನೂ ಮಾಡಲಿಲ್ಲ. ಅಧಿಕಾರ ಅನುಭವಿಸಿ ಪಕ್ಷವನ್ನು ಹಾಳು ಮಾಡುವ ಹುನ್ನಾರ ನಡೆಸಿದರು. ಅಧಿಕಾರದಲ್ಲಿದ್ದಾಗ ಸಾಧನೆ ಮಾಡದೆ ಈಗ ಮೋದಿ ನೋಡಿ ಮತಹಾಕಿ ಎಂದು ಜನರ ಮುಂದೆ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ಮೈತ್ರಿ ಅಭ್ಯರ್ಥಿ ಗೆಲುವು: ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಾವಗಲ್‌ ಮಂಜುನಾಥ್‌ ಮಾತನಾಡಿ, ಪಕ್ಷದ ವರಿಷ್ಠರು ತೆಗೆದುಕೊಂಡಿರುವ ತೀರ್ಮಾನದಂತೆ ಹಾಸನ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಕಾಂಗ್ರೆಸ್‌ ಸಜ್ಜಾಗಿದ್ದು, ಪ್ರಜ್ವಲ್‌ ರೇವಣ್ಣ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ಎ.ಮಂಜು ಕುಟುಂಬದಲ್ಲೂ ರಾಜಕಾರಣ: ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನಡೆಸುತ್ತಿರುವುದಾಗಿ ಹೇಳುತ್ತಿರುವ ಎ.ಮಂಜು ಕುಟುಂಬ ರಾಜಕಾರಣ ಮಾಡಿದ್ದಾರೆ. ಎ.ಮಂಜು ಅವರ ಪತ್ನಿ ಜಿಲ್ಲಾ ಪರಿಷತ್‌ ಸದಸ್ಯರಾಗಿದ್ದರು. ಅವರ ಪುತ್ರ ಡಾ.ಮಂತರ್‌ಗೌಡ ಈಗ ಜಿ.ಪಂ ಸದಸ್ಯ. ಹಾಗಾಗಿ ಕುಟುಂಬ ರಾಕಾರಣದ ಬಗ್ಗೆ ಮಾತನಾಡಲು ಎ.ಮಂಜು ಅವರಿಗೆ ನೈತಿಕತೆ ಇದೆಯೇ ಎಂದು ವಿಧಾನ ಪರಿಷತ್‌ ಸದಸ್ಯ, ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಎಂ.ಎ.ಗೋಪಾಲಸ್ವಾಮಿ ಹೇಳಿದರು.

ಎಲ್ಲಾ ರಾಕಾರಣಿಗಳೂ ಕುಟುಂಬ ರಾಜಕಾರಣ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಕಟುಂಬ ರಾಜಕಾರಣದ ಆರೋಪ ಅಪ್ರಸ್ತುತ. ಹಿಂದಿನ ಸಿದ್ಧರಾಮಯ್ಯ ಅವರ ಸರ್ಕಾರದಲ್ಲಿ ಹಾಗೂ ಇಂದಿನ ಸಮ್ಮಿಶ್ರ ಸರ್ಕಾರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮೈತ್ರಿ ಆಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರಿಗೆ ಮತ ತಂದು ಕೊಡಲಿವೆ ಎಂದು ಹೇಳಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.