ಬರ ನಿರ್ವಹಣೆ: ತ್ವರಿತ ಕ್ರಮಕ್ಕೆ ಬಿಜೆಪಿ ಮನವಿ


Team Udayavani, May 17, 2019, 2:14 PM IST

has-2

ಅರಸೀಕೆರೆ: ತಾಲೂಕಿನಲ್ಲಿ ತೀವ್ರ ಬರಗಾಲವಿದ್ದು, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಕಲ್ಪಿಸುವಂತೆ ಮಾಜಿ ಶಾಸಕ ಎ.ಎಸ್‌.ಬಸವರಾಜ್‌ ಹಾಗೂ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಜಿ.ವಿ.ಟಿ. ಬಸವರಾಜು ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ತಹಶೀಲ್ದಾರ್‌ ಸಂತೋಷ್‌ಕುಮಾರ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ಬರಿದಾಗಿರುವ ಕೆರೆ, ಕಟ್ಟೆಗಳು: ಈ ಸಂದರ್ಭದಲ್ಲಿ ಜಿವಿಟಿ ಬಸವರಾಜ್‌ ಮಾತನಾಡಿ, ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಾ ಬಂದಿರುವ ತಾಲೂಕಿನಲ್ಲಿ ಕೆರೆಕಟ್ಟೆಗಳು ಬರಿದಾಗಿ ದಶಕಗಳೇ ಕಳೆದಿವೆ. ಮತ್ತೂಂದೆಡೆ ಮಳೆಯ ಕೊರತೆಯಿಂದಾಗಿ ಜಾನುವಾರುಗಳಿಗೆ ನೀರು, ಮೇವು ಸಿಗದಂತಾಗಿದ್ದು ರೈತರು ತಾವು ಪ್ರೀತಿಯಿಂದ ಸಾಕಿ ಬೆಳೆಸಿದ ಹಸು ಕರುಗಳಿಗೆ ನೀರು ಮತ್ತು ಮೇವು ಪೂರೈಸಲು ಸಾಧ್ಯವಾಗದೇ ಪರಿತಪಿಸುತ್ತಿದ್ದರಿಂದ ಜಾನುವಾರುಗಳು ಕಸಾಯಿಖಾನೆ ಪಾಲಾಗುತ್ತಿವೆ. ಪರಿಸ್ಥಿತಿ ಹೀಗಿದ್ದರು ಜನಪ್ರತಿನಿಧಿಗಳು ಹಾಗೂ ತಾಲೂಕು ಆಡಳಿತ ಕೈಕಟ್ಟಿ ಕುಳಿತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ನೀರಿಗೆ ಪರದಾಟ: ಮಾಜಿ ಶಾಸಕ ಎ.ಎಸ್‌.ಬಸವರಾಜ್‌ ಮಾತನಾಡಿ, ಗ್ರಾಮೀಣ ಭಾಗದ ಜನತೆಗೆ ನೀರು ಹಾಗೂ ಜಾನುವಾರುಗಳಿಗೆ ಗೋಶಾಲೆ ಹಾಗೂ ಮೇವು ಬ್ಯಾಂಕ್‌ ತೆರೆಯುವಂತೆ ಮನವಿ ಮಾಡಿದರು.

ತಾಲೂಕು ಆಡಳಿತ ಬರ ಪರಿಸ್ಥಿತಿ ನಿರ್ವಹಣೆಗೆ ಮೀನ ಮೇಷ ಎಣಿಸಿದರೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಎಪಿಎಂಸಿ ಮಾಜಿ ಉಪಾಧ್ಯಕ್ಷ ಶಶಿಕುಮಾರ್‌, ರೈತ ಮೋರ್ಚಾ ಅಧ್ಯಕ್ಷ ಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ಉಮೇಶ್‌ ಬೋವಿ, ನಗರ ಬಿಜೆಪಿ ಉಪಾಧ್ಯಕ್ಷ ಚಂದ್ರು ಉಪಸ್ಥಿತರಿದ್ದರು.

ಬರ ನಿರ್ವಹಣೆಗೆ ಸಿದ್ಧತೆ

ಈ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಸಂತೋಷ್‌ ಕುಮಾರ್‌, ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲೂಕಿನ ಬರ ಪರಿಸ್ಥಿತಿ ಯನ್ನು ನಿಬಾಯಿಸಲು ತಾಲೂಕು ಆಡಳಿತ ಈಗಾಗಲೇ ಕಾರ್ಯೋನ್ಮುಖವಾಗಿದೆ. ಈ ಸಂಬಂಧ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಮಾಹಿತಿ ಸಂಗ್ರಹಿಸಿದ್ದು, ಸಮ ರೋಪಾದಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗು ತ್ತಿದೆ. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಹಾಗೂ ಖಾಸಗಿಯವರ ಕೊಳವೆ ಬಾವಿಯಿಂದ ನೀರು ಖರೀದಿಸಿ ಪೂರೈಸಲಾಗುತ್ತಿದೆ. ಅದೇ ರೀತಿ ಜಾನುವಾರುಗಳಿಗೆ ಮೇವು ಒದಗಿಸಲು ಹೋಬಳಿವಾರು ಮೇವು ಬ್ಯಾಂಕ್‌ ತೆರೆಯಲು ಸ್ಥಳವನ್ನು ನಿಗದಿಗೊಳಿಸಲಾಗಿದೆ ಎಂದರು.

ಟಾಪ್ ನ್ಯೂಸ್

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ

1-asdsads

T20 World Cup; ಸೂಪರ್‌-8 ಕನಸಿನಲ್ಲಿರುವ ಅಮೆರಿಕಕ್ಕೆ ಐರ್ಲೆಂಡ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.