ಊರಿಗೇ ನುಗ್ಗಿ ಬಾಲಕನಹತ್ಯೆಗೈದಕಾಡಾನೆ


Team Udayavani, Jan 15, 2018, 3:09 PM IST

has-1.jpg

ಹಾಸನ/ಆಲೂರು: ಆಲೂರು ತಾಲೂಕಿನ ಕುಂದೂರು ಹೋಬಳಿಯ ಕೊಡಗತವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಗ್ರಾಮಕ್ಕೆ ನುಗ್ಗಿದ ಕಾಡಾನೆಯೊಂದು ಬಾಲಕನೊಬ್ಬನನ್ನು ಎಳೆದೊಯ್ದು ಸಾಯಿಸಿದೆ.

ವಿದ್ಯಾರ್ಥಿ ಭರತ್‌ (14) ಸಂಕ್ರಾಂತಿ ಹಬ್ಬಕ್ಕೆಂದು ಅಜ್ಜಿಯ ಮನೆಗೆ ಹೋಗಿದ್ದಾಗ ಕಾಡಾನೆಗೆ ಬಲಿಯಾಗಿದ್ದಾನೆ. ಭರತ್‌ ಹಾಸನದ ಖಾಸಗಿ ಶಾಲೆಯೊಂದರಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ತನ್ನ ಅಜ್ಜಿ ಜಯಮ್ಮ ಎಂಬುವರ
ಮನೆಯ ಹಿತ್ತಲಿನಲ್ಲಿ ಬೆಳಗ್ಗೆ 8 ಗಂಟೆ ಹೊತ್ತಿನಲ್ಲಿ ಹಸುವನ್ನು ಕಟ್ಟಿಹಾಕುತ್ತಿದ್ದ ಸಂದರ್ಭದಲ್ಲಿ ಮನೆಯ ಬಳಿ ದಿಢೀರನೆ ಬಂದ ಕಾಡಾನೆ ಭರತ್‌ನನ್ನು ಸುಮಾರು 150 ಮೀಟರ್‌ ದೂರ ಎಳೆದೊಯ್ದು, ಸೊಂಡಲಿನಿಂದ ನೆಲಕ್ಕೆ ಅಪ್ಪಳಿಸಿ, ಕಾಲಿನಿಂದ ತಲೆಯನ್ನು ತುಳಿದು ಸಾಯಿಸಿದೆ. 

ವರ್ಷದ ಮೊದಲ ಬಲಿ: ಡಿಸೆಂಬರ್‌ನಿಂದೀಚೆಗೆ ಭರತ್‌ ಸೇರಿ ಮೂವರನ್ನು ಕಾಡಾನೆಗಳು ಬಲಿ ತೆಗೆದುಕೊಂಡಿವೆ. 2017ರಲ್ಲಿ ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಒಟ್ಟು ಐವರನ್ನು ಸಾಯಿಸಿದ್ದ ಕಾಡಾನೆಗಳು ಈ ವರ್ಷದ
ಆರಂಭದಲ್ಲಿ ಸಂಕಾಂತಿಯ ಹಬ್ಬದ ದಿನವೇ ಜೀವ ಹಾನಿ ಮಾಡಿದೆ. ಭರತ್‌ ಈ ವರ್ಷ ಕಾಡಾನೆಗಳಿಗೆ ಮೊದಲ ಬಲಿಯಾಗಿದ್ದಾನೆ. ಕಾಡಾನೆ ಭರತ್‌ನನ್ನು ಸಾಯಿಸಿದ ಕೂಗಳತೆಯಲ್ಲಿಯೇ 7-8 ಜನರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಅವರೆಲ್ಲರೂ ಮನೆಯತ್ತ ಓಡಿಹೋಗಿ ಪ್ರಾಣ ಉಳಿಸಿಕೊಂಡರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಹಾಸನದ ತಣ್ಣೀರುಹಳ್ಳ ಬಡಾವಣೆಯ ನಿವಾಸಿ ಚಂದ್ರಮತಿಯ ಪುತ್ರ. ಮೃತ ಬಾಲಕನ ತಂದೆ ಸುರೇಶ್‌ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮದ ನೌಕರನಾಗಿದ್ದ ಸುರೇಶ್‌ ಸೇವೆಯಲ್ಲಿದ್ದಾಗಲೇ ಮೃತಪಟ್ಟಿದ್ದರಿಂದ ಪತ್ನಿ ಚಂದ್ರಮತಿಗೆ ಅನುಕಂಪ ಆಧಾರದ ನೌಕರಿ ಸಿಕ್ಕಿತ್ತು. ಮಗ ಭರತ್‌ ಮತ್ತು ಚಿಕ್ಕ ಮಗಳೊಂದಿಗೆ ಹಾಸನದಲ್ಲಿ ಚಂದ್ರಮತಿ ವಾಸವಿದ್ದು, ಸಂಕ್ರಾಂತಿ ಹಬ್ಬಕ್ಕೆ ಮಗನನ್ನು ತಾಯಿಯ ಮನೆಗೆ ಕಳುಹಿಸಿದ್ದರು. ಸಂಕ್ರಾಂತಿಯ ಹಬ್ಬದ ಸಡಗರ ಆಚರಿಸಬೇಕಾಗಿದ್ದ ಭರತ್‌ ಕಾಡಾನೆಗೆ ಬಲಿಯಾಗಿದ್ದು, ಆತನ ಕುಟುಂಬ ದುಃಖದ ಕಡಲಲ್ಲಿ ಮುಳುಗಿದೆ.

ಪ್ರಜ್ಞೆ ತಪ್ಪಿದ ಅಜ್ಜಿ: ವಿಷಯ ತಿಳಿದ ಜಯಮ್ಮ ಮೊಮ್ಮಗನ ಶವದ ಬಳಿ ಹೋಗಿ ಪ್ರಜ್ಞೆ ತಪ್ಪಿಬಿದ್ದರು. ನಂತರ ಶವದ ಬಳಿ ಆಕೆಯ ಆಕ್ರಂದನ ಮನಕಲಕಿತು. ಭರತ್‌ ಸಾವಿನ ಸುದ್ದಿ ತಿಳಿದ ಗ್ರಾಮಸ್ಥರು ಶವದ ಬಳಿ ಬಂದು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಸಚಿವರು ಅಥವಾ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವವರೆಗೂ ಶವವನ್ನು ಮೇಲೆತ್ತಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.

ಸಚಿವರ ನಿರ್ಲಕ್ಷ್ಯ: ಸ್ಥಳಕ್ಕಾಗಮಿಸಿದ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರೂ ಅರಣ್ಯ ಇಲಾಖೆ ಮೇಲೆ
ಕಿಡಿ ಕಾರಿದರು. ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ ಕಾಡಾನೆಗಳ ಉಪಟಳ ತಡೆಗೆ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕೆಂದು ಹಲವು ಬಾರಿ ಅರಣ್ಯ ಸಚಿವರಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಅರಣ್ಯ ಸಚಿವರ ಇಚ್ಛಾಶಕ್ತಿಯ ಕೊರತೆಯಿಂದ ಈ ಭಾಗದ ಜನರು ಕಾಡಾನೆಗಳಿಗೆ ಬಲಿಯಾಗುತ್ತಿದ್ದಾರೆ. ಕಾಡಾನೆಗಳ ಹಾವಳಿ ತಡೆಗೆ ಹಾಗೂ ಆನೆ ಕಾರಿಡಾರ್‌ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರದ ಬಳಿ ನಿಯೋಗ ಕರೆದೊಯ್ಯವುದಾಗಿ ನೀಡಿದ ಭರವಸೆಯನ್ನೂ ಸಚಿವರ ಈಡೇರಿಸಿಲ್ಲ. 

ಕಳೆದ ತಿಂಗಳು ಇಬ್ಬರು ಬಲಿಯಾದ ಸಂದರ್ಭ ಆಲೂರು ತಾಲೂಕು ನಾಗವಾರ ಬಳಿ ಆನೆಧಾಮ ಸ್ಥಾಪನೆ ಆರಂಭಿಸಿದ ಅರಣ್ಯ ಇಲಾಖೆ, ಈಗ ಕಾಮಗಾರಿಯನ್ನೂ ಸ್ಥಗಿತಗೊಳಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಪ್ರತಿಭಟನಾಕಾರನ್ನು ಸಮಾಧಾನಪಡಿಸಿ, ಮೃತ ಬಾಲಕನ ಶವದ ಮರಣೋತ್ತರ ಪರೀಕ್ಷೆಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಬಾಲಕನನ್ನು ಬಲಿ ತೆಗೆದುಕೊಂಡ ಪುಂಡಾನೆಯನ್ನು ಹಿಡಿಯುವ ಕಾರ್ಯಾಚರಣೆಯನ್ನು ನಾಳೆಯಿಂದಲೇ ಆರಂಭಿಸಲಾಗುವುದು. ಇದಕ್ಕಾಗಿ ಸಾಕಾನೆಗಳನ್ನು ತರುವುದಾಗಿ ಭರವಸೆ ನೀಡಿದರು.

ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌.ಪಿ.ಮೋಹನ್‌ ಸಕಲೇಶಪುರ ಉಪ ವಿಭಾಗಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ, ಆಲೂರು ತಹಶೀಲ್ದಾರ್‌ ಶಾರದಾಂಬ ಗ್ರಾಮಸ್ಥರನ್ನು ಸಮಾಧಾನಪಡಿಸಿದರು. ನಂತರ ಬಾಲಕನ ಶವದ ಮರಣೋತ್ತರ ಪರೀಕ್ಷೆಗೆ ವ್ಯವಸ್ಥೆ ಮಾಡಲಾಯಿತು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.