ಚಲಿಸುತ್ತಿರುವಾಗಲೆ ಹೊತ್ತಿ ಉರಿದ KSRTC ಬಸ್ ;ಪ್ರಯಾಣಿಕರು ಪಾರು
Team Udayavani, Apr 1, 2017, 3:17 PM IST
ಸಕಲೇಶಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75 ರ ಮಾರನ ಹಳ್ಳಿ ಎಂಬಲ್ಲಿ ಶನಿವಾರ ಮಧ್ಯಾಹ್ನ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ನಡೆದಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಪ್ರಯಾಣಿಕರೆಲ್ಲರೂ ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ.
ಚಲಿಸುತ್ತಿರುವಾಗಲೇ ಶಾರ್ಟ್ ಸರ್ಕ್ಯೂಟ್ನಿಂದಾಗಿ ಇಂಜಿನ್ನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕೂಡಲೇ ಚಾಲಕ ಬಸ್ ಬದಿಗೆ ನಿಲ್ಲಿಸಿ ಪ್ರಯಾಣಿಕರು ಲಗೇಜ್ ಸಮೇತ ಕೆಳಗಿಳಿಯುವಂತೆ ಸೂಚಿನೆ ನೀಡಿದ್ದಾರೆ.
ಸ್ಥಳದಲ್ಲಿ ರುವವರು ಬಾಟಲಿಗಳಲ್ಲಿದ್ದ ನೀರನ್ನು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ, ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸುವಷ್ಟರಲ್ಲಿ ಬಸ್ ಸಂಪೂರ್ಣ ಭಸ್ಮವಾಗಿತ್ತು.
ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕಾಗಮಿಸಿದ ಸಕಲೇಶಪುರ ಗ್ರಾಮೀಣ ಠಾಣಾ ಪೊಲೀಸರು ಸಂಚಾರ ಸುಗಮಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ