ಪ್ರಚಾರಕ್ಕೆ ಮುಂದಾದ ಸರ್ಕಾರಿ ಶಾಲಾ, ಕಾಲೇಜು

Team Udayavani, May 17, 2019, 2:51 PM IST

has-4

ಚನ್ನರಾಯಪಟ್ಟಣ: ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳ ಭಾವಚಿತ್ರವನ್ನು ಹಾಕಿ ಉದುದ್ದ ಬ್ಯಾನರ್‌ ಹಾಕಿ ಪ್ರವೇಶಾತಿಗಾಗಿ ಪೈಪೋಟಿ ಮಾಡುತ್ತಿರುವ ವೇಳೆಯಲ್ಲಿ ತಾಲೂಕಿನ ಸರ್ಕಾರಿ ಶಾಲಾ ಕಾಲೇಜಿನ ಸಿಬ್ಬಂದಿ ಖಾಸಗಿಯವರಿಗೆ ಸರಿ ಸಮನಾಗಿ ಪೈಪೋಟಿ ನೀಡಲು ಮುಂದಾಗಿದ್ದಾರೆ.

ಪಟ್ಟಣದ ಹೃದಯ ಭಾಗದಲ್ಲಿರುವ ಸ್ವತಂತ್ರ ಪದವಿಪೂರ್ವ ಕಾಲೇಜು, ಬಿಇಒ ಕಚೇರಿ ಹಿಂಭಾಗ ದಲ್ಲಿನ ಬಾಲಕಿಯರ ಸರ್ಕಾರಿ ಪ್ರೌಢಶಾಲೆ, ಸ್ವತಂತ್ರ ಪದವಿ ಪೂರ್ವ ಮಹಿಳಾ ಕಾಲೇಜು, ಪೇಟೆ ಸರ್ಕಾರಿ ಪ್ರೌಢಶಾಲೆ ಹೀಗೆ ಪಟ್ಟದಲ್ಲಿರುವ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳ ಭಾವಚಿತ್ರ ವನ್ನು ಹಾಕಿ ಶಾಲೆ ಪಡೆದಿರುವ ಫ‌ಲಿತಾಂಶವನ್ನು ಬ್ಯಾನರ್‌ನಲ್ಲಿ ಪ್ರಕಟಣೆ ಮಾಡುವ ಮೂಲಕ ದಾಖಲಾತಿ ಹೆಚ್ಚಿಸಿಕೊಳ್ಳಲು ಮುಂದಾಗುತ್ತಿದ್ದಾರೆ.

ಸರ್ಕಾರಿ ಶಾಲಾ ಕಾಲೇಜಿನತ್ತ ಸೆಳೆಯಲು ಕ್ರಮ: ಕಸಬಾ ಹೋಬಳಿ ಗುಳಸಿಂದ ಸರ್ಕಾರಿ ಪ್ರೌಢಶಾಲೆ, ಹಿರೀಸಾವೆ ಹೋಬಳಿ ಕೇಂದ್ರದಲ್ಲಿರುವ ಸರ್ಕಾರಿ ಶಾಲಾ-ಕಾಲೇಜು, ನುಗ್ಗೇಹಳ್ಳಿ, ಬಾಗೂರು, ಶ್ರವಣಬೆಳಗೊಳ ಹಾಗೂ ದಂಡಿಗನಹಳ್ಳಿ ಹೋಬಳಿ ಉದಯಪುರ ಸೇರಿದಂತೆ ತಾಲೂಕಿನ ನೂರಾರು ಸರ್ಕಾರಿ ಪ್ರೌಢಶಾಲೆಗಳು ಹಾಗೂ ಹತ್ತಾರು ಸರ್ಕಾರಿ ಪಿಯು ಕಾಲೇಜಿನವರು ತಮ್ಮ ವಿದ್ಯಾರ್ಥಿ ಭಾವಚಿತ್ರದೊಂದಿಗೆ ಶಾಲೆಯ ಫ‌ಲಿತಾಂಶ ಹಾಗೂ ತಮ್ಮಲ್ಲಿ ದೊರೆಯುವ ಸೌಲಭ್ಯವನ್ನು ಬ್ಯಾನರಿನಲ್ಲಿ ಮುದ್ರಣ ಮಾಡಿಸಿ ಮುಖ್ಯ ರಸ್ತೆ ಹಾಗೂ ಜನ ಸಂದಣಿ ಪ್ರದೇಶದಲ್ಲಿ ಹಾಕುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗೆ ಸಡ್ಡು ಹೊಡೆಯಲು ಮುಂದಾಗುತ್ತಿರು ವುದು ಹೆಮ್ಮೆಯ ವಿಷಯವಾಗಿದೆ.

ಸೌಲಭ್ಯದ ಮಾಹಿತಿ: ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಶುಲ್ಕದಲ್ಲಿ ಡಿಸ್ಕೌಂಟ್ ನೀಡುವ ಮಾಹಿತಿ ಹಾಕಿದರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ದೊರೆಯಲಿದೆ. ಇದಲ್ಲದೇ ಉದ್ಯೋಗ ತರಬೇತಿ ಕೋಶ, ಸುಸಜ್ಜಿತವಾದ ಕಟ್ಟಡ, ವಿಶಾಲವಾದ ಕ್ರಿಡಾಂಗಣ, ಆಂತರಿಕ ಪರೀಕ್ಷೆಗಳ ಮಾಹಿತಿ, ಗ್ರಂಥಾ ಲಯ ಮತ್ತು ವಾಚನಾಲಯ, ಸ್ಮಾರ್ಟ್‌ ಕ್ಲಾಸಸ್‌, ವಿವಿಧ ವಿದ್ಯಾರ್ಥಿವೇತನ, ಪಿಎಚ್‌ಡಿ, ಎಂಪಿಲ್ ನೆಟ್, ಕೆ-ಸೆಟ್ ಹಾಗೂ ನುರಿತ ಉಪನ್ಯಾಸಕರಿಂದ ಬೋಧನೆ, ಎನ್‌ಸಿಸಿ, ಎನ್‌ಎಸ್‌ಎಸ್‌, ಸ್ಕೌಟ್ ಆ್ಯಂಗೈಡ್ಸ್‌, ರೆಡ್‌ಕ್ರಾಸ್‌ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ರಿಯಾಯಿತಿಯಲ್ಲಿ ಬಸ್‌ಪಾಸ್‌ ಸೌಲಭ್ಯ ಒದಗಿಸಲಾಗುವುದು ಎಂಬ ಭರವಸೆಯ ಸೌಲಭ್ಯ ಹಾಕಲಾಗಿದೆ.

ಕಾಲೇಜಿನ ಕೋರ್ಸ್‌ಗಳ ಮಾಹಿತಿ: ನಮ್ಮ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಉಚಿತವಾಗಿ ನೀಡಲಾಗುವುದು. ಹಾಗೂ ವಾರದಲ್ಲಿ ಒಮ್ಮೆ ಕೆಎಎಸ್‌ ಮತ್ತು ಎಎಎಸ್‌ ಅಧಿಕಾರಿಗಳಿಂದ ಶಿಕ್ಷಣ ಮಾಗದರ್ಶನ ನೀಡುವುದರೊಂದಿಗೆ ವಿಶೇಷ ಉಪನ್ಯಾಸ ಕೊಡುವ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲ ಗೊಳಿಸಲಾಗುವುದು ಎಂದು ಪ್ರಚಾರದ ಬ್ಯಾನರ್‌ನಲ್ಲಿ ಹಾಕುವ ಮೂಲಕ ನಾವು ಹಣಕ್ಕಾಗಿ ಶಿಕ್ಷಣ ಮಾರುವುದಿಲ್ಲ, ದೇಶದ ಮುಂದಿನ ಭವಿಷ್ಯದ ಉತ್ತಮ ಪ್ರಜೆಗಳನ್ನು ಮಾಡುವಲ್ಲಿ ನಾವು ಶ್ರಮಿಸುತ್ತಿವೆ ಎಂಬ ಭರವಸೆ ನೀಡುತ್ತಿದ್ದಾರೆ.

ಪೋಷಕರು, ಶಿಕ್ಷಕರ ಮುತುವರ್ಜಿ: ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿ ಭಾವಚಿತ್ರದ ಬ್ಯಾನರ್‌ ಹಾಕಲು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಕೆಲ ವಿದ್ಯಾರ್ಥಿಗಳ ಪೋಷಕರು ಸಹಾಯ ಮಾಡಿದರೆ ತಮ್ಮ ಶಾಲೆಯಲ್ಲಿ ದಾಖಲಾತಿ ಹೆಚ್ಚಿಸಿಕೊಳ್ಳೋಣ ಎಂದು ಶಿಕ್ಷಕರೇ ಮುತುವರ್ಜಿ ವಹಿಸಿ ಪ್ರಚಾರಕ್ಕೆ ಮುಂದಾಗಿದ್ದಾರೆ.

ಒಟ್ಟಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಸಡ್ಡು ಹೊಡೆಯಲು ಸರ್ಕಾರಿ ಶಾಲಾ ಕಾಲೇಜುಗಳು ತಮ್ಮ ಕಟ್ಟಡದ ಮುಂಭಾಗದಲ್ಲಿ ಬ್ಯಾನರ್‌ ಹಾಕುವ ಮೂಲಕ ಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಎಷ್ಟು ಮಂದಿ ಸರ್ಕಾರಿ ಶಾಲೆ ಕಾಲೇಜಿಗೆ ಪ್ರವೇಶ ಪಡೆಯುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.