ಮುಸ್ಲಿಮರ ಮೀಸಲಾತಿ ರದ್ದು : ಚುನಾವಣೆ ಗಿಮಿಕ್‌


Team Udayavani, Mar 26, 2023, 3:49 PM IST

tdy-19

ಹಾಸನ: ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಿದ್ದ ಶೇ.4ರಷ್ಟು ಮೀಸಲಾತಿ ರದ್ದುಪಡಿಸುವ ಸರ್ಕಾರದ ನಿರ್ಧಾರವುಚುನಾವಣಾ ಗಿಮಿಕ್‌. ರಾಜ್ಯದಲ್ಲಿ ಜೆಡಿಎಸ್‌ ಸರ್ಕಾರಅಧಿಕಾರಕ್ಕೆ ಬಂದರೆ ಮುಸ್ಲಿಮರ ಶೇ.4 ಮೀಸಲಾತಿಮತ್ತೆ ಜಾರಿ ಮಾಡಲಿದೆ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟವು ಶುಕ್ರವಾರ ಮೀಸಲಾತಿ ಜಾರಿಸಂಬಂಧ ತೆಗೆದುಕೊಂಡಿರುವ ನಿರ್ಧಾರವು ಜಾರಿಗೆ ಬರುವುದಿಲ್ಲ. ಮುಂಬರುವ ಚುನಾವಣೆಯಲ್ಲಿಬಿಜೆಪಿ ಸೋಲು ಅನುಭವಿಸಲಿದೆ. ಹಾಗಾಗಿ ಈಸರ್ಕಾರದ ಕೊನೆಯ ನಿರ್ಧಾರ ಜಾರಿಯಾಗುವುದಿಲ್ಲ ಎಂದು ಹೇಳಿದರು.

ಸರ್ಕಾರದ ನಿರ್ಧಾರ ಖಂಡನೀಯ: ರಾಜ್ಯ ಬಿಜೆಪಿ ಸರ್ಕಾರದ ಮೀಸಲಾತಿ ನಿರ್ಧಾರವು ಸಾಮಾಜಿಕ ನ್ಯಾಯದ ವಿರುದ್ಧಯಿದೆ. ಮುಸಲ್ಮಾ ನರು ಬಿಜೆಪಿಗೆ ಮತ ನೀಡುವುದಿಲ್ಲ ಎಂಬ ಕಾರಣಕ್ಕೆ ರಾಜಕೀಯ ದ್ವೇಷದಿಂದ ಈ ನಿರ್ಧಾರ ಕೈಗೊಂಡಿದೆ. ಜಾತಿ-ಜಾತಿ, ಧರ್ಮ-ಧರ್ಮಗಳನ್ನು ಎತ್ತಿ ಕಟ್ಟಿ ಸಂಘರ್ಷ ಸೃಷ್ಟಿಸಿರಾಜಕೀಯ ಸ್ವಾರ್ಥ ಸಾಧಿಸಿಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ ಎಂದರು.

ಮೀಸಲಾತಿ ರದ್ದು ನಿರ್ಧಾರ ಸರಿಯಲ್ಲ: ಯಾವುದೇ ರಾಜ್ಯದಲ್ಲಿ ಮುಸಲ್ಮಾನರಿಗೆ ಮೀಸಲಾತಿ ಇಲ್ಲದ ಸಂದರ್ಭದಲ್ಲಿ 1994ರಲ್ಲಿ ಎಚ್‌.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಮುಸಲ್ಮಾನರು ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಹಿಂದುಳಿ ದಿರುವುದನ್ನು ಪರಿಗಣಿಸಿ ಮುಸಲ್ಮಾನರಿಗೆ ಶೇ.4ರಷ್ಟು ಮೀಸಲಾತಿ ಜಾರಿಗೊಳಿಸಿದ್ದರು. ಆದರೆ, ಬಿಜೆಪಿ ಸರ್ಕಾರ ಈಗ ಆ ಮೀಸಲಾತಿಯನ್ನು ರದ್ದುಪಡಿಸುವ ನಿರ್ಧಾರ ಸರಿಯಲ್ಲ ಎಂದು ರೇವಣ್ಣ ಕಿಡಿಕಾರಿದರು.

ಚುನಾವಣೆಗೆ ಗಿಮಿಕ್‌: ರಾಜ್ಯ ಸರ್ಕಾರಕ್ಕೆ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂದಿದ್ದರೆ, ಮೂರು ವರ್ಷಗಳ ಹಿಂದೆಯೇ ಏಕೆ ಮೀಸಲಾತಿ ಹೆಚ್ಚಳದ ನಿರ್ಧಾರ ಕೈಗೊಳ್ಳಲಿಲ್ಲ? ಸರ್ಕಾರದ ಅಧಿಕಾರವಧಿ ಅಂತ್ಯದಲ್ಲಿ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮುಸಲ್ಮಾನರ ಮೀಸಲಾತಿ ರದ್ದುಪಡಿಸಿ ಲಿಂಗಾಯತರಿಗೆ ಮತ್ತು ಒಕ್ಕಲಿಗರಿಗೆ ಹಂಚಿಕೆ ಮಾಡುವ ನಿರ್ಧಾರ ಮಾಡಬೇಕಿತ್ತೇ ಎಂದು ತರಾಟೆಗೆ ತೆಗೆದುಕೊಂಡರು.

ದಳ ಅಧಿಕಾರಕ್ಕೆ ಬಂದರೇ ಮೀಸಲಾತಿ ಖಚಿತ: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರು ಬೇಸರಗೊಂಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಜನರಿಗಿರುವ ಸಿಟ್ಟು ಮರೆಸಿ ಗಮವನ್ನು ಬೇರೆಡೆ ಸೆಳೆಯುವ ಉದ್ದೇಶದಿಂದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ಕೈಗೊಂಡಿದೆ. ರಾಜ್ಯ ಸರ್ಕಾರದನಿರ್ಧಾರ ಜಾರಿಯಾಗಲು ಮುಂದೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮುಂದುವರಿಸಲಿದೆ ಎಂದು ಹೇಳಿದರು.

ರಾಹುಲ್‌ ಗಾಂಧಿ ಅನರ್ಹತೆ ಖಂಡನೀಯ: ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರನ್ನುಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದುಸರ್ವಾಧಿಕಾರಿ ಧೋರಣೆಯಾಗಿದೆ. ಸೂರತ್‌ ಜಿಲ್ಲಾ ನ್ಯಾಯಲದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವೇ ಕಾಲಾವಕಾಶ ನೀಡಿದೆ. ಮೇಲ್ಮನವಿ ಹೈ ಕೋರ್ಟ್‌ನಲ್ಲಿ ಇತ್ಯರ್ಥ ಆಗುವವರೆಗೂ ಕಾಯದೆಅನರ್ಹಗೊಳಿಸಿರುವುದು ಬಿಜೆಪಿ ದ್ವೇಷ ರಾಜಕಾರಣದ ಪರಮಾವಧಿಯಾಗಿದೆ. ರಾಹುಲ್‌ ಗಾಂಧಿ ಅವರ ಮುತ್ತಾತ, ಅಜ್ಜಿ, ಅವರ ತಂದೆ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಖಂಡನೀಯ ಎಂದರು.

ಸೋಮವಾರ ಹಾಸನದಲ್ಲಿ ಪ್ರತಿಭಟನೆ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪೊಲೀಸರ ಪಕ್ಷಪಾತ ಧೋರಣೆಯನ್ನು ಖಂಡಿಸಿ ಹಾಗೂ ಸಂಬಂಧಪಟ್ಟಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರು, ಪೊಲೀಸ್‌ ಮಹಾನಿರ್ದೇಶಕರು ಹಾಗೂ ಚುನಾವಣಾ ಆಯೋಗಕ್ಕೂ ದೂರುನೀಡಲಾಗಿತ್ತು. ಆದರೆ ಇದು ವರೆಗೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಹಾಗಾಗಿ ಮಾ.27ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪೊಲೀಸ್‌ ಮುಖ್ಯಾಧಿಕಾರಿಯವರ ಕಚೇರಿ ಬಳಿ ಜೆಡಿಎಸ್‌ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಸಕಲೇಶಪುರ ಕ್ಷೇತ್ರದ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರುಮಾತನಾಡಿ, ರಾಜ್ಯ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಬಗ್ಗೆಯೂನಿರ್ಧಾರ ಪ್ರಕಟಿಸಿತ್ತು. ಆದರೆ ಇದುವರೆಗೂ ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಹೆಚ್ಚಳದ ಪ್ರಸ್ತಾವನೆಯನ್ನುಕಳುಹಿಸಿಲ್ಲ. ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಬದ್ಧತೆ ಇಲ್ಲ ಎಂಬುದಕ್ಕೆ ಇದೇ ಸ್ಪಷ್ಟ ಉದಾಹರಣೆ ಎಂದು ಹೇಳಿದರು.

ಜೆಡಿಎಸ್‌ ಮುಖಂಡ ಕೆ.ಎಂ.ರಾಜೇಗೌಡ ಅವರೂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೈಸೂರಿನ ಸಮಾವೇಶಕ್ಕೆ ಒಂದು ಲಕ್ಷ ಜನರು :  ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಭಾನುವಾರ ನಡೆಯಲಿರುವ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಹಾಸನದಿಂದ ಒಂದು ಲಕ್ಷ ಜನರು ತೆರಳಿದ್ದಾರೆ. ಜೆಡಿಎಸ್‌ ಕಾರ್ಯಕರ್ತರುತೆರಳಲು ಬಸ್‌ಗಳ ವ್ಯವಸ್ಥೆ ಮಾಡಿದ್ದು, ಖಾಸಗಿ ವಾಹನಗಳಲ್ಲಿಯೂ ಜನರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಅವರು ತಿಳಿಸಿದರು.

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1fasdsads

Sakleshpura; ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥ

15 ತಿಂಗಳಲ್ಲಿ ಹೊಸ ಬಡಾವಣೆ ನಿರ್ಮಾಣ ಪೂರ್ಣ 

15 ತಿಂಗಳಲ್ಲಿ ಹೊಸ ಬಡಾವಣೆ ನಿರ್ಮಾಣ ಪೂರ್ಣ 

tdy-18

ಮುಕ್ತಿಧಾಮ ನವೀಕರಣಕ್ಕೆ 25 ಲಕ್ಕ ರೂ.ವೆಚ್ಚ 

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ