ಗಣಕಯಂತ್ರ, ಹೈನುಗಾರಿಕೆಗೆ ಉಚಿತ ತರಬೇತಿ ಕಾರ್ಯಕ್ರಮ


Team Udayavani, May 20, 2019, 11:38 AM IST

hasan-tdy-10..

ನ್ನರಾಯಪಟ್ಟಣ ತಾಲೂಕು ಹಿರೀಸಾವೆಯಲ್ಲಿ ಹೆಬ್ಟಾರಮ್ಮ ಮಹಿಳಾ ಮಂಡಳಿಯಿಂದ ಆಯೋಜಿಸಿದ್ದ ಹೊಲಿಗೆ ಮತ್ತು ಕಸೂತಿ ತರಬೇತಿ ಸಮಾರೋಪದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಜಿಲ್ಲಾಧಿಕಾರಿ ವಿಜಯಲಕ್ಷ್ಮೀ ಮಾತನಾಡಿದರು.

ಚನ್ನರಾಯಪಟ್ಟಣ/ಹಿರೀಸಾವೆ: ಮುಖ್ಯಮಂತ್ರಿಗಳ ಕೌಶಲ ಕರ್ನಾಟಕ ಯೋಜನೆಯಡಿ ಜೂನ್‌ ಎರಡನೇ ವಾರದಲ್ಲಿ ಹೈನುಗಾರಿಕೆಗೆ ಹಾಗೂ ಗಣಕಯಂತ್ರ ಬಳಕೆ ಬಗ್ಗೆ ಗ್ರಾಮೀಣ ಭಾಗದವರಿಗೆ ಉಚಿತವಾಗಿ ತರಬೇತಿ ನೀಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ನಿಗಮದ ಜಿಲ್ಲಾಧಿಕಾರಿ ವಿಜಯಲಕ್ಷ್ಮೀ ತಿಳಿಸಿದರು.

ಹಿರೀಸಾವೆ ಹೋಬಳಿ ಕೇಂದ್ರದಲ್ಲಿನ ಹೆಬ್ಟಾರಮ್ಮ ಮಹಿಳಾ ಮಂಡಳಿಯಿಂದ ಆಯೋಜಿಸಿದ್ದ ಹೊಲಿಗೆ ಮತ್ತು ಕಸೂತಿ ತರಬೇತಿ ಮುಕ್ತಾಯ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಳೆದ ನಾಲ್ಕು ತಿಂಗಳಿನಿಂದ ಜಿಲ್ಲೆಯ ಮೂರು ಕೇಂದ್ರದಲ್ಲಿ ಉಚಿತವಾಗಿ ಹೊಲಿಗೆ ತರಬೇತಿ ನೀಡಲಾಗುತ್ತಿದೆ ಇದರೊಂದಿಗೆ ಜಿಲ್ಲೆಯ ಒಂದು ಕೇಂದ್ರದಲ್ಲಿ ಕಸೂತಿ ತರಬೇತಿ ನೀಡುವ ಮೂಲಕ ನಿರುದ್ಯೋಗ ಯುವ ಸಮುದಾಯವನ್ನು ಸ್ವಾವಲಂಬಿ ಯನ್ನಾಗಿ ಮಾಡಲಾಗುತ್ತಿದೆ ಎಂದರು.

ಜೂನ್‌ ಎರಡನೇ ವಾರದಲ್ಲಿ ಇದೇ ಮಾದರಿಯಲ್ಲಿ ಗ್ರಾಮೀಣ ಭಾಗದ ವಿದ್ಯಾವಂತ ನಿರುದ್ಯೋಗ ಯುವಸಮು ದಾಯಕ್ಕೆ ಕಂಪ್ಯೂಟರ್‌ ತರಬೇತಿ ನೀಡಲಾಗುವುದು. ಇತ್ತೀಚಿನ ದಿವಸ ದಲ್ಲಿ ಹಾಲು ಉತ್ಪಾದನಗೆ ಬಹಳ ಬೇಡಿಕೆ ಇರುವುರಿಂದ ಆಧುನಿಕ ಮಾದ ರಿಯಲ್ಲಿ ಯಾವ ರೀತಿ ಹೈನುಗಾರಿಕೆ ಮಾಡಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರೊಂದಿಗೆ ಹೊಲಿಗೆ ತರಬೇತಿಯನ್ನು ಉಚಿತವಾಗಿ ಜಿಲ್ಲೆಯ ಎಂಟು ತಾಲೂಕು ಮತ್ತು ಎಲ್ಲಾ ಹೋಬಳಿ ಕೇಂದ್ರದಲ್ಲಿ ನೋಂದಾ ಯಿತ ಸಂಸ್ಥೆಗಳ ಮೂಲಕ ತರಬೇತಿ ನೀಡಲಾಗುವುದು ಎಂದು ಭರವಸೆ ನೀಡಿದರು.

ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸುವುದರ ಜತೆಗೆ ಉದ್ಯೋಗ ಕಲ್ಪಿಸಲಾಗುವುದು. ಆಸಕ್ತ ಯುವಕ, ಯುವತಿಯರು ಕೌಶಲ್ಯಾಭಿವೃದ್ಧಿ ನಿಗ ಮದ ಜಿಲ್ಲಾ ಅಧಿಕಾರಿ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಲಹೆ ನೀಡಿದರು.

ರಾಜ್ಯ ಮಟ್ಟದ ತಂಡದವರು ಮುಂದಿನ ದಿನಗಳ‌ಲ್ಲಿ ತರಬೇತಿ ಕೇಂದ್ರ ಗಳಿಗೆ ಭೇಟಿ ನೀಡಲಿದ್ದಾರೆ, ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಮಾಣ ಪತ್ರವನ್ನು ಸರ್ಕಾರಿ ಇಲಾಖೆ ನೀಡಲಿದೆ ಎಂದು ಮಾಹಿತಿ ನೀಡಿದರು.

ಮಹಿಳಾ ಮಂಡಳಿ ಅಧ್ಯಕ್ಷೆ ಚಿಕ್ಕಮ್ಮ ಹಾಗೂ ಪದಾಧಿಕಾರಿಗಳು, ಕೌಶಲ್ಯಾಭಿ ವೃದ್ಧಿ ಇಲಾಖೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2 crore fraud- owner escapes

2 ಕೋಟಿ ವಂಚನೆ: ಮಾಲೀಕ ಪರಾರಿ

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ

ಘಟನೆಯಲ್ಲಿ ಓರ್ವ ಸಾವು 6 ಮಂದಿಗೆ ಗಾಯ „ ಆರೋಪಿ ನವೀನ್‌ ಬಂಧನ

ಬುದ್ಧಿ ಹೇಳಿದಕ್ಕೆ ಕಾರು ಹತ್ತಿಸಿ ಕೊಂದ!

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

ಸಕಲೇಶಪುರ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳ ವಶ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

ಕ್ರಿಸ್‌ಮಸ್‌ ಕೇಕ್‌ ತಯಾರಿ

ಕ್ರಿಸ್‌ಮಸ್‌ ಕೇಕ್‌ ತಯಾರಿ

6dharmasthala

ಧರ್ಮಸ್ಥಳದ ಧರ್ಮಾಧಿಕಾರಿ ಕಾರ್ಯ ಮಾದರಿ

bhajarangi 2

ಭಜರಂಗಿ ಜೊತೆ ಸಂಭ್ರಮಿಸಲು ಶಿವಣ್ಣ ಫ್ಯಾನ್ಸ್‌ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.