ಮಾರುಕಟ್ಟೆಗೆ ಲಗ್ಗೆ ಇಟ್ಟ ಗಣಪನ ಮೂರ್ತಿಗಳು


Team Udayavani, Aug 31, 2019, 12:47 PM IST

hasan-tdy-2

ಚನ್ನರಾಯಪಟ್ಟಣದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸಿರುವುದು.

ಚನ್ನರಾಯಪಟ್ಟಣ: ಗೌರಿ-ಗಣೇಶ ಹಬ್ಬಕ್ಕೆ ಇನ್ನೊಂದು ದಿನ ಬಾಕಿ ಇರುವಾಗಲೇ ಪಟ್ಟಣದ ರಸ್ತೆ ಬದಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸಾವಿರಾರು ಗಣಪತಿ ಮೂರ್ತಿಗಳನ್ನು ಮಾರಾಟಕ್ಕಿಡಲಾಗಿದೆ.

ಶ್ರಾವಣ ಮಾಸದ ಆರಂಭದೊಂದಿಗೆ ಹಬ್ಬಗಳ ಸುಗ್ಗಿ ಶುರುವಾಗಿದ್ದು, ಸೆ.1 ರಂದು ಗೌರಿ ಹಬ್ಬ ಸೆ.2 ರಂದು ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಮೂರ್ತಿಗಳ ಪ್ರತಿಷ್ಠಾಪನೆಗೆ ಮನೆಗಳಲ್ಲಿ ಅಗತ್ಯ ತಯಾರಿ ನಡೆಯುತ್ತಿದೆ.

ಪರಿಸರ ಸ್ನೇಹಿಗೆ ಹೆಚ್ಚು ಆಸಕ್ತಿ: ತಾಲೂಕಿನ ವಿವಿಧ ಬಡಾವಣೆಯಲ್ಲಿ ಕಲಾವಿದರು ಜೇಡಿಮಣ್ಣಿನ ಗಣೇಶ ಮೂರ್ತಿ ತಯಾರಿ ಸಿದ್ದು ಮಾರಾಟಕ್ಕೆ ತರುತ್ತಿದ್ದಾರೆ. ಕಳೆದೆಲ್ಲಾ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣಪತಿ ಮೂರ್ತಿ ತಯಾರಿಕೆ ಹೆಚ್ಚಾಗಿದೆ.

ವಿವಿಧ ಬಗೆಯ ಮೂರ್ತಿ: ವಿಭಿನ್ನ ಶೈಲಿಯ ಮಾರುತಿ ಮೇಲೆ ಕುಳಿತಿರುವ ವಿಘ್ನೇಶ್ವರ, ಬೃಂದಾವನ ಗಣಪ, ಗಣಾಂಜನೇಯ, ಶೇಷಶಯನ, ಪಂಚಮುಖೀ, ನಟರಾಜ, ವೆಂಕಟೇಶ್ವರ, ಕಾಳಿಂಗ ಮರ್ಧನ, ಅರ್ಧನಾರೇಶ್ವರ, ಶಿವಗಣಪ, ಗಜಗಣಪ, ಸಿಂಹಾಸನದ ಮೇಲೆ ಆಸೀನನಾಗಿರುವ ದರ್ಬಾರ್‌ ಗಣಪ, ಕಮಲದ ಹೂವಿನ ಮೇಲೆ ಕುಳಿತ ಗಣಪ, ನಟರಾಜ ಗಣಪ, ವೀರಾಂಜನೇಯ ಗಣಪ, ಏಕದಂತ ಗಣಪ, ನವಿಲ ಮೇಲೆ ಕುಳಿತಿರುವ ಗಣಪ, ಇಲಿ ಮೇಲೆ ಸವಾರಿ ಹೊರಟ ಡೊಳ್ಳು ಹೊಟ್ಟೆ ಗಣಪ ಹೀಗೆ ವಿಭಿನ ಶೈಲಿಯಲ್ಲಿ ಒಂದು ಅಡಿಯಿಂದ ಆರೇಳು ಅಡಿ ಎತ್ತರದ ಮೂರ್ತಿಗಳು ಮಾರುಕಟ್ಟೆಯಲ್ಲಿವೆ.

ವಿವಿಧ ಜಿಲ್ಲೆಗೆ ರವಾನೆ: ತಾಲೂಕು ಕೇಂದ್ರದಲ್ಲಿ ಜೇಡಿ ಮಣ್ಣಿನಿಂದ ತಯಾರಾಗಿ ರುವ ವಿನಾಯಕ ಮೂರ್ತಿಗಳು ತಿಪಟೂರು, ಕೃಷ್ಣರಾಜಪೇಟೆ, ನಾಗಮಂಗಲ, ತುಮ ಕೂರು, ಮೈಸೂರು, ಮಂಡ್ಯ ಶಿವಮೊಗ್ಗ, ಬೆಳಗಾವಿ, ಹಾಸನ, ಬೆಂಗಳೂರು ಸೇರಿ ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಈಗಾಗಲೇ ರವಾನೆ ಆಗಿವೆ.

ಗಣ್ಯಾತಿ ಗಣ್ಯರ ಮನೆಗೆ: ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ, ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ, ತುರುವೇಕರೆ ತಾಲೂಕಿನ ನೋಣನಕೆರೆ ಕಾಡುಸಿದ್ದೇಶ್ವರ ಮಠ, ಕುಂದೂರು ಮಹಾ ಸಂಸ್ಥಾನ ಮಠ, ಕಬ್ಬಳಿ ಕ್ಷೇತ್ರ, ತಾಲೂಕಿನಲ್ಲಿರುವ ರಂಭಾಪುರಿಶಾಖಾ ಮಠ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಮಂತ್ರಿ ಎಚ್.ಡಿ. ರೇವಣ್ಣ ಅವರ ಮನೆಗಳಿಗೂ ಚನ್ನರಾಯ ಪಟ್ಟಣ ತಾಲೂಕಿನ ಕಲಾವಿದರು ತಯಾರಿಸಿರುವ ಜೇಡಿಮಣ್ಣಿನ ಗಣೇಶ ಮೂರ್ತಿಗಳು ರವಾನೆಯಾಗಿವೆ.

ನೂರು ರೂ.ನಿಂದ ಸಾವಿರ ರೂ. ವರೆಗೆ: ಕನಿಷ್ಟ ನೂರು ರೂ.ಗಳಿಂದ ಸಾವಿರ ರೂ.ಮೌಲ್ಯದ ವಿಘ್ನೇಶ್ವರ ಮೂರ್ತಿ ದೊರೆಯುತ್ತಿವೆ. ಮನೆಯಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳಿಗೆ ದರ ಕಡಿಮೆಯಾಗಿದ್ದರೆ, ಸಾರ್ವಜನಿಕ ಮೂರ್ತಿಗಳ ಗಾತ್ರ ಮತ್ತು ವಿನ್ಯಾಸಕ್ಕೆ ತಕ್ಕಂತೆ ಮೂರ್ತಿಗಳ ಬೆಲೆ ಹೆಚ್ಚಾಗಿದೆ.

 

● ಶಾಮಸುಂದರ್‌ ಕೆ.ಅಣ್ಣೇನಹಳ್ಳಿ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.