ಕರ್ನಾಟಕ ಬಂದ್‌ಗೆ ಬೇಲೂರಲ್ಲಿ ಉತ್ತಮ ಬೆಂಬಲ


Team Udayavani, Sep 29, 2020, 2:14 PM IST

KOLAR-TDY-1

ಸಾಂದರ್ಭಿಕ ಚಿತ್ರ

ಬೇಲೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ನಡೆಸಿದ ಕರ್ನಾಟಕ ಬಂದ್‌ ಪಟ್ಟಣದಲ್ಲಿ ಸಂಪೂರ್ಣ ಯಶಸ್ವಿಯಾಯಿತು.

ಬಂದ್‌ ಹಿನ್ನೆಲೆಯಲ್ಲಿ ರೈತ, ಕರವೇ, ವಿವಿಧ ಸಂಘಟನೆಗಳು ನಡೆಸಿದ ಪ್ರತಿಭಟನೆ ಯಲ್ಲಿ ಶಾಸಕ ಕೆ.ಎಸ್‌.ಲಿಂಗೇಶ್‌ ಭಾಗವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಬಹುರಾಷ್ಟ್ರೀಯ ಕಂಪನಿ ಗಳಿಗೆ ರೈತರನ್ನು ಬಲಿ ನೀಡುವ ಭೂ ಸುಧಾ ರಣೆ ಮತ್ತು ಎಪಿಎಂಸಿ ತಿದ್ದಪಡಿ ಕಾಯ್ದೆ ಜಾರಿಗೆ ತಂದಿದೆ. ಇದರ ವಿರುದ್ಧ ಜೆಡಿಎಸ್‌ ಅವಿರತವಾಗಿಹೋರಾಟ ನಡೆಸಲು ಸಜ್ಜು ಗೊಂಡಿದೆ. ರೈತ ವಿರೋಧಿ ನೀತಿಗೆ ಮುಂದಿನ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠಕಲಿಸುತ್ತಾರೆ ಎಂದು ಹೇಳಿದರು.

ತಾಲೂಕು ರೈತ ಸಂಘದ ಅಧ್ಯಕ್ಷ ಭೋಗ ಮಲ್ಲೇಶ್‌ ಮಾತನಾಡಿ, ರಾಜ್ಯದಲ್ಲಿ ಮೊದಲೇ ರೈತರು ಅತಿವೃಷ್ಟಿ, ಅನಾವೃಷ್ಟಿಯಿಂದ ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ವೇಳೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತಾಪಿ ವರ್ಗಕ್ಕೆ ಮರಣ ಶಾಸನ ಬರೆಯುವ ಮುಂದಾಗಿದೆ ಎಂದು ದೂರಿದರು.

ಕರ್ನಾಟಕ ಭೂ-ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಬಹುರಾಷ್ಟ್ರೀಯ ಕಂಪನಿ ಪರವಾಗಿದ್ದು,ಇದ್ದರಿಂದ ರೈತರು, ಉದ್ಯಮಿ ಗಳ ಗುಲಾಮರಾಗಿ ಕೆಲಸ ಮಾಡುವ ಹೀನ ಸ್ಥಿತಿ ಬರುತ್ತದೆ. ಪ್ರಗತಿ ಪರ ಸಂಘಟನೆಗಳು ಒಟ್ಟಾಗಿ ಸೇರಿ ವಿರೋಧಿಸುತ್ತಿವೆಂದರು. ಸಹಕಾರ ನೀಡಲು ಮನವಿ: ತಾಲೂಕು ವರ್ತಕರಸಂಘದ ಅಧ್ಯಕ್ಷ ಗಿರಿಯಪ್ಪಶೆಟ್ಟಿ ಮಾತನಾಡಿ, ರೈತರಿಗೆ ಅನ್ಯಾಯವಾದ ಸಂದರ್ಭದಲ್ಲಿ ವರ್ತಕರ ಸಂಘಬಂದ್‌ ಬೆಂಬಲಿಸಿ ಸಹಕಾರ ನೀಡುತ್ತದೆ, ಮುಖ್ಯರಸ್ತೆ ಅಗಲೀಕರಣದಿಂದ ತಮಗೆ ಸಿಗಬೇಕಾದ ಪರಿಹಾರ ಕೊಡಿಸಲು ಎಲ್ಲಾ ಪ್ರಗತಿ ಪರ ಸಂಘಟನೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪ್ರಧಾನಕಾರ್ಯದರ್ಶಿ ಬಳ್ಳೂರು ಸ್ವಾಮೀಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ. ಜೆ.ನಿಶಾಂತ್‌, ದಸಂಸ ಬಿ.ಎಲ್‌.ಲಕ್ಷ್ಮಣ್‌, ರೈತ ಸಂಘದ ಪ್ರ. ಕಾರ್ಯದರ್ಶಿಬಸವ ರಾಜು, ಕರವೇ ತಾ. ಅಧ್ಯಕ್ಷ ಚಂದ್ರಶೇಖರ್‌, ಕರವೇ (ಪ್ರವೀಣ್‌ಶೆಟ್ಟಿ ಬಣ) ತಾ. ಅಧ್ಯಕ್ಷ ಎಸ್‌. ಭೋಜೇಗೌಡ, ಡಿಎಸ್‌ಎಸ್‌ ಮುಖಂಡ ಅಬ್ದುಲ್‌ ಸಮದ್‌, ಟಿಪ್ಪು ಸಂಘರ್ಷ ಸಮಿತಿ ಅಧ್ಯಕ್ಷ ಜಾಕೀರ್‌ಪಾಷ, ಜಯ ಕರ್ನಾಟಕ ಅಧ್ಯಕ್ಷ ಎಂ.ಕೆ.ಆರ್‌. ಸೋಮೇಶ್‌, ಡಾ. ರಾಜಕುಮಾರ್‌ ಅಭಿಮಾನಿ ಸಂಘದ ಅಧ್ಯಕ್ಷ ತೀರ್ಥಂಕರ್‌, ಟ್ಯಾಕ್ಸಿ ಮಾಲಿಕರ ಸಂಘದ ಅಧ್ಯಕ್ಷ ಮಹೇಶ್‌ ಇತರರು ಇದ್ದರು.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.