ಕುಟುಂಬ ಅಭಿವೃದ್ಧಿಗೆ ರಾಜಕೀಯ ಬಳಸಿಕೊಂಡ ಗೌಡರು


Team Udayavani, Mar 25, 2019, 3:44 PM IST

kutumba

ಅರಸೀಕೆರೆ: ಎಚ್‌.ಡಿ ದೇವೇಗೌಡರ ಕುಟುಂಬ ರಾಜಕಾರಣದಿಂದ ಬೇಸತ್ತಿರುವ ಹಾಸನ,ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರು ಈ ಬಾರಿ ಜೆಡಿಎಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹಾಸನ ಲೋಕಸಭಾ ಬಿಜೆಪಿ ಅಭ್ಯರ್ಥಿ ಎ.ಮಂಜು ತಿಳಿಸಿದರು.

ಬಿಜೆಪಿ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಎ. ಮಂಜು ಅರಸೀಕೆರೆ ತಾಲೂಕಿನ ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಆಶೀರ್ವಾದ ಪಡೆದು ಬಳಿಕ ಜಗನ್ಮಾತೆ ಸ್ವರ್ಣಗೌರಿ ದೇವಿ ದೇವಾಲಯಕ್ಕೆಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿ ನಂತರ ದೇವಾಲಯದ ಮುಂದೆ ಸೇರಿದ್ದ ಕಾರ್ಯ ಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಚುನಾವಣೆ ಬಂದಾಗ ಮೈತ್ರಿ ಧರ್ಮ: ಚುನಾವಣೆಗೆ ಮೂರು ಪಕ್ಷಗಳು ನಿಂತಾಗ ಮಾತ್ರ ಅವರು ಲಾಭ ಪಡೆದುಕೊಳ್ಳಲು ಜೆಡಿಎಸ್‌ನವರು ಮುಂದಾಗುತ್ತಾರೆ.ಆದರೆ ನೇರವಾಗಿ ಬಂದರೆ ಹೆದರಿ ಸುಮ್ಮನಾಗುತ್ತಾರೆ.ಇದಕ್ಕೆ ಸ್ಪಷ್ಟ ನಿದರ್ಶನ ಈಗ ಕಳೆದ ಎರಡು ದಶಕಗಳಿಂದ ಹೆದರಿಸಿಕೊಂಡು ಬರುತ್ತಿದ್ದ ಕಾಂಗ್ರೆಸ್‌ ಮುಖಂಡರ ಮನೆ ಬಾಗಿಲಿಗೆ ಜೆಡಿಎಸ್‌ ಮುಖಂಡರು ಎಡತಾಕುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರಮೋದಿ ರಾಜಕೀಯ ಜೀವನವನ್ನು ಎಂದೂ ತಮ್ಮ ಸ್ವಾರ್ಥಹಾಗೂ ವೈಯುಕ್ತಿಕ ಅಭಿವೃದ್ಧಿಗೆ ದುರುಪಯೋಗಪಡಿಸಿಕೊಂಡಿಲ್ಲ.ಆದರೆ ದೇಶದ ಪ್ರಧಾನಿ ಆಗಿದ್ದ ದೇವೇಗೌಡರು ರಾಜಕೀಯವನ್ನು ತಮ್ಮ ಕುಟುಂಬದ ಅಭಿವೃದ್ಧಿಗೆ ಬಳಸಿಕೊಂಡಿದ್ದಾರೆ.

ಹಾಸನದಲ್ಲಿಜೆಡಿಎಸ್‌ ಹೊರತು ಪಡಿಸಿ ಉಳಿದ ರಾಜಕೀ ಯ ಪಕ್ಷಗಳ ಕಾರ್ಯಕರ್ತರಿಗೆ ಉಸಿರು ಬಿಗಿ ಹಿಡಿದು ಜೀವಿಸುವ ವಾತಾವರಣವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್‌.ಡಿ.ರೇವಣ್ಣ ನಿರ್ಮಿಸುತ್ತಾರೆ. ದೇವೇಗೌಡ ಮತ್ತು ಅವರ ಮೊಮ್ಮಕ್ಕಳನ್ನು ಈ ಬಾರಿಯ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಜನತೆ ಸೋಲಿಸಿ ಮನೆಗೆ ಕಳಿಸುವುದು ನಿಶ್ಚಿತ ಎಂದು ಕುಟುಕಿದರು.

ಜೆಡಿಎಸ್‌ನಲ್ಲೂ ಭಿನ್ನಾಭಿಪ್ರಾಯ: ಈ ಬಾರಿ ಜಿಲ್ಲೆಯಲ್ಲಿ ಜೆಡಿಎಸ್‌ ಪರ 30ರಷ್ಟು ಇದ್ದರೆ 70ರಷ್ಟು ಮಂದಿ ಅವರ ವಿರುದ್ಧ ಇದ್ದಾರೆ. ಹಾಸನ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ನಂತರ ಜಿಲ್ಲೆಯಲ್ಲಿ ಜೆಡಿಎಸ್‌ ನೆಲಕಚ್ಚಲು ಆರಂಭಿಸಿದೆ.

ಜೆಡಿಎಸ್‌ನಲ್ಲೂ ಆಂತರಿಕ ಭಿನ್ನಾಭಿಪ್ರಾಯ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ದೇವೇಗೌಡರು ಹೇಗೆ ಕಾರ್ಯ ನಿರ್ವಹಿಸಿದರೋ ಅದೇ ರೀತಿ ಜಿಲ್ಲೆಯ ಮತದಾರರು ಮತದಾನ ಹತ್ತಿರ ಬರುತ್ತಿದ್ದಂತೆ ಕುಟುಂಬ ರಾಜಕಾರಣದಿಂದ ಬೇಸತ್ತು ಗುಪ್ತವಾಗಿ ಬಿಜೆಪಿಗೆ ಮತ ಚಲಾಯಿಸಲಿದ್ದಾರೆ ಎಂದುವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕುಟುಂಬ ರಾಜಕಾರಣವೇ ನಿಲ್ಲಬೇಕು ಎಂಬುದೇ ನನ್ನ ಮೊದಲ ಗುರಿಯಾಗಿದೆ ಎಂದರು. ಕಾಂಗ್ರೆಸ್‌ ಮುಖಂಡ ಅಣ್ಣಾಯಕನಹಳ್ಳಿ ವಿಜಯ್‌ಕುಮಾರ್‌, ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಶಶಿವಾಳ ಗಂಗಾಧರ್‌,ಬಿಜೆಪಿ ಮುಖಂಡರಾದ ಬಸವರಾಜ್‌,

ಗ್ರಾಪಂ ಸದಸ್ಯ ಎಂ.ಡಿ ರಮೇಶ್‌,ಡಿ.ಎಂ.ಕುರ್ಕೆ ಎಂ.ಜಿ.ಲೋಕೇಶ್‌,ಎಂ.ಬಿ.ಅಶೋಕ್‌, ಕಲ್ಲುಸಾದರಹಳ್ಳಿ ದೀಪಕ್‌, ಎಂ.ಸಿ.ಚಂದ್ರಶೇಖರ್‌, ಎಂ.ಎಸ್‌. ಪುಟ್ಟಮಲ್ಲಪ್ಪ, ಎಂಬಿ ಕೊಟ್ಟೂರಪ್ಪ, ಎಂ.ಆರ್‌. ಕಾಂತರಾಜ್‌ ಎಂ. ಚನ್ನಬಸಪ್ಪ, ಎಂ.ಯೋಗೀಶ್‌, ಎಂ.ಎಸ್‌. ಗೋವಿಂದ,ಎಂ.ಟಿ. ಪ್ರವೀಣ್‌, ದಿವಾಕರ್‌ ಮುಂತಾದವರಿದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.