ವಿಮಾನ ನಿಲ್ದಾಣ: ಮತ್ತೆ ಗರಿಗೆದರಿದ ನಿರೀಕ್ಷೆ


Team Udayavani, Mar 1, 2021, 2:47 PM IST

ವಿಮಾನ ನಿಲ್ದಾಣ: ಮತ್ತೆ ಗರಿಗೆದರಿದ ನಿರೀಕ್ಷೆ

ಹಾಸನ: ಕಳೆದ 5 ದಶಕಗಳಿಂದ ನನೆಗುದಿಗೆ ಬಿದ್ದಿರುವ ಹಾಸನ ವಿಮಾನ ನಿಲ್ದಾಣ ನಿರ್ಮಾಣದ ಕನಸು ನನಸಾಗುವ ಲಕ್ಷಣಗಳು ಗೋಚರಿಸುತ್ತಿವೆ. ರಾಜ್ಯ ಸರ್ಕಾರ ಉತ್ಸುಕತೆ ತೋರಿಸುತ್ತಿದ್ದು, ಅಧಿಕಾರಿಗಳು ವಿಮಾನ ನಿಲ್ದಾಣ ನಿರ್ಮಾಣದ ಪೂರ್ವ ಸಿದ್ಧತೆ ಆರಂಭಿಸಿದ್ದಾರೆ.

ಹಾಸನದ ಹೊರ ವಲಯ ಬೂವನಹಳ್ಳಿ ಬಳಿಸ್ವಾಧೀನಪಡಿಸಿಕೊಂಡಿರುವ ಸ್ಥಳಕ್ಕೆ ರಾಜ್ಯ ಇಂಧನಮತ್ತು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್‌ಮೋಹನ್‌ ಭಾನುವಾರಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಉದ್ದೇಶಿತ ವಿಮಾನ ನಿಲ್ದಾಣದ ಸ್ಥಳದಲ್ಲಿ ಹಾದು ಹೋಗಿರುವ ಹೈಟೆನ್ಷನ್‌ ವಿದ್ಯುತ್‌ ಮಾರ್ಗವನ್ನು ಸ್ಥಳಾಂತರಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಕೆಪಿಟಿಸಿಎಲ್‌ ಎಂಜಿನಿಯರ್‌ಗೆ ಸೂಚನೆ ನೀಡಿದರು.

ಜನರಿಂದ ಉತ್ತಮ ಪ್ರತಿಕ್ರಿಯೆ: ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಮಿನಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಲುಬುರಗಿವಿಮಾನ ನಿಲ್ದಾಣ ಈಗಾಗಲೇ ಲೋಕಾರ್ಪಣೆ ಯಾಗಿದ್ದು, ಹೆಚ್ಚು ವಿಮಾನಗಳು ಹಾರಾಟ ನಡೆಸುತ್ತಿವೆ. ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್‌, ವಿಜಯಪುರ, ಕಾರವಾರದಲ್ಲಿಯೂವಿಮಾನ ನಿಲ್ದಾಣ ನಿರ್ಮಾಣ ಆರಂಭವಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣ ಶೇ.50 ಪೂರ್ಣಗೊಂಡಿದೆ ಎಂದು ಹೇಳಿದರು.

ಹಾಸನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಉತ್ಸುಕವಾಗಿದ್ದು, ಕೆಲವೇ ದಿನಗಳಲ್ಲಿ ಹಾಸನ ಜಿಲ್ಲೆಯ ಜನರಿಗೆ ಒಳ್ಳೆಯ ಸುದ್ದಿ ಸಿಗಬಹುದು. ಆ ನಿಟ್ಟಿನಲ್ಲಿತಾವು ಸ್ಥಳ ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯುವುದಾಗಿ ಕಪಿಲ್‌ ಮೋಹನ್‌ ಅವರು ತಿಳಿಸಿದರು.

ಸ್ಥಳಾಂತರಿಸುವ ಮೊದಲೇ ಕಾಮಗಾರಿ: ಹಾಸನ ವಿಮಾನ ನಿಲ್ದಾಣಕ್ಕೆ ಸ್ವಾಧೀನ ಪಡಿಸಿಕೊಂಡಿರುವಪ್ರದೇಶದಲ್ಲಿ 220 ಕೆ.ವಿ. ವಿದ್ಯುತ್‌ ಮಾರ್ಗ ಹಾದು ಹೋಗಿದೆ. 17 ಕಿ.ಮೀ. ವಿದ್ಯುತ್‌ ಮಾರ್ಗವನ್ನು ಸ್ಥಳಾಂತರಿಸಬೇಕಾಗಿದೆ. ಈ ಸಂಬಂಧ ಕೆಪಿಟಿಸಿಎಲ್‌ಎಂಜಿನಿಯರುಗಳು ಅಗತ್ಯ ಕ್ರಮ ಕೈಗೊಳ್ಳಲುಸೂಚನೆ ನೀಡಲಾಗಿದೆ. ವಿದ್ಯುತ್‌ ಮಾರ್ಗಸ್ಥಳಾಂತರಕ್ಕೆ 7 ರಿಂದ 8 ತಿಂಗಳು ಬೇಕಾಗುತ್ತದೆ. ಆದರೆ, ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಮಂಜೂರಾತಿ ನೀಡಿದರೆ ವಿದ್ಯುತ್‌ ಮಾರ್ಗ ಸ್ಥಳಾಂತರಕ್ಕಿಂತ ಮೊದಲೇ ಕಾಮಗಾರಿ ಆರಂಭಿಸಲು ಅಡಚಣೆಯೇನಿಲ್ಲ. ಈಗಾಗಲೇ ಸ್ವಾಧೀನಪಡಿಸಿಕೊಂಡಿರುವ ಭೂಮಿಯಲ್ಲಿ ನಿರ್ಮಾಣ ಆರಂಭಿಸಿ ಆನಂತರ ಹೆಚ್ಚುವರಿ ಭೂಮಿ ಸ್ವಾಧೀನಪಡಿಸಿಕೊಳ್ಳಬಹುದು ಎಂದು ಅವರು ಸ್ಪಷ್ಟಪಡಿಸಿದರು.

ಜೆಡಿಎಸ್‌ ಒತ್ತಡಕ್ಕೆ ಸರ್ಕಾರ ಸ್ಪಂದನೆ: ಹಾಸನ ವಿಮಾನ ನಿಲ್ದಾಣಕ್ಕೆ 560 ಎಕರೆ ಭೂ ಸ್ವಾಧೀನವಾಗಿದಶಕಗಳೇ ಕಳೆದಿದ್ದು, 2008ರಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ವಿಮಾನ ನಿಲ್ದಾಣನಿರ್ಮಾಣಕ್ಕೆ ಶಿಲಾನ್ಯಾಸವನ್ನೂ ಮಾಡಿದ್ದರು. ಆದರೆ, ಜೆಡಿಎಸ್‌- ಬಿಜೆಪಿಸರ್ಕಾರ ಪತನದ ನಂತರ ಯೋಜನೆ ನನೆಗುದಿಗೆ ಬಿದ್ದಿತ್ತು.2018ರಲ್ಲಿ ಮತ್ತೆ ಜೆಡಿಎಸ್‌ -ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಡಿ.ರೇವಣ್ಣ ವಿಮಾನ ನಿಲ್ದಾಣ ನಿರ್ಮಾಣದ ಎಲ್ಲಾ ಅಡೆತಡೆ ನಿವಾರಿಸಿ ಕಾಮಗಾರಿಯ ಟೆಂಡರ್‌ಪ್ರಕಟಣೆಗೆ ಸಿದ್ಧತೆ ನಡೆಸಿದ್ದರು. ಆಷ್ಟರಲ್ಲಿ ಸಮ್ಮಿಶ್ರ ಸರ್ಕಾರ ಪತನದ ನಂತರ ಮತ್ತೆ ಯೋಜನೆ ನನೆಗುದಿಗೆ ಬಿತ್ತು.

ಬಿಜೆಪಿ ಸರ್ಕಾರ ಹಾಸನ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ತಡೆ ಒಡ್ಡಿದೆ ಎಂದು ಆರೋಪಿಸಿ ಮಾಜಿ ಪ್ರಧಾನಿ ದೇವೇಗೌಡ ಜಿಲ್ಲೆಯ ಜೆಡಿಎಸ್‌ಶಾಸಕರು ಮುಖ್ಯಮಂತ್ರಿ ನಿವಾಸದ ಬಳಿ ಧರಣಿನಡೆಸಲು ನಿರ್ಧರಿಸಿದ್ದ ಸಂದರ್ಭದಲ್ಲಿಮುಖ್ಯಮಂತ್ರಿ ಯಡಿಯೂರಪ್ಪ ಅವರು ಧರಣಿ ಕೈಬಿಡುವಂತೆ ದೇವೇಗೌಡರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಈ ಮಧ್ಯೆ ಹಾಸನದ ಶಾಸಕ ಪ್ರೀತಂ ಜೆ.ಗೌಡ ಅವರು ಮುಖ್ಯಮಂತ್ರಿಯವರಿಗೆ ಪತ್ರ ಬರೆದುಮನವಿ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹಾಸನ ವಿಮಾನ ನಿಲ್ದಾಣ ನಿರ್ಮಾಣಸೇರಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆನೀಡುವುದಾಗಿ ವಿಧಾನಸಭೆ ಅಧಿವೇಶದನದಲ್ಲಿಯೇಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಹಾಸನವಿಮಾನ ನಿಲ್ದಾಣ ನಿರ್ಮಾಣದ ಯೋಜನೆಯ ನಿರೀಕ್ಷೆ ಈಗ ಗರಿಗೆದರಿದೆ.

ವಿದ್ಯುತ್‌ ಮಾರ್ಗ ಸ್ಥಳಾಂತರಕ್ಕೆ 20 ಕೋಟಿ ರೂ. :

ವಿಮಾನ ನಿಲ್ದಾಣಕ್ಕೆ ಸ್ವಾಧೀನಪಡಿಸಿಕೊಂಡಿರುವ ಪ್ರದೇಶದಲ್ಲಿ ಹಾದು ಹೋಗಿರುವ 220 ಕೆ.ವಿ. ವಿದ್ಯುತ್‌ ಮಾರ್ಗದ ಒಟ್ಟು 68 ಬೃಹತ್‌ ಗೋಪುರಗಳನ್ನು ಸ್ಥಳಾಂತರಿಸಬೇಕಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಹಾಸನದ ಹೊರವಲಯ ಬುಸ್ತೇನಹಳ್ಳಿಯಿಂದ ಮೆಳಗೋಡು ಗ್ರಾಮದ ನಡುವೆ ಹೊಸ ವಿದ್ಯುತ್‌ ಮಾರ್ಗನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಈಗಾಗಲೇ 66 ವಿದ್ಯುತ್‌ ಮಾರ್ಗದ ಗೋಪುರಗಳನಿರ್ಮಾಣ ಆರಂಭವಾಗಿದೆ. ಇನ್ನೆರೆಡು ಗೋಪುರಗಳ ನಿರ್ಮಾಣಕ್ಕೆ ಭೂ ಸ್ವಾಧೀನದಸಮಸ್ಯೆಯಿದೆ. ಹಾಸನ ಜಿಲ್ಲಾಧಿಕಾರಿಯವರು ಆ ವಿವಾದ ಬಗೆಹರಿಸಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ ಎಂದು ಹೇಳಿದರು. ವಿದ್ಯುತ್‌ ಮಾರ್ಗ ಬದಲಾವಣೆಗೆ ಒಟ್ಟು 20 ಕೋಟಿ ರೂ. ವೆಚ್ಚವಾಗುತ್ತದೆ. ಈಗಾಗಲೇ ಕೆಪಿಟಿಸಿಎಲ್‌ 5.5 ಕೋಟಿ ರೂ. ವೆಚ್ಚ ಮಾಡಿದೆ. 7 ರಿಂದ 8 ತಿಂಗಳೊಳಗೆ ವಿದ್ಯುತ್‌ ಮಾರ್ಗದ ಸ್ಥಳಾಂತರಮುಗಿಯಲಿದೆ ಎಂದು ಕೆಪಿಟಿಸಿಎಲ್‌ ಮುಖ್ಯ ಎಂಜಿನಿಯರ್‌ ನಾಗಾರ್ಜುನ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.