ಜೆಡಿಎಸ್‌ ಭದ್ರಕೋಟೆ ಆಸ್ಮಿತೆ ಉಳಿಸಿಕೊಂಡ ಹಾಸನ

ಅಭಿವೃದ್ಧಿಮಂತ್ರಕ್ಕೆ ಹಾಸನದ ಜನರ ಸ ³ಂದನೆ: ಮೈತ್ರಿಯ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಜೆಡಿಎಸ್‌

Team Udayavani, May 25, 2019, 3:42 PM IST

hasan-tdy-5..

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಜ್ವಲ ರೇವಣ್ಣ ಅವರು ಕಾರ್ಯಕರ್ತರೊಂದಿಗೆ ಸಂಭ್ರಮಿಸಿದರು.

ಹಾಸನ: ವಿಭಿನ್ನ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಾ ಬಂದಿರುವ ಹಾಸನ ಜಿಲ್ಲೆಯ ರಾಜಕಾರಣ ಈ ಬಾರಿಯ ಲೋಕಸಭಾ ಚುನಾವಣೆಯ ಫ‌ಲಿತಾಂಶದೊಂದಿಗೆ ಹೊಸ ದಾಖಲೆ ನಿರ್ಮಿಸಿದೆ. ನಿರೀಕ್ಷೆಯಂತೆ ಜೆಡಿಎಸ್‌- ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರು ವಿಜಯಿಯಾಗಿದ್ದಾರೆ. ದೇವೇಗೌಡರು 5 ಬಾರಿ ಪ್ರತಿನಿಧಿಸಿದ್ದ ಹಾಸನ ಲೊಕಸಭಾ ಕ್ಷೇತ್ರಕ್ಕೆ ದೇವೇಗೌಡರ ಮೊಮ್ಮಗ ಪ್ರಜ್ವಲ್ ಉತ್ತರಾಧಿಕಾರಿಯಾಗಿದ್ದಾರೆ.

ಹಿಂದೆಂದೂ ಚುನಾವಣೆ ಎದುರಿಸದ ಪ್ರಜ್ವಲ್ ರೇವಣ್ಣ ಅವರಿಗೆ ಪಿತ್ರಾರ್ಜಿತ ರಾಜಕೀಯ ಶಕ್ತಿ ನೆರವಾಗಿದೆ. ಕಳೆದ ಮೂರು ದಶಕಗಳಿಂದ ಎಚ್.ಡಿ. ದೇವೇಗೌಡರು ಮತ್ತು ಅವರ ಪುತ್ರ ಎಚ್.ಡಿ.ರೇವಣ್ಣ ಅವರು ಹಾಸನ ಜಿಲ್ಲೆಯಲ್ಲಿ ರೂಪಿಸಿದ ರಾಜಕೀಯ ನೆಲೆ ನಿರಂತರವಾಗಿ ದೇವೇಗೌಡರ ಕುಟುಂಬಕ್ಕೆ ಫ‌ಲ ಕೊಡತ್ತಲೇ ಬಂದಿದೆ. ರಾಜ್ಯ ರಾಜಕೀಯದಲ್ಲಿ ಏನೇ ಬದಲಾವಣೆಗಳಾಗುತ್ತಾ ಬಂದಿದ್ದರೂ ಹಾಸನ ಜಿಲ್ಲೆಯ ಜನರು ಮಾತ್ರ ದೇವೇಗೌಡರು ಮತ್ತು ಜೆಡಿಎಸ್‌ ಬೆಂಬಲಿಸುತ್ತಾ ಬಂದಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರ ಸುನಾಮಿ ಅಲೆಯ ನಡುವೆಯೂ ಜಿಲ್ಲೆಯ ಮತದಾರರು ಜೆಡಿಎಸ್‌ ಕೈ ಹಿಡಿದು ಪಕ್ಷದ ಅಸ್ಥಿತ್ವ ಉಳಿಸಿಕೊಟ್ಟಿದ್ದಾರೆ.

ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಅಧಿಕಾರದಲ್ಲಿರಲಿ, ಇಲ್ಲದಿರಲಿ ಜಿಲ್ಲೆಯ ಅಭಿವೃದ್ಧಿ, ಜಿಲ್ಲೆಯ ಜನರ ಕೆಲಸಗಳಿಗೆ ದನಿಯಾಗಿ ಸ್ಪಂದಿಸುತ್ತಿರುವ ದೇವೇಗೌಡರು ಮತ್ತು ಎಚ್.ಡಿ.ರೇವಣ್ಣ ಅವರ ಕುಟುಂಬದ ಕುಡಿಯನ್ನು ಗೆಲ್ಲಿಸುವ ಮೂಲಕ ಜಿಲ್ಲೆಯ ಜನರೂ ಅಪ್ಪ – ಮಕ್ಕಳಿಗೆ ಪ್ರತಿಸ್ಪಂದಿಸಿದ್ದಾರೆ. ಕಳೆದ ವರ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಾಸನ ಜಿಲ್ಲೆಯಲ್ಲಿ ಅಭಿವೃದ್ಧಿಯ ಪರ್ವವೇ ಆರಂಭ ವಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅವರು ಅಧಿಕಾರದಲ್ಲಿದ್ದಾಗಲೆಲ್ಲಾ ಜಿಲ್ಲೆಯ ಜನರ ನಿರೀಕ್ಷೆ ಮೀರಿ ಅಭಿವೃದ್ದಿ ಕೆಲಸ ಮಾಡಿದ್ದಾರೆ. ಅದರ ಫ‌ಲ ರೇವಣ್ಣ ಅವರಿಗೆ ಪುತ್ರನ ಗೆಲುವಿನಲ್ಲಿ ಸಿಕ್ಕಿದೆ.

ಮೈತ್ರಿಯ ಸದ್ಬಳಕೆ: ಈ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಆದ ಮೈತ್ರಿಯ ಲಾಭವನ್ನೂ ಜೆಡಿಎಸ್‌ ಸಮರ್ಥವಾಗಿ ಬಳಸಿಕೊಂಡಿತು. ಹಳೆಯ ರಾಜ ಕೀಯ ವೈರತ್ವವನ್ನು ಎಚ್.ಡಿ.ರೇವಣ್ಣ ಅವರು ಕಾಂಗ್ರೆಸ್‌ ನಾಯಕ ಮನೆ ಬಾಗಿಲಿಗೆ ಹೋದಾಗ ಕಾಂಗ್ರೆಸ್‌ ನಾಯಕರ ಸಂತಸದಿಂದಲೇ ಸ್ವಾಗತಿಸಿ ಜೆಡಿ ಎಸ್‌ಗೆ ಸ್ಪಂದಿಸಿದರು. ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಕೆಲವು ಮುಖಂಡರೂ ಗೌಡರ ಋಣ ತೀರಿಸ ಬೇಕೆಂದು ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿದ್ದು, ಶಾಸಕರಾಗಿ, ಸಚಿವರಾಗಿದ್ದ ಎ.ಮಂಜು ಪಕ್ಷದ ಸಂಘಟನೆ ಮಾಡಿದ್ದಕ್ಕಿಂತ ಶತ್ರುಗಳನ್ನು ಪಕ್ಷದಲ್ಲಿ ಶತ್ರುಗಳನ್ನು ಸೃಷ್ಟಿಸಿಕೊಂಡಿದ್ದೇ ಹೆಚ್ಚು. ಕಾಂಗ್ರೆಸ್‌ನಲ್ಲಿ ಸಚಿವನಾಗಿ ಅಧಿಕಾರ ಅನಭವಿಸಿ ಬಿಜೆಪಿಗೆ ಹಾರಿದ ಎ.ಮಂಜು ಅವರ ವಿರುದ್ಧ ಸೇಡು ತೀರಿಸಿಕೊಳ್ಳಲು ಕಾಯುತ್ತಿದ್ದ ಕಾಂಗ್ರೆಸ್‌ ಮುಖಂಡರಿಗೆ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡುವ ಅವಕಾಶಕ್ಕಿಂತ ಎ.ಮಂಜು ವಿರುದ್ಧ ಸೇಡು ತೀರಿಸಿಕೊಳ್ಳುವ ಸದಾವಕಾಶ ಸಿಕ್ಕಿತು. ಅದು ಪ್ರಜ್ವಲ್ ರೇವಣ್ಣ ಅವರಿಗೆ ವರವಾಗಿ ಪರಿಣಿಮಿಸಿತು.

ಇದೆಲ್ಲದರ ಜೊತೆಗೆ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ.ರೇವಣ್ಣ ಅವರ ವರ್ಚಸ್ಸು, ಜೆಡಿಎಸ್‌ ಅಧಿಕಾರದಲ್ಲಿರುವ ಅವಕಾಶದ ಜೊತೆಗೆ ಹಾಸನ ಜೆಡಿಎಸ್‌ ಭದ್ರಕೋಟೆಯೆಂಬ ಅಸ್ಮಿತೆಯೂ ಮೋದಿ ಅಲೆಯ ನಡುವೆಯೂ ಪ್ರಜ್ವಲ್ ಗೆಲುವಿಗೆ ನೆರವಾಯಿತು.

● ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.