HD Revanna: ಪ್ರಜ್ವಲ್‌ ಕೊಡುಗೆ; ದಾಖಲೆ ಸಹಿತ ಉತ್ತರ


Team Udayavani, Oct 31, 2023, 3:56 PM IST

tdy-12

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರು ನೀಡಿರುವ ಕೊಡುಗೆಗಳ ಬಗ್ಗೆ ಪ್ರಶ್ನೆ ಮಾಡುತ್ತಿರು ವವರಿಗೆ ದಾಖಲೆ ಸಹಿತ ಉತ್ತರ ಕೊಡುತ್ತೇವೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ತಿರುಗೇಟು ನೀಡಿದರು.

ಹಾಸನ ಡೇರಿ ಆವರಣದಲ್ಲಿ ಹಾಸನ ಹಾಲು ಒಕ್ಕೂಟದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸನ ಜಿಲ್ಲೆಯನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಪಿಎಂಜಿಎಸ್‌ವೈ, ಕೇಂದ್ರ ರಸ್ತೆ ಅಭಿವೃದ್ಧಿ  ನಿಧಿ ಯಿಂದ ಜಿಲ್ಲೆಗೆ ಮಂಜೂ ರಾಗಿರುವ ಕಾಮಗಾರಿ ಮತ್ತು ಮೊತ್ತದ ಬಗ್ಗೆ ದಾಖಲೆ ಸಹಿತ ಸೂಕ್ತ ಸಂದರ್ಭದಲ್ಲಿ ಉತ್ತರ ಕೊಡಲಿದ್ದೇವೆ ಎಂದರು.

24 ಮೇಲ್ಸೆತುವೆ, 800 ಕೋಟಿ ರೂ. ಮಂಜೂರು:  ಹಾಸನ- ಬೆಂಗಳೂರು ನಡುವಿನ ಚತುಷ್ಪಥ ರಸ್ತೆಯಲ್ಲಿ ಅಪ ಘಾತಗಳನ್ನು ತಪ್ಪಿಸಲು  ಮಂಡ್ಯ ಜಿಲ್ಲೆಯ ಗಡಿ ಭಾಗದಿಂದ ಹಾಸನದ ವರೆಗೆ 24 ಮೇಲ್ಸೆತುವೆಗಳ ನಿರ್ಮಾಣಕ್ಕೆ ಸುಮಾರು 800 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿಗಳು ಚನ್ನರಾಯಪಟ್ಟಣ ತಾಲೂಕಿನಲ್ಲಿ ಪೂರ್ಣಗೊಂಡಿವೆ.

ಹಾಸನ ತಾಲೂಕಿನಲ್ಲಿ ಕಾಮಗಾರಿಗಳು ಈಗ ಆರಂಭವಾಗಿವೆ. ಚನ್ನರಾಯಪಟ್ಟಣ ಮತ್ತು  ಹಾಸನ ಬೈ ಪಾಸ್‌ ರಸ್ತೆಯ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 700 ಕೋಟಿ ರೂ. ಮಂಜೂರಾಗಿದ್ದು, ಕಾಮಗಾಗಿ ನಡೆಯುತ್ತಿದೆ. ಇವೆಲ್ಲ ಸಂಸದರು ಮಾಡಿಸಿದ ಅಭಿವೃದ್ಧಿ ಯೋಜನೆಗಳಲ್ಲವೇ ಎಂದು ಪ್ರಶ್ನಿಸಿದರು.

ಅನುದಾನ ಮಂಜೂರು ಮಾಹಿತಿ: ರಾಷ್ಟ್ರೀಯ ಹೆದ್ದಾರಿ -373 ರಲ್ಲಿ ಹಾಸನ-ಬೇಲೂರು ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 496 ಕೋಟಿ ರೂ. ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗಲಿದೆ. ಹೊಳೆನರಸೀಪುರ – ಬಿಳಿಕೆರೆ ( ಮೈಸೂರು) ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ 1000 ಕೋಟಿ ರೂ. ಮಂಜೂರಾಗಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ

ಜಿಲ್ಲೆಯಲ್ಲಿ 250 ಕಿ.ಮೀ. ರಸ್ತೆ ಅಭಿವೃದ್ಧಿಗೆ 200 ಕೋಟಿ ರೂ. ಮಂಜೂ ರಾಗಿದೆ ಎಂದು ಕೇಂದ್ರ ಸರ್ಕಾರ ದಿಂದ ಜಿಲ್ಲೆಗೆ ಮಂಜೂರಾದ ಯೋಜನೆಗಳ ಬಗ್ಗೆ ಎಚ್‌.ಡಿ.ರೇವಣ್ಣ ಮಾಹಿತಿ ನೀಡಿದರು.

ಶಾಂತಿಗ್ರಾಮ- ಅರಸೀಕೆರೆ- ಹಿರಿ ಯೂರು ನಡುವೆ 1,550 ಕೋಟಿ ರೂ. ಹೊಸ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದು, ಭೂ ಸ್ವಾಧೀನ ಪ್ರಕ್ರಿಯೆ ನಡೆದಿದೆ. ಮಾರ್ಚ್‌ನಿಂದ ಕಾಮಗಾರಿ ಕಾಮ ಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಹೊಸದಾಗಿ 12 ಮೇಲ್ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ :

ಹಾಸನ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಗ್ರಾಮಗಳ ಸಂಪರ್ಕಕ್ಕೆ ಪೂರಕವಾಗಿ ಚನ್ನರಾಯಪಟ್ಟಣ ಮತ್ತು ಹಾಸನ ತಾಲೂಕು ವ್ಯಾಪ್ತಿಯಲ್ಲಿ ಮತ್ತೆ ಹೊಸದಾಗಿ 12 ಮೇಲ್ಸೇತುವೆಗಳ ನಿರ್ಮಾಣಕ್ಕೆ 428 ಕೋಟಿ ರೂ. ಯೋಜನೆ ಎನ್‌ಎಚ್‌ಎಐನಿಂದ ಪ್ರಸ್ತಾವನೆ ಸಿದ್ಧಗೊಂಡಿದ್ದು, ಶೀಘ್ರದಲ್ಲಿಯೇ ಮಂಜೂರಾತಿ ಸಿಗಲಿದೆ. ಈ ಎಲ್ಲ ಯೋಜನೆಗಳು  ಹಾಸನ ಜಿಲ್ಲೆಗೆ ಮಂಜೂರಾಗಿರುವುದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮತ್ತುಸಂಸದ ಪ್ರಜ್ವಲ್‌ ರೇವಣ್ಣ ಅವರ ಹೋರಾಟದಿಂದ  ಎಂದು  ರೇವಣ್ಣ ತಿಳಿಸಿದರು.

333 ಮಕ್ಕಳಿಗೆ 18.5 ಲಕ್ಷ ರೂ. ಪುರಸ್ಕಾರ : 

ಹಾಲು ಉತ್ಪಾದಕರ ಮಕ್ಕಳಿಗೆ ಉತ್ತೇಜನ ನೀಡುವ ಸಲುವಾಗಿ ಒಟ್ಟು 333 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಾರಿ ಹಾಸನ ಹಾಲು ಒಕ್ಕೂಟವು ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 5 ಸಾವಿರ, ಪಿಯುಸಿ 7 ಸಾವಿರ ಹಾಗೂ ಪದವಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 10 ಸಾವಿರ ರೂ.ಪುರಸ್ಕಾರ  ನೀಡಲಾಗುತ್ತಿದೆ ಎಂದು ಎಚ್‌.ಡಿ.ರೇವಣ್ಣ ಅವರು ಹೇಳಿದರು.  ಹಾಸನ ಹಾಲು ಒಕ್ಕೂಟವು ಹಾಸನ ಡೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಹಾಲು ಉತ್ಪಾದಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ  ಪ್ರೋತ್ಸಾಹಧನ ವಿತರಿಸಿ ಮಾತನಾಡಿ, ಮುಂದಿನ ವರ್ಷದಿಂದ ಪ್ರತಿಭಾ ಪುರಸ್ಕಾರದ ವಿದ್ಯಾರ್ಥಿಗಳ ಸಂಖ್ಯೆ ಮತ್ತು. ಮೊತ್ತವನ್ನು ದುಪ್ಪಟ್ಟು ಮಾಡಲಾ ಗುವುದು ಎಂದು ರೇವಣ್ಣ ಅವರು ಸ್ಪಷ್ಟಪಡಿಸಿದರು.  ಜಿಪಂ ಮಾಜಿ ಸದಸ್ಯೆ  ಭವಾನಿ ರೇವಣ್ಣ ಅವರು ಮಾತನಾಡಿ, ಹಾಸನ ಜಿಲ್ಲೆ ಶೈಕ್ಷಣಿಕವಾಗಿ  ಅಭಿವೃದ್ಧಿ ಆಗಿರುವುದರ ಹಿಂದೆ  ಎಚ್‌.ಡಿ.ರೇವಣ್ಣ ಅವರ ಶ್ರಮ ಮತ್ತು ಪ್ರೋತ್ಸಾಹವಿದೆ ಎಂದರು.

ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ  ಮಹೇಶ್‌, ನಿರ್ದೇಶಕರಾದ  ಮಂಜೇಗೌಡ, ಚನ್ನೇಗೌಡ , ಸಹಕಾರ ಸಂಘಗಳ ಉಪ ನಿಬಂಧಕ ವಿಜಯಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು. ಒಕ್ಕೂಟದ ನಿರ್ದೇಶಕ  ದೊಡ್ಡಬೀಕನಹಳ್ಳಿ ನಾಗರಾಜು ಸ್ವಾಗತಿಸಿದರು.

536 ಲೋಕಸಭೆಯಲ್ಲಿ ಪ್ರಶ್ನೆ:

ಪ್ರಜ್ವಲ್‌ ರೇವಣ್ಣ ಅವರು ಸಂಸತ್ತಿನಲ್ಲಿ ಹಾಸನ ಜಿಲ್ಲೆಗೆ ಸಂಬಂಧಿಸಿದ ವಿಷಯಗಳಷ್ಟೇ ಅಲ್ಲ. ರಾಜ್ಯದ ಹಿತದ ಬಗ್ಗೆಯೂ ಹೋರಾಟ ನಡೆಸುತ್ತಾ ಬಂದಿದ್ದಾರೆ. ಲೋಕಸಭೆಯಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ 536 ಪ್ರಶ್ನೆಗಳನ್ನು ಕೇಳಿ ಕೇಂದ್ರ ಸರ್ಕಾರದಿಂದ ಉತ್ತರ ಪಡೆದುಕೊಂಡಿದ್ದಾರೆ ಎಂದೂ ಹೇಳಿ ಪ್ರಜ್ವಲ್‌ ರೇವಣ್ಣ ಅವರ ಕೊಡುಗೆ ಏನು ಎಂದು ಪ್ರಶ್ನಿಸುತ್ತಿರುವ ಕಾಂಗ್ರೆಸ್‌ ಮುಖಂಡರಿಗೆ ತಿರುಗೇಟು ನೀಡಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.