ನುಗ್ಗೇಹಳ್ಳಿ ಗ್ರಾಮ ಪಂಚಾಯ್ತಿನಲ್ಲಿ ಲಕ್ಷಾಂತರ ರೂ. ಅಕ್ರಮ

Team Udayavani, Oct 17, 2022, 5:24 PM IST

ನುಗ್ಗೇಹಳ್ಳಿ ಗ್ರಾಮ ಪಂಚಾಯ್ತಿನಲ್ಲಿ ಲಕ್ಷಾಂತರ ರೂ. ಅಕ್ರಮ

ಚನ್ನರಾಯಪಟ್ಟಣ: ತಾಲೂಕಿನ ನುಗ್ಗೇಹಳ್ಳಿ ಪಿಡಿಒ ಬೇನಾಮಿ ಬಿಲ್‌ ಮಾಡಿ ಲಕ್ಷಾಂತರ ರೂ. ಹಣ ಲೂಟಿ ಮಾಡಿದ್ದಾರೆ ಎಂದು ಮಾಜಿ ಎಂಎಲ್‌ಸಿ ಎಂ.ಎ.ಗೋಪಾಲಸ್ವಾಮಿ ಆರೋಪಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಡಿಒ ಹರೀಶ್‌ ಗ್ರಾಪಂ ಸದಸ್ಯರಿಗೆತಿಳಿಯದೇ ಹಲವು ಏಜೆಂನ್ಸಿ, ಅಂಡಿಗಳ ಹೆಸರಿಗೆ ಚೆಕ್‌ಬರೆದು ನೀಡಿದ್ದು, ಅಲ್ಲಿಂದ 40 ಲಕ್ಷ ರೂ.ಗೂ ಹೆಚ್ಚುಹಣ ಲಪಟಾಯಿಸಿದ್ದಾರೆ. ಈ ಬಗ್ಗೆ ಮೇಲಧಿಕಾರಿಗಳು ತನಿಖೆ ಮಾಡಿ, ಪಿಡಿಒ ಅಮಾನತು ಮಾಡದೆಹೋದರೆ, ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೈಪ್‌ಲೈನ್‌ ಕಾಮಗಾರಿ ಮಾಡದೆ ಇರುವುದಕ್ಕೆ ಕಳೆದ ಏಪ್ರಿಲ್‌ ತಿಂಗಳಿನಲ್ಲಿ 6.40 ಲಕ್ಷ ರೂ. ಹಣದಚೆಕ್‌ ಅನ್ನು ಬರೆದು ಅಂಗಡಿಗಳಿಗೆ ನೀಡಿ, ಅವರಿಂದಹಣ ಪಡೆದಿದ್ದಾರೆ. ಕಂಪ್ಯೂಟರ್‌ ರಿಪೇರಿಗಾಗಿ 65 ಸಾವಿರ ರೂ. ಚೆಕ್‌ ನೀಡಿದ್ದಾರೆ. ಅವರು ನೀಡಿರುವಹೆಸರಿಂದ ಸಂಸ್ಥೆ ತಾಲೂಕಿನಲ್ಲಿ ಇಲ್ಲ. ಅದರ ವಿಳಾಸಹುಡುಕಿದರೂ ದೊರೆಯುತ್ತಿಲ್ಲ. ಈ ರೀತಿ ಬೇನಾಮಿಸಂಸ್ಥೆಯ ಹೆಸರಿನಲ್ಲಿ ಚೆಕ್‌ ಬರೆದು ಅವರ ಮೂಲಕಹಣ ವಸೂಲಿ ದಂಧೆಯಲ್ಲಿ 8 ವರ್ಷದಿಂದ ತೊಡಗಿದ್ದಾರೆ ಎಂದು ಆಪಾದನೆ ಮಾಡಿದರು.

ಕಾಫಿ, ಟೀಗೆ 5 ಸಾವಿರ ರೂ.: ಅಧಿಕಾರಿಗಳು ಕಚೇರಿ ಭೇಟಿ ನೀಡಿದರೆ ಅವರಿಗೆ ಕಾಫಿ ಟೀಗಾಗಿ 5 ಸಾವಿರ ರೂ., ಊಟಕ್ಕಾಗಿ 26 ಸಾವಿರ ರೂ. ಎಂದು ಬರೆದು ಅದನ್ನು ಚೆಕ್‌ ಮೂಲಕ ಹೋಟೆಲ್‌ಗೆ ನೀಡಿದ್ದಾರೆ.ಬಡವರ ಮನೆಯ ಮದುವೆ ತಗುಲುವ ವೆಚ್ಚದಷ್ಟುಊಟವನ್ನು ಅಧಿಕಾರಿಗಳು ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಅನುಮಾನ ಜನರಲ್ಲಿ ಉಂಟಾಗಲಿದೆ: ಈ ಲೆಕ್ಕ ಗಮನಿಸಿ, ಸಂಬಂಧಪಟ್ಟ ಅಧಿಕಾರಿಗಳು, ಸರ್ಕಾರನೀಡುವ ಸಂಬಳಕ್ಕೆ ಕಿಂಚಿತ್ತು ಕಾಳಜಿ ಇದ್ದರೆಅಧಿಕಾರಿಗಳ ಊಟದ ಹೆಸರಿನಲ್ಲಿ ಹಣ ಲೂಟಿಮಾಡಿರುವ ಪಿಡಿಒ ಬಗ್ಗೆ ತನಿಖೆ ಮಾಡಿ ತಪ್ಪುಸಾಬೀತಾದ್ರೆ ಅತನನ್ನು ಜೈಲಿಗೆ ಕಳುಹಿಸುವ ಕೆಲಸಮಾಡಬೇಕು. ಇಲ್ಲದೆ ಹೋದರೆ ಅವರೂ ಇದರಲ್ಲಿ ಪಾಲುದಾರರಾಗಿದ್ದಾರೆ ಎಂಬ ಅನುಮಾನ ಜನರಲ್ಲಿ ಉಂಟಾಗಲಿದೆ ಎಂದು ಹೇಳಿದರು.

ಅನುದಾನ ಕಡಿತ: ಗ್ರಾಮದಲ್ಲಿ ಮತ ಪಡೆದು ಸದಸ್ಯರಾಗಿ ಆಯ್ಕೆಯಾಗಿರುವ ಜನಪ್ರತಿನಿಧಿಗಳು, ಅಧಿಕಾರಿ ಪ್ರಶ್ನೆ ಮಾಡಿದರೆ ಅವರಿಗೆ ಅನುದಾನ ಕಡಿತ ಮಾಡಲಾಗುತ್ತಿದೆ.ಯಾವ ಸದಸ್ಯ ಪಿಡಿಒಗಳು ಮಾಡುವ ಅಕ್ರಮಕ್ಕೆ ತಲೆ ತಗ್ಗಿಸುತ್ತಾನೆ. ಅವರಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ.ಸದಸ್ಯ ಪ್ರಶ್ನೆ ಮಾಡಿದರೆ ಶಾಸಕರ ಹೆಸರು ಹೇಳುವುದನ್ನು ನೋಡಿದರೆ, ಅವರು ಪಿಡಿಒಗಳ ಮೂಲಕ ಭ್ರಷ್ಟಾಚಾರ ಮಾಡಿಸುತ್ತಿದ್ದಾರೆ. ಈ ಬಗ್ಗೆ ಅವರೇ ಉತ್ತರ ನೀಡಿಲಿ ಎಂದು ಸವಾಲು ಹಾಕಿದರು.

ಸುದ್ದಿಗೋಷ್ಠಿಯಲ್ಲಿ ನುಗ್ಗೇಹಳ್ಳಿ ಗ್ರಾಪಂ ಸದಸ್ಯರಾದ ಗೌಡಾಕಿ ಮಂಜು, ಕಿರಣ್‌ ಕುಮಾರ್‌, ರಾಧಾ, ಸವಿತಾ, ರಮ್ಯಾ, ರೇಷ್ಮಾಭಾನು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.