ಹಾಸನ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 299ಕ್ಕೇರಿಕೆ
Team Udayavani, Jun 24, 2020, 7:18 AM IST
ಹಾಸನ: ಜಿಲ್ಲೆಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಸೇರಿ ಮಂಗಳವಾರ 7 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 299ಕ್ಕೆ ಏರಿದೆ.
ಆ ಪೈಕಿ ಚನ್ನರಾಯಪಟ್ಟಣ ತಾಲೂಕಿನ ಪಾಲು 200. ಪೊಲೀಸ್ ಪೇದೆಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಹಾಸನದ ಕೆ.ಆರ್. ಪುರಂ ಬಡಾವಣೆ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದ್ದು, ಪೊಲೀಸ್ ಠಾಣೆಗೆ ರಾಸಾಯನಿಕ ಸಿಂಪಡಿಸಲಾಗಿದೆ. ಸೋಂಕಿತ ಪೊಲೀಸ್ ಸಿಬ್ಬಂ ದಿಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗು ತ್ತಿದೆ. ಪೊಲೀಸ್ ಸಿಬ್ಬಂದಿ ಬೆಂಗಳೂರಿನ ತನ್ನ ಸಂಬಂಧಿಕರ ಗೃಹ ಪ್ರವೇಶಕ್ಕೆ ಹೋಗಿ ಬಂದ ನಂತರ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.
ಇನ್ನುಳಿದಂತೆ 5 ಮಂದಿಗೆ ಮುಂಬೈ ಪ್ರಯಾಣದ ಹಿನ್ನೆಲೆ ಇದ್ದರೆ ಮತ್ತೂಬ್ಬರಿಗೆ ಬೆಂಗಳೂರು ಪ್ರಯಾಣದ ಹಿನ್ನೆಲೆಯಿಂದ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಸೋಂಕಿತರೆಲ್ಲರೂ ಹಾಸನದ ಕೋವಿಡ್ 19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ 4 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ 215 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 83 ಮಂದಿಗೆ ಚಿಕಿತ್ಸೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್