ಲಕ್ಷಣಗಳಿಲ್ಲದ ಶೇ.70 ಜನರಲ್ಲಿ ಸೋಂಕು ಪತ್ತೆ

Team Udayavani, Sep 15, 2020, 1:57 PM IST

ಲಕ್ಷಣಗಳಿಲ್ಲದ ಶೇ.70 ಜನರಲ್ಲಿ ಸೋಂಕು ಪತ್ತೆ

ಹಾಸನ: ರೋಗ ಲಕ್ಷಣಗಳೇ ಇಲ್ಲದೆ ಶೇ.70 ಮಂದಿಗೆ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಜಿಲ್ಲಾಡಳಿತವು ಮನೆ-ಮನೆಗೆ ತೆರಳಿ ತಪಾಸಣೆ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಆರ್‌. ಗಿರೀಶ್‌ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಮನೆಗೆ ಭೇಟಿ ನೀಡಿ ರೋಗ ಲಕ್ಷಣಗಳಿಲ್ಲದಿರುವವರನ್ನೂ ತಪಾಸಣೆ ಮಾಡಲಿದ್ದು, ಸಹಕಾರ ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದರು.

ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದು ವಿಳಂಬವಾದರೆ ಅವರಿಂದ ಇನ್ನಷ್ಟು ಮಂದಿಗೆ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಎಲ್ಲರನ್ನೂ ತಪಾಸಣೆ ಮಾಡಲಾಗುವುದು. ವೃದ್ಧರು, ರಕ್ತದೊತ್ತಡ, ಮಧುಮೇಹ, ಹೃದ್ರೋಗ ಮತ್ತಿತರರಿಗೆ ಕೋವಿಡ್ ಬಹುಬೇಗ ಹರಡುತ್ತದೆ. ಇಂತಹವರು ಲಕ್ಷಣಗಳಿಲ್ಲದಿದ್ದರೂ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಸಾವಿನ ಪ್ರಮಾಣ ಹೆಚ್ಚಳ: ಕೋವಿಡ್ ಲಕ್ಷಣ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯದೆ ಉದಾಸೀನ ಮಾಡಿದರೆ, ರೋಗ ಉಲ್ಬಣಿಸಿ ಚಿಕಿತ್ಸೆ ಫ‌ಲಿಸದೆ ಸಾವೀಗಿಡಾಗುತ್ತಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಲಕ್ಷಣಗಳಿಲ್ಲದಿರುವವರನ್ನೂ ತಪಾಸಣೆಗೊಳಪಡಿಸಲು ತೀರ್ಮಾನಿಸಲಾಗಿದೆ.ಜಿಲ್ಲೆಯಲ್ಲಿ ಈಗ ಸಾವಿನ ಪ್ರಮಾಣ ಶೇ.1.5 ರಷ್ಟಿದೆ.  ಅದನ್ನು ಶೇ.1ಕ್ಕೆ ಇಳಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಗುಣಮುಖರ ಪ್ರಮಾಣ ಶೇ.75 ರಷ್ಟಿದೆ ಎಂದು ಹೇಳಿದರು.

35 ಸಾವಿರ ಜನರ ಪರೀಕ್ಷೆ: ಗ್ರಾಮೀಣ ಪ್ರದೇಶದಲ್ಲಿ ಯಾವ ದಿನ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆಗೆ ಭೇಟಿ ನೀಡುವರು ಎಂಬುದನ್ನು ಮುಂಚಿತವಾಗಿ ತಿಳಿಸಲಿದ್ದಾರೆ. ಜಿಲ್ಲೆಯಲ್ಲಿ ಒಬ್ಬ ಸೋಂಕಿನ ಪ್ರಾಥಮಿಕ ಸಂಪರ್ಕಿತರು 11 ಮಂದಿ ಎಂದು ಪರಿಗಣಿಸಲಾಗಿದ್ದು, ಜಿಲ್ಲೆಯಲ್ಲಿ ಅನುಪಾತದಂತೆ 37 ಸಾವಿರ ಪ್ರಾಥಮಿಕ ಸಂಪರ್ಕಿತರಿದ್ದು, ಅವರಲ್ಲಿ 35 ಸಾವಿರ ಜನರ ಪರೀಕ್ಷೆ ಮಾಡಲಾಗಿದೆ ಎಂದು ವಿವರ ನೀಡಿದರು.

8.30 ಲಕ್ಷ ರೂ.ದಂಡ ವಸೂಲಿ: ಕೋವಿಡ್ ಹರಡು ವುದನ್ನು ನಿಯಂತ್ರಿಸಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ಉಲ್ಲಂ ಸುವವರಿಗೆ ದಂಡ ವಿಧಿಸಲಾ ಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ 8.30 ಲಕ್ಷ ರೂ. ದಂಡ ವಿಧಿಸಲಾಗಿದೆ. ಪ್ರತಿದಿನ 2500 ಜನರ ಪರೀಕ್ಷೆ: ಜಿಲ್ಲೆಯಲ್ಲಿ ಕಳೆದ ವಾರದವರೆಗೆ ಪ್ರತಿದಿನ 1800 ಜನರ ಪರೀಕ್ಷೆ ನಡೆಸ ಲಾಗುತ್ತಿತ್ತು. ಈಗ ಆ ಗುರಿಯನ್ನು 2500ಕ್ಕೆ ವಿಸ್ತರಿಸಲಾಗಿದೆ.ಕನಿಷ್ಠ2500 ಜನರ ಪರೀಕ್ಷೆ ಮಾಡಲೇಬೇಕು ಎಂಬ ಗುರಿ ನಿಗದಿಪಡಿಸಲಾಗಿದೆ. ಲಾಕ್‌ಡೌನ್‌ ತೆರ ವಾದ ನಂತರ ಜನ ಜೀವನ ಸಹಜ ಸ್ಥಿತಿಗೆ ಬಂದಿದ್ದು, ಜನರು ಕೋವಿಡ್ ಇರುವುದನ್ನೇ ಮರೆತಂತೆ ವ್ಯವ ಹರಿಸುತ್ತಿದ್ದಾರೆ. ಹಾಗಾಗಿಯೇ ಸೋಂಕು ಹೆಚ್ಚುತ್ತಿದೆ. ರೋಗ ನಿಯಂತ್ರಿಸಬೇಕಾದರೆ ಮಾಸ್ಕ್ ಧರಿಸುವುದು, ಸಾಮಾಜಿಕ ಆಂತರ ಕಾಯ್ದುಕೊಳ್ಳುವುದು, ರೋಗ ಲಕ್ಷಣಗಳಿದ್ದರೆ ಪರೀಕ್ಷೆಗೊಳಪಟ್ಟು ಪಾಸಿಟಿವ್‌ ಬಂದರೆ ತಕ್ಷಣ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.