ನನ್ನ ಮನೆಗೆ ಐಟಿ ದಾಳಿಯಾದರೆ ಈ ವ್ಯಕ್ತಿಯ ದಾಖಲೆಗಳು ಸಿಗುತ್ತದೆ: ಕುಮಾರಸ್ವಾಮಿ

Team Udayavani, Oct 22, 2019, 11:08 AM IST

ಹಾಸನ: ನನ್ನ ಮನೆಗೆ ಐಟಿಯವರು ಬಂದ್ರೆ ನನ್ನ ಮನೆಯಲ್ಲಿ ಇರುವುದು ಯಡಿಯೂರಪ್ಪ ಅವರ ದಾಖಲೆಗಳೇ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಹಾಸನಾಂಬೆಯ ದರ್ಶನಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.  ನಾನು ಸಿಎಂ ಆಗಿ ಲೂಟಿ ಮಾಡಿಲ್ಲ, ಜನಗಳ ಆಸ್ತಿ ಸಂಪಾದನೆ ಮಾಡಿದ್ದೇನೆ. ದೇವೇಗೌಡರಿಗೆ ರಾಜ್ಯ ಬಿಡಿ ಎಂದು ನಾನೇ ಹೇಳುತ್ತೇನೆ. ಅವರು ಸೋತಿರಬಹುದು, ಆದರೆ ಅವರು ದೇಶದಲ್ಲಿ ಇರಬೇಕು. ಅವರಿಗೆ ಅಧಿಕಾರ ಬೇಡ,ಆದರೆ ಮತ್ತೊಂದು ಕ್ರಾಂತಿಯಾಗಬೇಕು. ಇಲ್ಲವಾದ್ರೆ ದೇಶ ಹಾಳಾಗಲಿದೆ, ಈಗಾಗಲೇ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಾದರೂ ನೇತೃತ್ವ ವಹಿಸಿಕೊಳ್ಳದೇ ಇದ್ದರೆ ದೇಶಕ್ಕೆ ಕಷ್ಟಕಾಲ ಬರಲಿದೆ ಎಂದರು.

ದೇವೇಗೌಡರು ಹಾಸನದಿಂದಲೇ ಲೋಕಸಭಾ ಚುನಾವಣೆಗೆ ನಿಲ್ಲಬೇಕಿತ್ತು. ಲೋಕಸಭೆಯಲ್ಲಿ ಗೌಡರು ಇರಬೇಕಿತ್ತು ಎಂದು ಪಶ್ವತ್ತಾಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾವು ಹೆದರಿ ಕೂರೋದಿಲ್ಲ, ರಾಜ್ಯ, ದೇಶದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ದನಿ ಎತ್ತಬೇಕಿದೆ. ಚುನಾವಣಾ ಫಲಿತಾಂಶಕ್ಕೂ ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಸಂಬಂಧ ಇಲ್ಲ. ದೇಶದಲ್ಲಿ ಬದಲಾವಣೆಗೆ ಒಂದು ವೇದಿಕೆ ಬೇಕು. ಸತ್ಯಸಂಗತಿಗಳನ್ನು ಧೈರ್ಯವಾಗಿ ಹೇಳಬೇಕಿದೆ ಎಂದರು.

ಉಪಚುನಾವಣೆಯ ಬಗ್ಗೆ ಮಾತನಾಡಿದ ಮಾಜಿ ಸಿಎಂ, 15 ಕ್ಷೇತ್ರಗಳ ಉಪ ಚುನಾವಣೆ ಗಂಭೀರವಾಗಿ ಎದುರಿಸುತ್ತೇವೆ. ಯಾವುದೇ ಮೈತ್ರಿ ಇಲ್ಲ. ಎಲ್ಲೆಡೆ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ