ಕಬ್ಬಳಿ ಬಸವೇಶ್ವರಸ್ವಾಮಿ ಜಾತ್ರಾ ಉತ್ಸವಕ್ಕೆ ಚಾಲನೆ

Team Udayavani, Nov 6, 2022, 5:07 PM IST

ಕಬ್ಬಳಿ ಬಸವೇಶ್ವರಸ್ವಾಮಿ ಜಾತ್ರಾ ಉತ್ಸವಕ್ಕೆ ಚಾಲನೆ

ಚನ್ನರಾಯಪಟ್ಟಣ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಬ್ಬಳಿ ಬಸವೇಶ್ವರಸ್ವಾಮಿ ಯ 91ನೇ ಬೃಹತ್‌ ದನಗಳ ಜಾತ್ರಾ ಮಹೋತ್ಸವಕ್ಕೆ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಧರ್ಮ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿದರು.

ಜಾತ್ರಾ ಮಹೋತ್ಸವದ ಹಿನ್ನೆಲೆ ಕಬ್ಬಳಿ ಗ್ರಾಮದ ಬಸವೇಶ್ವರ ಸ್ವಾಮಿ ಮೆರೆವ ವಿಗ್ರಹ ದೇಗುಲಕ್ಕೆ ಹೂವಿನ ಚಪ್ಪರ ಹಾಕಲಾಗಿದ್ದು, ಬಾಳೆಕಂದು, ತಳಿರು- ತೋರಣ ಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆ 7 ಗಂಟೆಯಲ್ಲಿ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಚುಂಚಶ್ರೀ ಗಳನ್ನು ಭಕ್ತರು ಪಾದಪೂಜೆ ಮಾಡಿ ಸ್ವಾಗತಿಸಿದರು.

ಅಡ್ಡಪಲ್ಲಕ್ಕಿ ಮೆರವಣಿಗೆ: ಮೆರೆವ ವಿಗ್ರಹ ದೇಗು ಲದ ಗರ್ಭಗುಡಿಯಲ್ಲಿ ವಿವಿಧ ಬಗೆಯ ಪುಷ್ಪ ಹಾಗೂ ಒಡವೆ-ವಸ್ತ್ರಗಳಿಂದ ಸಿಂಗರಿಸಲಾಗಿದ್ದು, ಬಸವೇಶ್ವರಸ್ವಾಮಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಸಾನ್ನಿಧ್ಯದಲ್ಲಿ ಗ್ರಾಮದ ಮಧ್ಯದಲ್ಲಿರುವ ಉತ್ಸವ ಮೂರ್ತಿ ದೇಗುಲದಿಂದ ಬಸವೇಶ್ವರಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವ ಮಂಗಳವಾದ್ಯದೊಂದಿಗೆ ಆರಂಭ ಗೊಂಡು ಗ್ರಾಮದ ರಾಜಬೀದಿಯಲ್ಲಿ ವೈಭವದಿಂದ ಸಾಗಿತು.

ಅಲ್ಲಿಂದ ಬೋರೆ ಮೇಲಿನ ಶ್ರೀ ಕ್ಷೇತ್ರದ ಮೂಲ ಸನ್ನಿಧಿಗೆ ಆಗಮಿಸಿತು. ಧರ್ಮ ಧ್ವಜಾರೋಹಣ: ಶ್ರೀಕ್ಷೇತ್ರದ ಆವರಣ ದಲ್ಲಿ ಶ್ರೀಗಳು ಧರ್ಮ ಧ್ವಜಾರೋಹಣ ನೆರವೇರಿಸಿ ಸನ್ನಿಧಿಯಲ್ಲಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ದರು, ದೇವಾಲದಯ ಮುಂಭಾಗದಲ್ಲಿ ಕಲ್ಯಾಣಿ ಯಲ್ಲಿ ಗಂಗಾಪೂಜೆ ನೆರವೇರಿಸಿದ ಮೇಲೆ, ದೇವಾ ಲಯದ ಆವರಣದಲ್ಲಿ ಗೋವಿನ ಪೂಜೆ ಮಾಡಲಾಯಿತು.

ವಿವಿಧ ಪೂಜೆ: ಬಸವೇಶ್ವರ ಮೂಲ ವಿಗ್ರಹ ಹಾಗೂ ಗರ್ಭಗುಡಿಯ ಹಿಂಭಾಗದಲ್ಲಿನ ವಿಗ್ರಹಕ್ಕೆ ಜಲಾಭಿಷೆಕ, ಪಂಚಾಮೃತ ಅಭಿಷೇಕ, ರುದ್ರಾಭಿ ಷೇಕ, ಪುಷ್ಪಾರ್ಚನೆ, ಅರಿಶಿನ ಕುಂಕು ಮಾರ್ಚನೆ ಯನ್ನು ನಿರ್ಮಲಾನಂದನಾಥ ಶ್ರೀಗಳು ನೆರೆವೇರಿಸಿದರು.

ಪೂಜೆಯನ್ನು ನೆರವೇರಿಸಿ ಮಹಾ ಮಂಗ ಳಾರಿ ಮಾಡಿ ಭಕ್ತರಿಗೆ ತೀರ್ಥ ನೀಡಿದರು. ಈ ವೇಳೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ವಟು ಗಳಿಂದ ಮಂತ್ರಪಠನೆ ನೆರವೇರಿತು. ಹಾಸನ ಶಾಖಾಮಠದ ಶಂಭುನಾಥಸ್ವಾಮೀಜಿ, ಶ್ರೀಕ್ಷೇತ್ರ ಕಬ್ಬಳಿ ಮಠದ ಶಿವ ಪುತ್ರ ಸ್ವಾಮೀಜಿ, ಶಾಸಕ ಸಿ.ಎನ್‌.ಬಾಲಕೃಷ್ಣ, ತಾಪಂ ಮಾಜಿ ಸದಸ್ಯ ರಾದ ಎಂ.ಆರ್‌. ವಾಸು, ಪುಟ್ಟರಾಜು, ಪ್ರಮೀಳಾ ಪ್ರಕಾಶ್‌, ಕಬ್ಬಳಿ ಹಾಗೂ ಸುತ್ತಮುತ್ತಲ ಗ್ರಾಮದ ಭಕ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.