ಕೆಂಪೇಗೌಡರ ದೂರದೃಷ್ಟಿ ಮಾರ್ಗದರ್ಶನ: ಶಾಸಕ

Team Udayavani, Jun 28, 2019, 8:07 AM IST

HASAN-TDY-1…

ಹಾಸನ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಗೆ ಶಾಸಕ ಪ್ರೀತಂ ಜೆ.ಗೌಡ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಅಕ್ರಂಪಾಷಾ ಉಪಸ್ಥಿತರಿದ್ದರು.

ಹಾಸನ: ಶತಮಾನಗಳ ಹಿಂದೆಯೇ ಪರಿಸರ ಉಳಿಸುವ ನಿಟ್ಟಿನಲ್ಲಿ ಕೆರೆಗಳನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡ ಅವರು ನಾಡಿಗೆ ಬಹುಮುಖ್ಯ ಕೊಡುಗೆ ನೀಡಿದ್ದಾರೆ. ಕೆಂಪೇಗೌಡರ ಆದರ್ಶಗಳನ್ನು ಇಂದಿನ ಆಡಳಿತಗಾರರು ಮೈಗೂಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಪ್ರೀತಂ ಜೆ.ಗೌಡ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಲಾಭವನದಲ್ಲಿ ಆಯೋಜಿಸಿದ್ದ ನಾಡ ಪ್ರಭು ಕೆಂಪೇಗೌಡ ಜಯಂತಿಯ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನೀಕರಣ, ನಗರೀಕರಣಕ್ಕೆ ಮಾರು ಹೋಗಿ ಕೆಂಪೇಗೌಡರ ಕಲ್ಪನೆಯನ್ನು ಅಳಿಸುವ ನಿಟ್ಟಿನಲ್ಲಿ ಮನುಷ್ಯ ಪರಿಸರ ನಾಶಕ್ಕೆ ಮುಂದಾಗುತ್ತಿದ್ದಾನೆ ಎಂದರು.

ಕೆರೆಗಳ ಪುನಶ್ಚೇತನ: ಶತ ಮಾನಗಳ ಹಿಂದೆ ಅನೇಕ ಕೆರೆಗಳನ್ನು ಪುನಶ್ಚೇತನ ಗೊಳಿಸುವ ಮೂಲಕ ಪರಿಸರ ಉಳಿಸುವ ನಿಟ್ಟಿನಲ್ಲಿ ನಾಡಪ್ರಭು ಕೆಂಪೇಗೌಡರು ಶ್ರಮಿಸಿದ್ದರು. ಕೆಂಪೆಧೀ ಗೌಡರ ಜಯಂತಿಯು ಕೇವಲ ಆಚರಣೆಯಾಗಬಾರದು. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಪರಿಸರ ಮುಖೀ ಹಾಗೂ ಸಮಾಜಮುಖೀ ಕೆಲಸಗಳನ್ನು ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.

ಬೆಂಗಳೂರಿನ ನಿರ್ಮಾತೃ: ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಮಾತನಾಡಿ, ನವೀನ ಮಾದರಿಯಲ್ಲಿ ಬೆಂಗಳೂರನ್ನು ನಿರ್ಮಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ. ಕೆಂಪೇಗೌಡರು ಕೆರೆ, ಕಲ್ಯಾಣಿ ಸೇರಿದಂತೆ ಅನೇಕ ಜಲ ಮೂಲಗಳನ್ನು ಉಳಿಸುವ ಮೂಲಕ ನಾಡಿಗೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಯೋಜನಾಬದ್ಧ ನಗರ ನಿರ್ಮಾಣ: ಜಿಲ್ಲಾಧಿಕಾರಿ ಅಕ್ರಂಪಾಷಾ ಮಾತನಾಡಿ, ಕೆಂಪೇಗೌಡರು ಶತಮಾನಗಳ ಹಿಂದೆಯೇ ಬೆಂಗಳೂರನ್ನು ಯೋಜನಾಬದ್ಧವಾಗಿ ನಿರ್ಮಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಬಣ್ಣಿಸಿದರು.

ನಾಡ ಪ್ರಭು ಕೆಂಪೇಗೌಡ ಅವರ ಜೀವನ ವೃತ್ತಾಂತದ ಬಗ್ಗೆ ವಿಶೇಷ ಉಪನ್ಯಾಸ ನೀಡಿದ ಮೈಸೂರು ವಿಶ್ವ ವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಮಳಲಿ ವಸಂತ್‌ ಕುಮಾರ್‌ ಅವರು, ಕೆಂಪೇಗೌಡರ ಪೂರ್ವಿಕ ರಣಭೈರೇಗೌಡ ಕಂಚಿಯವರು. ಆಗ ಕಂಚಿಯೂ ಕನ್ನಡ ನಾಡಾಗಿತ್ತು. ಚೋಳರ ಆಳ್ವಿಕೆಯಿಂದ ಬೇಸತ್ತು ಅಲ್ಲಿಂದ ಬೆಂಗಳೂರಿಗೆ ಬಂದು ಯಲಹಂಕದಲ್ಲಿ ನೆಲಸಿದ ರಣಭೈರೇಗೌಡರ ಪುತ್ರಲ್ಲೊಬ್ಬರಾದ ಕೆಂಪನಂಜೇಗೌಡ ಅವರ ಮಗ ಕೆಂಪೇಗೌಡ ಎಂದು ತಿಳಿಸಿದರು.

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ್‌ಗೌಡ ಅವರು ಕೆಂಪೇ ಗೌಡರ ಕುರಿತು ಮಾತನಾಡಿದರು. ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ,ಅಪರ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ, ಜಿಲ್ಲಾ ಕಸಾಪ ಅಧ್ಯಕ್ಷ ಮಂಜೇಗೌಡ, ಹಾಸನ ತಾಲೂಕು ಪಂಚಾಯಿತಿ ಅಧ್ಯಕ್ಷ ನಿಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶಿವಲಿಂಗಪ್ಪ ಎನ್‌. ಕುಂಬಾರ, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ಅವರು ನಾಡಪ್ರಭು ಕೆಂಪೇಗೌಡರ ಕುರಿತ ಪುಸ್ತಕ ಬಿಡುಗಡೆ ಮಾಡಿ ದರು. ಹಾಸನ ಜಿಲ್ಲಾ ನಾಡ ಪ್ರಭು ಕೆಂಪೇಗೌಡ ರಂಗಭೂಮಿ ಕಲಾವಿದರಿಂದ ಪ್ರದರ್ಶಿತವಾದ‌ ಪಾಂಡವರ ಸಂಗ್ರಾಮ ಎಂಬ ಪೌರಾಣಿಕ ನಾಟಕ ಪ್ರೇಕ್ಷಕರ ಮನ ರಂಜಿಸಿತು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.