ವಿಜೃಂಭಣೆಯ ಲಕ್ಷ್ಮೀ ನರಸಿಂಹಸ್ವಾಮಿ ರಥೋತ್ಸವ

Team Udayavani, Mar 10, 2020, 3:00 AM IST

ijrunmbahne

ಹೊಳೆನರಸೀಪುರ: ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಮಹಾರಥೋತ್ಸವ ಸಾವಿರಾರು ಭಕ್ತರ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಏಳುಗಂಟೆಗೆ ಮೀನ ಲಗ್ನದಲ್ಲಿ ಲಕ್ಷ್ಮೀ ನರಸಿಂಗಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸೋಮವಾರ ಬೆಳಗ್ಗೆ 7.30 ರಿಂದ 9ರವರೆಗೆ ರಾಹುಕಾಲವಿದ್ದ ಪ್ರಯುಕ್ತ 9.30 ಕ್ಕೆ ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚನ್ನಮ್ಮ, ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ ಮತ್ತು ಡಾ.ಸೂರಜ್‌ ರೇವಣ್ಣ ದಂಪತಿ ರಥಕ್ಕೆ ಚಾಲನೆ ನೀಡಿದರು.

ವಿಶೇಷ ಪೂಜೆ: ಸೋಮವಾರ ಬೆಳಗ್ಗೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ, ರೇವಣ್ಣ ದಂಪತಿ ಹಾಗು ಕುಟುಂಬ ಬೆಳಗಿನಿಂದಲೇ ದೇವಾಲಯದಲ್ಲಿ ನಡೆದ ಪೂಜೆಯಲ್ಲಿ ಭಾಗಿಯಾಗಿದ್ದರು. ಬೆಳಗ್ಗೆ ರಾಹು ಕಾಲ ಮುಗಿಯುತ್ತಿದ್ದಂತೆ ರಥಕ್ಕೆ ಚಾಲನೆ ದೊರೆಯಿತು. ರಥವನ್ನು ರಾಜಬೀದಿಗಳಲ್ಲಿ ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಎಳೆಯುವ ಮೂಲಕ ಯಶಸ್ಸಿನಡೆಗೆ ರಥವನ್ನು ಕರೆತರಲಾಯಿತು.

ಕುಟುಂಬಕ್ಕೆ ಶ್ರೀರಕ್ಷೆ: ಬೆಳಗ್ಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಮತ್ತು ತಮ್ಮ ಕುಟುಂಬ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಭಕ್ತರಾಗಿದ್ದು, ನಮ್ಮಕುಟುಂಬದ ಏಳಿಗೆಗೆ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ಆರ್ಶಿವಾದವೇ ಕಾರಣ ಎಂದು ತಿಳಿಸಿದರು. ರಥೋತ್ಸವದಲ್ಲಿ ಜಿಲ್ಲಾ ಧಿಕಾರಿ ಗಿರೀಶ್‌, ತಹಶೀಲ್ದಾರ್‌ ಕೆ.ಆರ್‌. ಶ್ರೀನಿವಾಸ್‌ ಸೇರಿದಂತೆ ತಾಲೂಕಿನ ಜನಪ್ರತಿನಿ ಗಳು ಹಾಗೂ ಸಾವಿರಾರು ಭಕ್ತಾ ಗಳು ಪಾಲ್ಗೊಂಡಿದ್ದರು.

ರಥದ ಚಕ್ರ ಬಡಿದು ಗಾಯ: ರಥವನ್ನು ಮರಳಿ ದೇವಾಲಯಕ್ಕೆ ಎಳೆದು ತರುವಾಗ ರಥದ ಚಕ್ರಕ್ಕೆ ನೀಡುತ್ತಿದ್ದ ಗೊದಮ ಸ್ಕಿಡ್‌ ಆಗಿದ್ದರಿಂದ ಗೊದಮ ಹಿಡಿದಿದ್ದ ಯುವ ವಕೀಲ ಎ.ಶ್ರೀಧರ್‌ ಅವರ ಬಲಭಾಗದ ಎದೆಗೂಡಿಗೆ ಅಪ್ಪಳಿಸಿದ್ದರಿಂದ ಶ್ರೀಧರ್‌ ಅವರು ರಥದ ಚಕ್ರದ ನಡುವೆ ಸಿಲುಕಿದರು. ಸ್ಥಳದಲ್ಲೇ ಇದ್ದ ಕ್ರೇನ್‌ ತಕ್ಷಣ ರಥವನ್ನು ಹಿಂದಕ್ಕೆ ಎಳೆದ ಪರಿಣಾಮ ಯಾವುದೇ ಜೀವ ಹಾನಿಯಾಗಿಲ್ಲ.

ಎದೆ ಮೂಳೆಗೆ ರಥದ ಚಕ್ರ ಅಪ್ಪಳಿಸಿದ್ದರಿಂದ ಶ್ರೀಧರ್‌ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಆ್ಯಂಬುಲೆನ್ಸ್‌ನಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಮೈಸೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಶ್ರೀಧರ್‌ ಅವರನ್ನು ತಪಾಸಣೆ ಮಾಡಿ ಎದೆ ಗೂಡಿನ ಬಲ ಭಾಗದ ಪಕ್ಕೆಲುಬುಗಳಿಗೆ ಹಾನಿಯಾಗಿದ್ದು, ಪ್ರಾಣಾಪಾಯವಿಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.