ಜಮೀನು ವಿವಾದ: 2 ಗುಂಪುಗಳ ನಡುವೆ ಬಡಿದಾಟ

Team Udayavani, May 12, 2019, 10:01 AM IST

HASAN-TDY-4..

ಜಮೀನಿಗೆ ವಿವಾದದಿಂದ ಹಲ್ಲೆಗೊಳಗಾದ ಗಾಯಾಳುವನ್ನು ಹಾಸನ ಆಸ್ಪತ್ರೆಗೆ ಕಳುಹಿಸಲಾಯಿತು.

ಬೇಲೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ತಾಲೂಕು ಪಂಚಾಯಿತಿ ಕಚೇರಿಯಲ್ಲಿರುವ ಶಾಸಕ ಲಿಂಗೇಶ್‌ ಅವರ ಕಚೇರಿ ಮುಂದೆ ಬಡಿದಾಡಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕಳುಸಲಾಗಿದೆ.

ತಾಲೂಕಿನ ರಾಯಾಪುರ ಗ್ರಾಮದವರಾದ ಎಪಿಎಂಸಿ ಸದಸ್ಯ ನಾಗರಾಜು ಹಾಗೂ ಅದೇ ಗ್ರಾಮದ ವಸಂತ್‌ ಎಂಬುವವರೆ ಜಮೀನು ವಿವಾದದಲ್ಲಿ ಗಾಯ ಗೊಂಡಿದ್ದಾರೆ.

ಜಮೀನು ವಿವಾದ: ಬೇಲೂರಿನ ಯಗಚಿ ಜಲಾಶ ಯದಿಂದ ಹಾದು ಹೋಗಿರುವ ಎಡದಂಡೆ ನಾಲೆ ಗಾಗಿ ರಾಯಾಪುರ ಗ್ರಾಮದ ಕೆಲವರ ಜಮೀನನ್ನು ಭೂಸ್ವಾದೀನ ಪಡಿಸಿಕೊಳ್ಳಲಾಗಿದೆ. ಅಲ್ಲದೇ ನಾಲೆ ಪಕ್ಕದಲ್ಲಿರುವ ಜಾಗದ ಸುತ್ತಲೂ ತಂತಿ ಬೇಲಿ ಹಾಕಲಾಗಿದೆ. ಆದರೆ ರಾಯಾಪುರ ಗ್ರಾಮಸ್ಥರು ಓಡಾಡುವುದಕ್ಕೆಂದು 10 ಅಡಿಯಷ್ಟು ಜಾಗವನ್ನು ತಂತಿ ಬೇಲಿ ಹಾಕದೇ ಬಿಡಲಾಗಿದೆ. ಈ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಾಕಷ್ಟು ದಿನಗಳಿಂದ ವ್ಯಾಜ್ಯ ನಡೆಯುತಿತ್ತು.

ಶಾಸಕರ ಎದುರೇ ವಾಗ್ವಾದ: ಆದರೆ ಈ ವಿಷಯವು ತಾರಕಕ್ಕೇರದಂತೆ ಶಾಸಕರ ಸಮ್ಮುಖ ದಲ್ಲಿ ತೀರ್ಮಾನಿಸುವುದಕ್ಕಾಗಿ ತಾಪಂ ಕಚೇರಿ ಯಲ್ಲಿನ ಶಾಸಕರ ಕೊಠಡಿಗೆ ಎರಡು ಕಡೆಯ ವರನ್ನು ಕರೆದು ಚರ್ಚಿಸುತಿದ್ದರು. ಈ ಸಂದರ್ಭ ದಲ್ಲಿ ಎರಡು ಕಡೆಯವರು ಶಾಸಕರ ಎದುರಿನಲ್ಲಿ ಮನಸ್ಸಿಗೆ ಬಂದಂತೆ ಒಬ್ಬರಿಗೊಬ್ಬರು ಬೈದಾಡುತಿ ದ್ದರು. ಇದನ್ನು ಗಮನಿಸಿದ ಶಾಸಕರು ಶಾಂತಿ ಯಿಂದ ಕುಳಿತು ತೀರ್ಮಾನ ಮಾಡಿಕೊಳ್ಳಿ ಎಂದು ಎರಡು ಕಡೆಯವರನ್ನು ಕಚೇರಿಯಿಂದ ಹೊರಕ್ಕೆ ಕಳುಹಿಸಿದ್ದಾರೆ. ಆದರೆ ಎರಡೂ ಕಡೆಯವರು ಕಚೇರಿಯಿಂದ ಹೊರಗೆ ಬರುತಿದ್ದಂತೆ ಒಬ್ಬರಿ ಗೊಬ್ಬರು ಕೈ ಕೈ ಮಿಲಾಯಿಸಿದ್ದರಂದ ಎರಡು ಕಡೆಯವರು ಗಾಯಗೊಂಡರು.

ಈ ಸಂದರ್ಭ ಶಾಸಕರು ಮಧ್ಯಪ್ರವೇಶಿಸಿ ಸಮಾ ಧಾನಗೊಳಿಸಿ ಆಸ್ಪತ್ರೆಗೆ ಹೋಗುವಂತೆ ಕಳುಹಿಸಿ ದರು. ಆದರೆ ಆಸ್ಪತ್ರೆಗೆ ಸಮೀಪ ಎರಡು ಕಡೆ ಯವರು ಮತ್ತೆ ಮಾತಿಗೆ ಮಾತು ಬೆಳೆಸಿ ಹೊಡೆ ದಾಡುವುದಕ್ಕೆ ಮುಂದಾಗುತ್ತಿದ್ದರು. ಅಷ್ಟರಲ್ಲಿ ಸ್ಥಳಗ್ಕಾಮಿಸಿದ ಪೊಲೀಸರು ಅಲ್ಲಿದ್ದವರನ್ನು ಚದು ರಿಸಿ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದರು. ನಂತರ ಇಬ್ಬರೂ ಗಾಯಾಳುಗೂ ಚಿಕಿತ್ಸೆ ನೀಡದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕಳುಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಬೇಲೂರು ಪೊಲೀಸ್‌ ಠಾಣೆಯಲ್ಲಿ ಎರಡು ಕಡೆಯವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

ಶಾಸಕ ಕೆ.ಎಸ್‌.ಲಿಂಗೇಶ್‌ ಮಾತನಾಡಿ, ಜಮೀನಿನ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ರಾಯಾಪುರ ಗ್ರಾಮದವರು ಗಲಾಟೆ ಮಾಡಿಕೊಂಡಿರುವ ವಿಷಯ ಗಮನಕ್ಕೆ ಬಂತು. ಹಾಗೂ ಎರಡು ಕಡೆಯವರನ್ನು ನನ್ನ ಕಚೇರಿಗೆ ಕರೆಸಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವುದಕ್ಕೆ ಮಾತುಕತೆ ನಡೆಸುತಿದ್ದೆವು.

ಆದರೆ ಇಬ್ಬರೂ ಮಾತಿಗೆ ಮಾತು ಬೆಳೆಸಿದ್ದರಿಂದ ಮುಂದೊಂದು ದಿನ ತೀರ್ಮಾನಿಸೋಣ ಎಂದು ಕಳುಹಿಸಿದ್ದೆ. ಆದರೆ ಇವರು ಕೆಳಕ್ಕೆ ಹೋಗುತ್ತಿದ್ದಂತೆ ಗಲಾಟೆ ಮಾಡಿ ಕೊಳ್ಳುತ್ತಿದ್ದರು. ಇಬ್ಬರನ್ನೂ ಸಮಾಧಾನಪಡಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.