ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ: ಘನ ವಾಹನಗಳ ಸಂಚಾರ ಬಂದ್
Team Udayavani, Jul 14, 2022, 12:30 PM IST
ಸಕಲೇಶಪುರ: ಶಿರಾಢಿಘಾಟ್ನಲ್ಲಿ ಮತ್ತೆ ಭೂಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ತಿಳಿಸಿದ್ದಾರೆ.
ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿತ್ತು. ರಸ್ತೆ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಪರಿಶೀಲನೆ ನಡೆಸಿದ್ದರು. ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತವಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ.
ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು.ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತವಾಗಿದ್ದು, ಈ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಲಘು ವಾಹನಗಳನ್ನು ಏಕ ಮುಖ ಸಂಚಾರದಂತೆ ಚಲಿಸಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ.
ಇದನ್ನೂ ಓದಿ: ಮಂಗಳೂರು: ಗಾಂಜಾ ವ್ಯಸನ ಮಾಡುತ್ತಿದ್ದ 7 ವಿದ್ಯಾರ್ಥಿಗಳ ಬಂಧನ
ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಕುಸಿಯುತ್ತಿರುವ ರಸ್ತೆಯಿಂದ ಆತಂಕ ಹೆಚ್ಚಿದ್ದು ಗುತ್ತಿಗೆದಾರರ ಕಳಪೆ ಕಾಮಗಾರಿ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯ ದಿಂದ ಈ ರೀತಿಯ ಘಟನೆ ಉಂಟಾಗಲು ಕಾರಣವಾಗಿದೆ ಎಂದು ಶಾಸಕ ಎಚ್.ಕೆ ಕುಮಾರಸ್ವಾಮಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ