ಸಾಲಮನ್ನಾ, ಬೆಳೆ ವಿಮೆ ಅರ್ಹ ರೈತರಿಗೆ ತಲುಪಲಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲಮನ್ನಾ ಅವ್ಯವಹಾರ ತನಿಖೆಯಾಗಲಿ: ಜಿಪಂ ಅಧ್ಯಕ್ಷೆ ಸೂಚನೆ

Team Udayavani, Jul 24, 2019, 1:14 PM IST

hasan-tdy-2

ಹಾಸನ ಜಿಪಂ ಹೊಯ್ಸಳ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಜಿಪಂ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಮಾತನಾಡಿದರು. ಜಿಪಂ ಪ್ರಭಾರ ಸಿಇಒ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

ಹಾಸನ: ಜಿಲ್ಲೆಯ ಎಲ್ಲಾ ಅರ್ಹ ಫ‌ಲಾನುಭವಿ ರೈತರಿಗೆ ಸಾಲಮನ್ನಾ ಸೌಲಭ್ಯ, ಬರ ಪರಿಹಾರ ಹಾಗೂ ಬೆಳೆ ವಿಮೆ ಸವಲತ್ತುಗಳು ಸಿಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೊನ್ಮುಖರಾಗಬೇಕು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅರ್ಹ 1.25 ಲಕ್ಷ ರೈತರಿಗೆ ಸಾಲಮನ್ನಾ ಸೌಲಭ್ಯ ದೊರೆಯಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಮನ್ನಾ ಮತ್ತು ಹೊಸ ಕೃಷಿ ಸಾಲ ವಿತರಣೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬರದಿಂದ ಕಂಗಾಲಾದ ರೈತರು: ಸತತ ಬರದಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ. ಕೃಷಿ ಬಿತ್ತನೆ ಈವರೆಗೆ ಕೇವಲ ಶೇ.31ರಷ್ಟಾಗಿದೆ. ಹಾಗಾಗಿ ರೈತರಿಗೆ ಬರ ಪರಿಹಾರ, ಬೆಳೆ ವಿಮೆ ಸೌಲಭ್ಯಗಳು ಸಿಗಬೇಕು. ಈಗಿನ ಸ್ಥಿತಿಯಲ್ಲಿ ರೈತರು ಅನುಸರಿಸಬೇಕಾದ ಬೇಸಾಯ, ಅಲ್ಪಾವಧಿ ಬೆಳೆಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಶುದ್ಧ ನೀರಿನ ಘಟಕ ದುರಸ್ತಿ ಮಾಡಿ: ಜಿಲ್ಲೆಯಲ್ಲಿ ಹಲವು ಕುಡಿಯುವ ನೀರಿನ ಯೋಜನೆಗಳನ್ನು ಮೊದಲ ಆದ್ಯತೆಯಲ್ಲಿ ಪೂರ್ಣಗೊಳಿಸಬೇಕು. ಕೆಲವು ಶುದ್ಧ ಕುಡಿಯು ನೀರಿನ ಘಟಕಗಳು ಹಾಳಾಗಿದ್ದು, ತಕ್ಷಣ ದುರಸ್ತಿಪಡಿಸಿ ಅಲ್ಲದೆ ಜಲ ಸಂರಕ್ಷಣೆ ಯೋಜನೆಗಳ ಬಗ್ಗೆ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಸಣ್ಣ ನೀರಾವರಿ ಇಲಾಖೆಗಳು ಉದ್ಯೋಗ ಖಾತರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ರೈತರಿಗೆ ನೆರವಾಗಬೇಕು. ಜಲ ಸಂವರ್ಧನೆ, ಜಲ ಮರುಪೂರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಆಲೂಗೆಡ್ಡೆ ಬೆಳೆಗಾರರಿಗೆ ನೀಡಬೇಕಾಗಿರುವ ಸಬ್ಸಿಡಿ ಹಣವನ್ನು ತ್ವರಿತವಾಗಿ ವಿತರಿಸಬೇಕು ಎಂದು ನಿರ್ದೇಶನ ನೀಡಿದರು.

ಬಯೋಮೆಟ್ರಿಕ್‌ ಕಡ್ಡಾಯಗೊಳಿಸಿ: ನ್ಯಾಯ ಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್‌ ಯಂತ್ರಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಆ ಮೂಲಕವೇ ಆಹಾರ ಪದಾರ್ಥಗಳನ್ನು ಸಮರ್ಪಕವಾಗಿ ಫ‌ಲಾನುಭವಿಗಳಿಗೆ ವಿತರಿಸಬೇಕು ಎಂದು ಶ್ವೇತಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಅವರು ಶ್ರವಣಬೆಳಗೊಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಪರಿಸ್ಥಿತಿಯನ್ನು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಪ್ರಭಾರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ಮಾತನಾಡಿ, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲಾ ಇಲಾಖೆಗಳು ಭದ್ರತೆಯಿಂದ ಶ್ರಮಿಸಬೇಕು ಯೋಜನೆಗಳ ಕಾಲಬದ್ಧ ಅನುಷ್ಠಾನ, ವ್ಯವಸ್ಥಿತ ಮಾಹಿತಿ, ಶಿಕ್ಷಣ, ಸಂವಹನ ಕಾರ್ಯಗಳನ್ನು ಮಾಡಬೇಕು ಎಂದು ಎಂ.ಎಲ್.ವೈಶಾಲಿ ಹೇಳಿದರು.

ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿ:

ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟ ಇನ್ನಷ್ಟು ಸುಧಾರಣೆಯಾಗಬೇಕು ಎಸ್‌ಎಸ್‌ಎಲ್ಸಿ ಫ‌ಲಿತಾಂಶದಲ್ಲಿ ಮೊದಲ ಸ್ಥಾನ ಕಾಯ್ದುಕೊಳ್ಳಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಭದ್ರತೆಗೆ ಮೊದಲ ಆದ್ಯತೆ ನೀಡಬೇಕು, ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಉತ್ತಮಪಡಿಸಿ ಕಲಿಕಾ ವಾತಾವರಣ ಉತ್ತಮಗೊಳಿಸಬೇಕು. ಎಲ್ಲಾ ಹಾಸ್ಟೆಲ್ಗಳಲ್ಲಿ ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆಯೂ ತರಬೇತಿ ಒದಗಿಸಿ ವಿಶೇಷ ತರಗತಿಗಳನ್ನು ನಡೆಸಿ ಸ್ಮಾರ್ಟ್‌ ಕ್ಲಾಸ್‌ಗಳನ್ನು ಅಳವಡಿಸಿ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.